Karnataka Covid Unlock: ಮದ್ಯ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಿದ ರಾಜ್ಯ ಸರ್ಕಾರ

ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್​ಡೌನ್ ಮುಂದುವರೆಯಲಿದೆ.

  • Updated On - 8:46 pm, Thu, 10 June 21 Edited By: Ghanashyam D M | ಡಿ.ಎಂ.ಘನಶ್ಯಾಮ
Karnataka Covid Unlock: ಮದ್ಯ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಿದ ರಾಜ್ಯ ಸರ್ಕಾರ
ಸಂಗ್ರಹ ಚಿತ್ರ

ಕೊವಿಡ್​ ಪ್ರಕರಣ ಕಡಿಮೆ ಇರುವ ಪ್ರದೇಶಗಳಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಬಂಧಗಳನ್ನು ಸಡಿಲ ಮಾಡಿದೆ. ಜೂನ್​ 14ರಿಂದ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಸರ್ಕಾರ ಹೇಳಿದೆ. ಇದರ ಜತೆಗೆ ಮದ್ಯ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಕೊವಿಡ್​ ನಿಯಂತ್ರಣಕ್ಕೆ ಹೇರಿದ್ದ ಲಾಕ್​ಡೌನ್​ ಸಂದರ್ಭದಿಂದಲೂ ರಾಜ್ಯದಲ್ಲಿ ಬೆಳಗ್ಗೆ 10 ಗಂಟೆವರೆಗೆ ಮಾತ್ರ ಮದ್ಯ ಖರೀದಿಗೆ ಅವಕಾಶ ಇತ್ತು. ಆದರೆ, ಈಗ ಸರ್ಕಾರ ಈ ಅವಧಿಯನ್ನು 2 ಗಂಟೆವರೆಗೆ ವಿಸ್ತರಣೆ ಮಾಡಿದೆ. ಜೂನ್​ 14ರಿಂದ ಹೊಸ ನಿಯಮ ಜಾರಿಗೆ ಬರಲಿದೆ.

ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್​ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಜೂನ್​ 10ರಂದು ಘೋಷಿಸಿದ್ದಾರೆ.

ಕೆಎಸ್​ಆರ್​ಟಿಸಿ, ಬಿಎಂಟಿಸಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ನಿರ್ಮಾಣ ಚಟುವಟಿಕೆ ಆರಂಭಿಸಲು ಅನುಮತಿ ಇದೆ. ಸಿಮೆಂಟ್, ಸ್ಟೀಲ್ ಅಂಗಡಿ ತೆಗೆಯಲು ಅವಕಾಶವಿದೆ. ಎಲ್ಲ ಕಾರ್ಖಾನೆ ಶೇ 50 ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯನಿರ್ವಹಣೇಗೆ ಅವಕಾಶವಿದೆ. ಗಾರ್ಮೆಂಟ್ಸ್ ಶೇ.30 ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು. ಇದರ ಜತೆಗೆ ಮದ್ಯ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುವುದು. ಬಾರ್  ಮತ್ತು  ರೆಸ್ಟೋರೆಂಟ್, ವೈನ್ ಸ್ಟೋರ್, ಎಂಎಸ್ಐಎಲ್​ಗಳಲ್ಲಿ ಮಧ್ಯಾಹ್ನ 2ರವರೆಗೆ ಪಾರ್ಸೆಲ್ ಅವಕಾಶವಿದೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: Karnataka Unlock: 11 ಜಿಲ್ಲೆಗಳಲ್ಲಿ ಮಾತ್ರ ಲಾಕ್​ಡೌನ್ ವಿಸ್ತರಣೆ; ಇನ್ನುಳಿದ ಜಿಲ್ಲೆಗಳು 14ರಿಂದ ಅನ್​ಲಾಕ್: ಸಿಎಂ ಯಡಿಯೂರಪ್ಪ ಘೋಷಣೆ

Bengaluru Unlock : ಸೋಮವಾರ ಬೆಳಗ್ಗೆ 6 ಗಂಟೆಯಿಂದಲೇ ಬೆಂಗಳೂರು ಅನ್​ಲಾಕ್