ಬಾಗಲಕೋಟೆಯಲ್ಲಿ ಮತ್ತೊಂದು ಸಾಮೂಹಿಕ ಆತ್ಮಹತ್ಯೆ: ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ

ಕಳೆದ ವಾರ ಅಷ್ಟೇ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ತಾಯಿ -ಮಕ್ಕಳ ಸಾಮೂಹಿಕ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಇಂದು ಮತ್ತೊಂದು ತಾಯಿ ಮಕ್ಕಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬಾಗಲಕೋಟೆಯಲ್ಲಿ ಮತ್ತೊಂದು ಸಾಮೂಹಿಕ ಆತ್ಮಹತ್ಯೆ: ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ
ಪ್ರಾತಿನಿಧಿಕ ಚಿತ್ರImage Credit source: tribuneindia.com
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 17, 2023 | 9:02 PM

ಬಾಗಲಕೋಟೆ: ಇತ್ತೀಚೆಗೆ ಆತ್ಮಹತ್ಯೆ(suicide) ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ತಾಯಿಯೊಬ್ಬಳು ತನ್ನ ಇಬ್ಬರು ಪುತ್ರಿಯರ ಜತೆ ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಹನುಮಾಪುರದಲ್ಲಿ ನಡೆದಿತ್ತು. ಅಲ್ಲದೇ ಹಾಸನದಲ್ಲೂ ಸಹ ತಾಯಿ ತನ್ನ ಮಕ್ಕಳಿಗೆ ವಿಷ ಉಣಿಸಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಳು. ಅಲ್ಲದೇ ಬಾಲಕೋಟೆ ಜಿಲ್ಲೆ ತಿಮ್ಮಪೂರ ಗ್ರಾಮದಲ್ಲಿ ಕಳೆದ ವಾರ ಅಷ್ಟೇ ತಾಯೊಯೊಬ್ಬರು ತನ್ನ ಮೂವರು ಪುತ್ರಿಯರೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಪ್ರಕರಣಗಳು ಮಾಸುವ ಮುನ್ನವೇ ಬಾಗಲಕೋಟೆ ಜಿಲ್ಲೆಯಲ್ಲಿ ಇಂದು(ಜನವರಿ 17) ಮತ್ತೊಂದು ಸಾಮೂಹಿಕ ಆತ್ಮಹತ್ಯೆ  ಪ್ರಕರಣ ವರದಿಯಾಗಿದೆ. ಹೌದು.. ತಾಯಿಯೊಬ್ಬಳು ತನ್ನ ಇಬ್ಬರು ಪುತ್ರಿಯರ ಜತೆ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಬಾಗಲಕೋಟೆ (Bagalkot) ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಗ್ರಾಮ ಬಳಿಯ ಘಟಪ್ರಭಾ ನದಿಗೆ ಹಾರಿ ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: Bagalkot: ಮೂವರು ಪುತ್ರಿಯರಿಗೆ ವಿಷವುಣಿಸಿ ತಾನೂ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಉಮಾ ಮಾಸರೆಡ್ಡಿ(45), ಐಶ್ವರ್ಯ(20), ಸೌಂದರ್ಯ(18) ಮೃತ ದುರ್ವೈವಿಗಳು.  ಸೂಳಿಬಾವಿ ನಿವಾಸಿಗಳಾದ ಉಮಾ ಮಾಸರೆಡ್ಡಿ ಹಾಗೂ ಪುತ್ರಿಯರಾದ ಐಶ್ವರ್ಯ(20), ಸೌಂದರ್ಯ(18) ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಕಮತಗಿ ಬಳಿ ಸೇತುವೆಯಿಂದ ನದಿಗೆ ಹಾರಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಮಲಪ್ರಭಾ ನದಿಯಿಂದ ಶವಗಳನ್ನು ಹೊರತೆಗೆದರು. ಈ ಬಗ್ಗೆ ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುರಿಗಳ ಮೈ ತೊಳೆಯಲು ಹೋಗಿದ್ದ ದಂಪತಿ ಸಾವು

ತುಮಕೂರು: ಕುರಿಗಳ ಮೈ ತೊಳೆಯಲು ಕಟ್ಟೆಗಿಳಿದ ದಂಪತಿ ದುರಂತ ಅಂತ್ಯಕಂಡಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮುಗಳೂರು ಗೊಲ್ಲರಹಟ್ಟಿ ಬಳಿಯ ಕಟ್ಟೆಯಲ್ಲಿ ನಡೆದಿದೆ. ಕಟ್ಟೆಯಲ್ಲಿ ಕುರಿಗಳ ಮೈತೊಳೆಯುತ್ತಿದ್ದ ವೇಳೆ ದಂಪತಿ ಮುಳುಗಿ ಸಾವನ್ನಪ್ಪಿದ್ದಾರೆ. ಜುಂಜೇಗೌಡ(30), ಶಿವಲಿಂಗಮ್ಮ(27) ಮೃತ ದಂಪತಿ.

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ