ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ, ನಾಲ್ವರು ವಿದ್ಯಾರ್ಥಿಗಳ ಸಾವು

ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿದ್ದು, ನಾಲ್ಕು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಎಂಟಕ್ಕೂ ಅಧಿಕ ಮಕ್ಕಳಿಗೆ ಗಾಯಗಳಾಗಿವೆ. ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ಮಧ್ಯರಾತ್ರಿ 12 ಗಂಟೆಗೆ ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿಗಳು ಕವಟಗಿ ಗ್ರಾಮದ ಮೂಲದವರು ಎಂದು ತಿಳಿದು ಬಂದಿದೆ.

ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ, ನಾಲ್ವರು ವಿದ್ಯಾರ್ಥಿಗಳ ಸಾವು
ಅಪಘಾತ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ

Updated on:Jan 29, 2024 | 10:03 AM

ಬಾಗಲಕೋಟೆ, ಜನವರಿ 29: ಶಾಲಾ ಬಸ್ (School Bus) ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿದ್ದು, ಓರ್ವ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಮೃಪಟ್ಟಿರುವ ಘಟನೆ ಜಮಖಂಡಿ (Jamakandi) ತಾಲೂಕಿನ ಅಲಗೂರು ಗ್ರಾಮದ ಬಳಿ ಮಧ್ಯರಾತ್ರಿ 12 ಗಂಟೆಗೆ ಸಂಭವಿಸಿದೆ. ಎಂಟಕ್ಕೂ ಅಧಿಕ ಮಕ್ಕಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರ ಕಡಕೋಳ (17), ಶ್ವೇತಾ (13), ಗೋವಿಂದ (13), ಬಸವರಾಜ (17) ಮೃತ ದುರ್ದೈವಿಗಳು. ಮೃತ ವಿದ್ಯಾರ್ಥಿಗಳು ಕವಟಗಿ ಗ್ರಾಮದ ಮೂಲದವರು ಎಂದು ತಿಳಿದು ಬಂದಿದೆ. ಮೃತರು ಆಲಗೂರು ಗ್ರಾಮದ ಬಳಿ ಇರುವ ಶ್ರೀ ವರ್ಧಮಾನ ಮಾಹವೀರ ಅಲ್ಪಾಂಖ್ಯಾ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮುಗಿಸಿಕೊಂಡು ಕವಟಗಿ ಗ್ರಾಮದ‌ ಕಡೆ ಶಾಲಾ ಬಸ್​ನಲ್ಲಿ ಹೊರಡುವಾಗ ದುರಂತ ಸಂಭವಿಸಿದೆ.

ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಶಾಸಕ ಜಗದೀಶ್ ಗುಡಗುಂಟಿ ಭೇಟಿ ನೀಡಿದರು. ಈ ವೇಳೆ ಮೃತ ಮಕ್ಕಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹಾಗೇ ಮಾಜಿ ಶಾಸಕ ಆನಂದ ನ್ಯಾಮಗೌಡ ಕೂಡ ಆಸ್ಪತ್ರೆಗೆ ಭೇಟಿ ನೀಡಿದರು.  ಕುಟುಂಬಸ್ಥರಿಗೆ ಪರಿಹಾರ ಕೊಡಿಸುವುದಾಗಿ ಇಬ್ಬರೂ ನಾಯಕರು​​ ಭರವಸೆ ನೀಡಿದರು.

4 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ, 22 ಮಕ್ಕಳಿಗೆ ಗಾಯಗಳಾಗಿವೆ

ಪ್ರಕರಣ ಸಂಬಂಧ  ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ರೆಡ್ಡಿ ಮಾತನಾಡಿ,  ಮಧ್ಯರಾತ್ರಿ 12 ಗಂಟೆಗೆ ಆಲಗೂರು ಬಳಿ ದುರ್ಘಟನೆ ನಡೆದಿದೆ. ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ, 22 ಮಕ್ಕಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಜಮಖಂಡಿಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ವಿಜಯಪುರಕ್ಕೆ ರವಾನೆ ಮಾಡಲಾಗಿದೆ. ಅಪಘಾತ ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಗದಗ: ಸರ್ಕಾರಿ ಬಸ್​-ಲಾರಿ ನಡುವೆ ಅಪಘಾತ; ಇಬ್ಬರು ದುರ್ಮರಣ

ಶಾಲಾ ಬಸ್ ಚಾಲಕ ಮತ್ತು ಟ್ರ್ಯಾಕ್ಟರ್ ಚಾಲಕನನ್ನು ವಿಚಾರಣೆ ಮಾಡುತ್ತೇವೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಟ್ರ್ಯಾಕ್ಟರ್ ಚಾಲಕರಿಗೆ ಟ್ರಾಫಿಕ್ಸ್ ರೂಲ್ಸ್ ಬಗ್ಗೆ ಅರಿವು ಮೂಡಿಸ್ತಿದ್ದೇವೆ. ಆದರೂ ಸಹ ಇಂತಹ ದುರ್ಘಟನೆ ಸಂಭವಿಸಿದ್ದು ದುರದೃಷ್ಟಕರ. ಶಾಲಾ ಬಸ್​ಗಳಲ್ಲಿ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ತುಂಬಬೇಡಿ. ಬೈಕ್‌ ಸವಾರರು ಪ್ರಯಾಣಿಸುವ ವೇಳೆ, ಹೆಲ್ಮೇಟ್ ಧರಿಸಿ ಎಂದು ಮನವಿ ಮಾಡಿದರು.

ಭೀಕರ ರಸ್ತೆ ಅಪಘಾತ, ನಾಲ್ವರು ದುರ್ಮರಣ

ಕಳೆದ ನಾಲ್ಕು ದಿನಗಳ ಹಿಂದೆ ಇದೇ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಬಳಿಯ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದರು. ಕಾಮಾಕ್ಷಿ ಬಡಿಗೇರ(30), ತುಕಾರಾಮ ತಳೇವಾಡ(30) ಮಲ್ಲು ಪೂಜಾರಿ(25), ಕಲ್ಲು ಕವಟಗಿ(35) ಮೃತ ದುರ್ದೈವಿಗಳು. ಬಾದಾಮಿ ಬನಶಂಕರಿ ಜಾತ್ರೆಗೆ ಹೋಗಿ, ವಾಪಸ್ ತಮ್ಮ ಊರಿಗೆ ಹೋಗುವಾಗ ಅನಗವಾಡಿ ಗ್ರಮದ ಬಳಿ ಚಾಲಕನ ನಿಯಂತ್ರ ತಪ್ಪಿ ಕಾರು ನಿಂತಿದ್ದ ಟ್ರ್ಯಾಕ್ಟರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿತ್ತು. ಓರ್ವ ಮಹಿಳೆ ಸೇರಿಂದತೆ ನಾಲ್ವರು ಸ್ಥಳದಲ್ಲೆ ಸಾವೀಗಿಡಾಗಿದ್ದರು. ಮೃತರು ಬಸವನಬಾಗೇವಾಡಿ ತಾಲೂಕಿನ ಹೊನಗನಳ್ಳಿ ಮೂಲದವರು ಎಂದು ತಿಳಿದುಬಂದಿತ್ತು. ಬೀಳಗಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:40 am, Mon, 29 January 24

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ