ಬಾಲಗಕೋಟೆ: ಗೂಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಟ್ರ್ಯಾಕ್ಟರ್ಗೆ ಸಿಲುಕಿ ಬಾಲಕ ಸಾವು
ಬಾಗಲಕೋಟೆ ಜಿಲ್ಲೆಯ ಜಮಖಂಡಿ(jamkhandi) ಪಟ್ಟಣದ ಎಪಿಎಂಸಿ ಬಳಿ ಗೂಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಟ್ರ್ಯಾಕ್ಟರ್ಗೆ ಸಿಲುಕಿ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಈ ವೇಳೆ ಗೂಳಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗೆ ಸಿಲುಕಿ ಬಾಲಕ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಜಮಖಂಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಗಕೋಟೆ, ಜ.31: ಗೂಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಟ್ರ್ಯಾಕ್ಟರ್ಗೆ ಸಿಲುಕಿ ಬಾಲಕ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ(jamkhandi) ಪಟ್ಟಣದ ಎಪಿಎಂಸಿ ಬಳಿ ನಡೆದಿದೆ. ನಿಖಿಲ್ ಕೋಳಿ(13) ಮೃತ ವ್ಯಕ್ತಿ. ಗೂಳಿ ರಸ್ತೆಯಲ್ಲಿ ಕಾದಾಡುತ್ತ ವಿದ್ಯಾರ್ಥಿ ನಿಖಿಲ್ ಮೇಲೆ ನುಗ್ಗಿಬಂದಿದೆ. ಈ ವೇಳೆ ಗೂಳಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗೆ ಸಿಲುಕಿ ಬಾಲಕ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಜಮಖಂಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಖಾಲಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ
ಬೆಂಗಳೂರು: ನಗರದ ಹೊರವಲಯದ ನೈಸ್ ರಸ್ತೆಯ ಅಂಜನಾಪುರ ಟೌನ್‌ಶಿಪ್ ಬಳಿ ಖಾಲಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಲಾರಿಯಲ್ಲಿ ಖಾಲಿ ಸಿಲಿಂಡರ್ ಇದ್ದಿದ್ದರಿಂದ ಅನಾಹುತ ತಪ್ಪಿದ್ದು, ಎರಡು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಲಾರಿ ಚಾಲಕ ಕೆಳಗಿಳಿದು ಪಾರಾಗಿದ್ದಾನೆ.
ಇದನ್ನೂ ಓದಿ:ಇಂಜೆಕ್ಷನ್ ರಿಯಾಕ್ಷನ್ನಿಂದ 7 ವರ್ಷದ ಬಾಲಕ ಸಾವು ಆರೋಪ, ಅಂಬ್ಯುಲೆನ್ಸ್ ನಲ್ಲಿಯೇ ಹೆರಿಗೆ ತಾಯಿ ಮಗು ಸೇಫ್
ಉರುಳಿ ಬಿದ್ದ ಟೈಲ್ಸ್ ತುಂಬಿದ್ದ ಲಾರಿ; ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು
ಕೊಪ್ಪಳ: ಯಲಬುರ್ಗಾ ತಾಲೂಕಿನ ಸಂಕನೂರ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೈಲ್ಸ್ ತುಂಬಿದ್ದ ಲಾರಿ ಉರುಳಿಬಿದ್ದಿದ್ದು, ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಜೇಂದ್ರಗಡದಿಂದ ಹುಬ್ಬಳ್ಳಿ ಕಡೆ ತೆರಳುತ್ತಿದ್ದ ಲಾರಿ ಇದಾಗಿದ್ದು, ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೈಕ್ಗಳ ನಡುವೆ ಡಿಕ್ಕಿ; ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು
ಆನೇಕಲ್: ಬೈಕ್ಗಳ ನಡುವೆ ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ದೊಡ್ಡ ತಿಮ್ಮಸಂದ್ರ ಬಳಿ ನಡೆದಿದೆ. ಸೃಜನ್ ಗೌಡ(16) ಶಾಲೆ ಮುಗಿಸಿಕೊಂಡು ವಿದ್ಯಾರ್ಥಿಗಳು ಬೈಕ್ನಲ್ಲಿ ಸಾಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯಾರ್ಥಿ ಕೆಳಗೆ ಬಿದ್ದಿದ್ದಾನೆ. ಅದೇ ಸಂದರ್ಭದಲ್ಲಿ ಕೆಳಗೆ ಬಿದ್ದಿದ್ದ ವಿದ್ಯಾರ್ಥಿ ಮೇಲೆ ಸ್ಕೂಲ್ ಬಸ್ ಹರಿದಿದೆ. ಈ ಕುರಿತು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:45 pm, Wed, 31 January 24