ಬಾಗಲಕೋಟೆ: ಕಾರು, ಗೂಡ್ಸ್ ವಾಹನ ನಡುವೆ ಮುಖಾಮುಖಿ ಡಿಕ್ಕಿ-ಇಬ್ಬರು ಧಾರುಣ ಸಾವು
ಬಾಗಲಕೋಟೆ(Bagalakote)ಜಿಲ್ಲೆಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ಬಳಿ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ(Accident) ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆ, ಅ.17: ಕಾರು ಹಾಗೂ ಗೂಡ್ಸ್ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ(Accident) ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ(Bagalakote)ಜಿಲ್ಲೆಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ಬಳಿ ನಡೆದಿದೆ. ಸೀತಮ್ಮ (60) ಹಾಗೂ ಗಿರೆಮ್ಮ ರಾಟೋಡ್(55) ಮೃತರು. ಇವರನ್ನು ಮಸ್ಕಿ ತಾಲೂಕಿನ ಮಾರಲದಿನ್ನಿ ತಾಂಡಾ ನಿವಾಸಿಗಳು ಎಂದು ಗುರುತಿಸಲಾಗಿದೆ. ಇನ್ನುಳಿದಂತೆ 8 ಜನರಿಗೆ ಗಂಭೀರ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರು ಗೂಡ್ಸ್ ವಾಹನದಲ್ಲಿ ಗುಳೇದಗುಡ್ಡ ದೇವಸ್ಥಾನಕ್ಕೆ ಹೊರಟಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಇನ್ನು ಬಲೂನ್ ಓಪನ್ ಆದ ಹಿನ್ನೆಲೆ ಕಾರು ಚಾಲಕನಿಗೆ ಏನು ಆಗಿಲ್ಲ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರು, ಲಾರಿ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮಹಿಳೆ ಸಾವು
ಉತ್ತರ ಕನ್ನಡ: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹೊರವಲಯ ಮೂಢ ಭಟ್ಕಳ ಬೈಪಾಸ್ ಬ್ರಿಡ್ಜ್ ಬಳಿ ನಡೆದಿದೆ. ರೀಟಾ ಡಿಸೋಜಾ(34) ಮೃತ ರ್ದುದೈವಿ. ಇವರು ಸ್ಯಾಂಟ್ರೋ ಕಾರಿನಲ್ಲಿ ಉಡುಪಿಯಿಂದ ಗೋವಾ ಕಡೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಭಟ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ನಿನ್ನೆಯಷ್ಟೇ ಕೆಎಸ್ಆರ್ಟಿಸಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತದಲ್ಲಿ ಐದು ಜನ ಸಾವನ್ನಪ್ಪಿ, ನಾಲ್ವವರಿಗೆ ಗಂಭೀರ ಗಾಯಗಳಾಗಿದ್ದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿತ್ತು. ಇನ್ನ ದುರ್ಘಟನೆಯಲ್ಲಿ ಕೊನೆಯುಸಿರೆಳೆದವರನ್ನು ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎನ್ನಲಾಗಿತ್ತು. ಇನ್ನು ಅವರು ಗದಗದ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿತ್ತು. ಅಫಜಲಪುರದ ಸಚಿನ್ ಕತ್ತಿ 31, ದ್ರಾಕ್ಷಾಯಣಿ ಕತ್ತಿ-30 ಹಾಗೂ ಮಾದನ ಹಿಪ್ಪರಗಿಯ ಶಿವಕುಮಾರ್ ಕಲಶೆಟ್ಟಿ 50, ಚಂದ್ರಕಲಾ 42, ರಾಣಿ-32 ಕೊನೆಯುಸಿರೆಳೆದಿದ್ದರು. ಇದೀಗ ಬಾಗಲಕೋಟೆ ಹಾಗೂ ಕಾರವಾರದಲ್ಲಿ ನಡೆದಿದೆ.
ರಾಜ್ಯದ ಮತ್ತಷ್ಟು ಅಪಘಾತ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ