AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನಲ್ಲಿ ಮುಳುಗಿ ಮೃತಪಟ್ಟವರನ್ನ ಉಪ್ಪಿನಿಂದ ಬದುಕಿಸಬಹುದಾ? ಮೂಢನಂಬಿಕೆಯ ಸತ್ಯಾಸತ್ಯತೆ ಅನಾವರಣ

ಮೃತದೇಹವನ್ನು ಉಪ್ಪಿನಲ್ಲಿ ಮುಚ್ಚಿ ಬದುಕಿಸಲು ಪ್ರಯತ್ನಿಸಿದ ಘಟನೆಗ ವರದಿಯಾಗಿದೆ. ಹೌದು..ಬಾಗಲಕೋಟೆಯಲ್ಲಿ 18 ತಿಂಗಳ ಮಗುವೊಂದು ಸಂಪ್​​​ಗೆ ಬಿದ್ದು ಸಾವನ್ನಪ್ಪಿದೆ. ಆದ್ರೆ, ಸಾವನ್ನಪ್ಪಿದ ನಂತರ ಮಗುವನ್ನು ಬದುಕಿಸಲು ಪೋಷಕರು ನಡೆಸಿದ ವಿಲಕ್ಷಣ ಪ್ರಯತ್ನ ಮತ್ತು ಮೂಢನಂಬಿಕೆಯ ನಡೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸೋಷಿಯಲ್ ಮೀಡಿಯಾದ ವೈರಲ್ ಪೋಸ್ಟ್​​ ಗಳನ್ನ ನಂಬಿ ಈ ರೀತಿ ಮಾಡಿದ್ರೂ ಸಹ ಮಗು ಬದುಕುಳಿದಿಲ್ಲ. ಇದರೊಂದಿಗೆ ನೀರಿನಲ್ಲಿ ಮುಳುಗಿ ಮೃತಪಟ್ಟವರನ್ನು ಮತ್ತೆ ಬದುಕಿಸಬಹುದು ಎಂಬ ವೈರಲ್ ಮೆಸೇಜ್​ನ ಸತ್ಯಾಸತ್ಯತೆ ಅನಾವಣವಾಗಿದೆ.

ನೀರಿನಲ್ಲಿ ಮುಳುಗಿ ಮೃತಪಟ್ಟವರನ್ನ ಉಪ್ಪಿನಿಂದ ಬದುಕಿಸಬಹುದಾ? ಮೂಢನಂಬಿಕೆಯ ಸತ್ಯಾಸತ್ಯತೆ ಅನಾವರಣ
Ameena
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jun 08, 2026 | 8:53 PM

Share

ಬಾಗಲಕೋಟೆ, (ಜೂನ್ 08): ನೀರಿನಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಯನ್ನು ನಾಲ್ಕು ಗಂಟೆಗಳವರೆಗೆ ಉಪ್ಪಿನಲ್ಲಿ ಮುಚ್ಚಿದರೆ ಮತ್ತೆ ಬದುಕಿಸಬಹುದು ಎನ್ನುವ ಮೂಢನಂಬಿಕೆ ಸಂದೇಶ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಲೇ ಇರುತ್ತೆ. ಆದ್ರೆ, ಇದರ ಸತ್ಯಾಸತ್ಯೆ ಬಾಗಲಕೋಟೆಯ ಮಗುವಿನ ಮೇಲೆ ಪ್ರಯೋಗ ಮಾಡಿದಾಗ ಅನಾವರಣಗೊಂಡಿದೆ. ಹೌದು…ಬಾಗಲಕೋಟೆಯ (Bagalkot) ನವನಗರದಲ್ಲಿ 18 ತಿಂಗಳ ಹೆಣ್ಣು ಮಗುವೊಂದು ನೀರಿನ ಟ್ಯಾಂಕ್‌ಗೆ ಬಿದ್ದು ಮೃತಪಟ್ಟಿದೆ.  ಮಗು ಅಮೀನಾ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಎದುರಿನ ಮನೆಯವರ ಸಂಪ್‌ಗೆ ಬಿದ್ದಿದೆ.  ಆದರೆ, ಮಗುವನ್ನು ಬದುಕಿಸಬಹುದು ಎಂಬ ಮೂಢನಂಬಿಕೆಯಿಂದ, ಪೋಷಕರು ಆಕೆಯ ದೇಹವನ್ನು ಗಂಟೆಗಟ್ಟಲೆ ಉಪ್ಪಿನಲ್ಲಿ ಮುಳುಗಿಸಿಟ್ಟಿದ್ದಾರೆ. ಆದರೂ ಮಗು ಮಾತ್ರ ಬದುಕಲಿಲ್ಲ. ಕೊನೆಗೆ ವೈದ್ಯರ ಸೂಚನೆ ಮೇರೆಗೆ ಮಗುವಿನ ಮೃತ ದೇಹವನ್ನು ಹೊರತೆಗೆಲಾಯ್ತು.

ಮುಖ್ಯಾಂಶಗಳು

  • ನೀರಿನ ಟ್ಯಾಂಕ್​ನಲ್ಲಿ ಮುಳುಗಿ 18 ತಿಂಗಳ ಹೆಣ್ಣು ಮಗು ಸಾವು
  • ಬಾಗಲಕೋಟೆ ಸೆಕ್ಟರ್ ನಂಬರ್ 38ರಲ್ಲಿ ಅಮೀನಾ ಪಠಾಣ್ ಸಾವು
  • ಉಪ್ಪಿನಲ್ಲಿ ಮುಳುಗಿಸಿಟ್ಟರೆ ಮಗು ಬದುಕುತ್ತೆ ಎಂಬ ನಂಬಿಕೆ ಹಿನ್ನೆಲೆ
  • 2 ತಾಸಿಗೂ ಹೆಚ್ಚು ಕಾಲ ಉಪ್ಪಿನಲ್ಲಿ ಮುಳುಗಿಸಿಟ್ಟರೂ ಬದುಕದ ಮಗು

ಮಗು ಅಮೀನಾ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಎದುರಿನ ಮನೆಯವರ ಸಂಪ್‌ಗೆ ಬಿದ್ದಿದೆ. ಮಗು ನೀರಿನಲ್ಲಿ ಮುಳುಗಿದ್ದನ್ನು ತಡವಾಗಿ ಗಮನಿಸಲಾಗಿದ್ದು, ಅಷ್ಟರಲ್ಲೇ ಮಗು ಕೊನೆಯುಸಿರೆಳೆದಿದೆ. ಘಟನಾ ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಆಯುಷ್ಮಾನ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದು: ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ

ಉಪ್ಪಿನಲ್ಲಿಟ್ಟರೇ ಮಗು ಬದುಕುತ್ತೆ ಎಂಬ ನಂಬಿಕೆ

ಮಗು ಮೃತಪಟ್ಟಿದ್ದರೂ ಅದನ್ನು ಒಪ್ಪಿಕೊಳ್ಳದ ಕುಟುಂಬಸ್ಥರು, ಮಗುವನ್ನು ಹೇಗಾದರೂ ಮಾಡಿ ಬದುಕಿಸಲೇಬೇಕು ಎಂದು ಮುಂದಾಗಿದ್ದಾರೆ. ನೀರಿನಲ್ಲಿ ಮುಳುಗಿ ಸತ್ತವರನ್ನು ಉಪ್ಪಿನಲ್ಲಿ ಮುಳುಗಿಸಿ ಇಟ್ಟರೆ ಮತ್ತೆ ಜೀವ ಬರುತ್ತದೆ ಎಂಬ ಬಲವಾದ ನಂಬಿಕೆ ಅವರದ್ದಾಗಿತ್ತು. ಹೀಗಾಗಿ, ಮಗುವಿನ ಮುಖವನ್ನು ಮಾತ್ರ ಹೊರಗಿಟ್ಟು, ಇಡೀ ದೇಹವನ್ನು ಉಪ್ಪಿನಲ್ಲಿ ಮುಳುಗಿಸಿ ಇಟ್ಟಿದ್ದಾರೆ. ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿಯ ಬಳಿಯೇ ಮಗುವನ್ನು ಉಪ್ಪಿನಲ್ಲಿ ಮುಳುಗಿಸಿ ಇಟ್ಟಿದ್ದ ಪೋಷಕರು, ಮಗುವಿನ ಕಿವಿಯ ಬಳಿ ಮೊಬೈಲ್‌ನಲ್ಲಿ ಕುರಾನ್ ಪ್ರಾರ್ಥನೆಯನ್ನು ಹಾಕಿ ಬದುಕಿಸಲು ಇನ್ನಿಲ್ಲದ ಪ್ರಯತ್ನ ಮಾಡಿದ್ದಾರೆ. ಸರಿಸುಮಾರು ಎರಡು ತಾಸಿಗೂ ಅಧಿಕ ಕಾಲ ಮಗುವಿನ ದೇಹವನ್ನು ಉಪ್ಪಿನಲ್ಲೇ ಇಟ್ಟಿದ್ದರು. ಆದರೆ ಯಾವುದೇ ಪವಾಡಗಳು ನಡೆಯದಿದ್ದಾಗ ಮತ್ತು ಮಗುವಿನಲ್ಲಿ ಯಾವುದೇ ಚಲನೆ ಕಾಣಿಸದಿದ್ದಾಗ ಪೋಷಕರು ನಿರಾಶೆಗೊಂಡಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಶವ ಹೊರಕ್ಕೆ

ಎರಡು ಗಂಟೆಗಳ ನಂತರ ಸ್ಥಳದಲ್ಲಿದ್ದ ವೈದ್ಯರು ಪೋಷಕರಿಗೆ ತಿಳಿಹೇಳಿ, ವೈದ್ಯಕೀಯ ಸಲಹೆಗಳನ್ನು ನೀಡಿದ್ದಾರೆ. ವೈದ್ಯರ ಮಾತನ್ನು ಕೇಳಿದ ಕುಟುಂಬಸ್ಥರು ಕೊನೆಗೂ ಮಗುವಿನ ದೇಹವನ್ನು ಉಪ್ಪಿನಿಂದ ಹೊರಗೆ ತೆಗೆದಿದ್ದಾರೆ. ಬಳಿಕ ಮಗುವಿನ ಮರಣೋತ್ತರ ಪರೀಕ್ಷೆ ಮಾಡಿ ಪೋಷಕರಿಗೆ ಹಸ್ತಾಂತರಿಸಲಾಯ್ತು. ನಂತರ ಪೋಷಕರು ಮೃತದೇಹವನ್ನು ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ಮಾಡಿ ಮುಗಿಸಿದ್ದಾರೆ.

ಇದರೊಂದಿಗೆ ಸಾರ್ವಜನಿಕರಲ್ಲಿ ಮನವಿ ಏನೆಂದರೆ ಅರೇಬರೇ ಜೀವ ಇದ್ದಾಗಲು ಇಂತಹ ಮೂಢನಂಬಿಕೆಗಳನ್ನು ನಂಬಿಕೊಂಡು ಇಂತಹ ದುಸ್ಸಾಹಸಕ್ಕೆ ಮುಂದಾಗಬಾರದು.  ಜೀವ ಉಳಿಸಲು ವೈದ್ಯಕೀಯವಾಗಿ ಪ್ರಾಥಮಿಕ ಚಿಕಿತ್ಸೆ ನೀಡಬೇಕು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:52 pm, Mon, 8 June 26

Follow Us
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?
ಪುಟ್ಟ ಮಗಳ ಜೀವ ಉಳಿಸಿ ಪ್ರಾಣಬಿಟ್ಟ ಫುಟ್ಬಾಲ್ ಆಟಗಾರನ ಪತ್ನಿ
ಪುಟ್ಟ ಮಗಳ ಜೀವ ಉಳಿಸಿ ಪ್ರಾಣಬಿಟ್ಟ ಫುಟ್ಬಾಲ್ ಆಟಗಾರನ ಪತ್ನಿ
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್