ಬಾಗಲಕೋಟೆಯಲ್ಲಿ ಮತ್ತೊಂದು ಅಕ್ರಮ ಬಹಿರಂಗ; ಕಾರ್ಮಿಕ ಇಲಾಖೆ ಗುತ್ತಿಗೆ ನೌಕರನ ವಿರುದ್ಧ 2 ಕೋಟಿ ಹಣ ದುರ್ಬಳಕೆ ಆರೋಪ

ಕಾರ್ಮಿಕ ಇಲಾಖೆ ಗುತ್ತಿಗೆ ನೌಕರ ದ್ಯಾವಪ್ಪ ತಳವಾರ ವಿರುದ್ಧ ಹಣ ದುರ್ಬಳಕೆ ಆರೋಪ ಕೇಳಿ ಬಂದಿದೆ. 2 ಕೋಟಿ 83 ಲಕ್ಷ 400 ರೂ. ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಫೆ.29ರಂದು ಬಾಗಲಕೋಟೆ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಸದ್ಯ ಆರೋಪಿಗಳು ಜಾಮೀನಿನ ಮೇಲೆ ಹೊರ ಬಂದಿದ್ದಾರೆ.

ಬಾಗಲಕೋಟೆಯಲ್ಲಿ ಮತ್ತೊಂದು ಅಕ್ರಮ ಬಹಿರಂಗ; ಕಾರ್ಮಿಕ ಇಲಾಖೆ ಗುತ್ತಿಗೆ ನೌಕರನ ವಿರುದ್ಧ 2 ಕೋಟಿ ಹಣ ದುರ್ಬಳಕೆ ಆರೋಪ
ಕಾರ್ಮಿಕ ಇಲಾಖೆ ಗುತ್ತಿಗೆ ನೌಕರನ ವಿರುದ್ಧ 2 ಕೋಟಿ ಹಣ ದುರ್ಬಳಕೆ ಆರೋಪ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಆಯೇಷಾ ಬಾನು

Updated on:Jul 16, 2024 | 12:18 PM

ಬಾಗಲಕೋಟೆ, ಜುಲೈ.16: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 14-15 ತಿಂಗಳಷ್ಟೇ ಆಗಿದೆ. ಆದರೆ ಮೇಲಿಂದ ಮೇಲೆ ಒಂದಲ್ಲಾ ಒಂದು ಹಗರಣಗಳು ಸದ್ದು ಮಾಡುತ್ತಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ ಕಾಂಗ್ರೆಸ್​ಗೆ ಕಪ್ಪು ಚುಕ್ಕಿಯಾಗಿತ್ತು. ಇದೀಗ ಬಾಗಲಕೋಟೆ (Bagalkot) ಜಿಲ್ಲೆಯ್ಲೇ 2 ಹಗರಣಗಳು ಬೆಳಕಿಗೆ ಬಂದಿವೆ. ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ 2,47,73,999 ರೂ. ಹಣ ಅಕ್ರಮ ವರ್ಗಾವಣೆ ಹಗರಣ ಬಯಲಾದ ಬಳಿಕ ಇದೀಗ ಮತ್ತೊಂದು ಹಗರಣ ಬಹಿರಂಗವಾಗಿದೆ. ಕಾರ್ಮಿಕ ಇಲಾಖೆಯಲ್ಲೂ ಹಣ ಲೂಟಿ ಮಾಡಿದ್ದಾರೆ. ಕಾರ್ಮಿಕ ಇಲಾಖೆ ಗುತ್ತಿಗೆ ನೌಕರ ದ್ಯಾವಪ್ಪ ತಳವಾರ ವಿರುದ್ಧ ಹಣ ದುರ್ಬಳಕೆ ಆರೋಪ ಕೇಳಿ ಬಂದಿದೆ. 2 ಕೋಟಿ 83 ಲಕ್ಷ 400 ರೂ. ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಬಾಗಲಕೋಟೆ ಕಾರ್ಮಿಕ ಇಲಾಖೆಯಲ್ಲಿ ಕಾರ್ಯನಿರ್ವಾಹಕನಾಗಿದ್ದ ದ್ಯಾವಪ್ಪ ಎನ್ನುವವರು 2 ಕೋಟಿ 83 ಲಕ್ಷ ಹಣವನ್ನು ಫಲಾನುಭವಿಗಳ ಹೆಸರಲ್ಲಿ ಇತರೆ ಖಾತೆಗಳಿಗೆ ವರ್ಗಾಯಿಸಿ ವಂಚನೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಅಕ್ರಮದ ಬಗ್ಗೆ ಮಾಹಿತಿ ಸಿಕ್ಕಿದ್ದು 2 ಕೋಟಿ 83 ಲಕ್ಷ ಪೈಕಿ 37 ಲಕ್ಷ ಹಣ ವಾಪಸ್ ಪಡೆಯಲಾಗಿದೆ. ಹಾಗೂ ಬ್ಯಾಂಕ್​ ಖಾತೆಯಲ್ಲಿದ್ದ 76 ಲಕ್ಷ ಹಣವನ್ನು CEN​ ಪೊಲೀಸರು ಫ್ರೀಜ್​​​​​ ಮಾಡಿದ್ದಾರೆ. 8 ತೊಲೆ ಚಿನ್ನ, 1 ಲಕ್ಷ ಹಣ, 8 ಲಕ್ಷ ಮೌಲ್ಯದ ಜಮೀನು ಪತ್ರ ಜಪ್ತಿ ಮಾಡಲಾಗಿದೆ.

ಕಾರ್ಮಿಕ ಇಲಾಖೆಯಲ್ಲಿ ಗುತ್ತಿಗೆಯ ಆಧಾರದ ಮೇಲೆ ಕಾರ್ಯನಿರ್ವಾಹಕನಾಗಿದ್ದ ದ್ಯಾವಪ್ಪ ತಳವಾರ 2023 ಆಗಸ್ಟ್​​ರಿಂದ 2024 ಫೆಬ್ರವರಿ ನಡುವೆ ಅಕ್ರಮ ಎಸಗಿದ್ದು ಈಗ ಅಕ್ರಮ ಬಹಿರಂಗವಾಗಿದೆ. ಕಟ್ಟಡ ಕಾರ್ಮಿಕರ ಮದುವೆ, ವೈದ್ಯಕೀಯ ಸಹಾಯಧನ ದುರ್ಬಳಕೆ, ಬೇರೆ ಖಾತೆಗಳಿಗೆ ಅನುದಾನ ಮಂಜೂರು ಮಾಡಿಸಿಕೊಂಡು ಹಣ ನುಂಗಿರೋದು ಪತ್ತೆಯಾಗಿದೆ.

ಇದನ್ನೂ ಓದಿ: ಬಾಗಲಕೋಟೆ: ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯಲ್ಲೇ ಮತ್ತೊಂದು ಹಗರಣ, ಪ್ರವಾಸೋದ್ಯಮ ಇಲಾಖೆಯ ಹಣ ಅಕ್ರಮ ವರ್ಗಾವಣೆ

ಬೇರೆಯವರ ಬ್ಯಾಂಕ್ ಖಾತೆ ನೀಡಿ ಫಲಾನುಭವಿ ಪಟ್ಟಿ ಸಿದ್ದಪಡಿಸಿಕೊಂಡು ನಂತರ ಕಾರ್ಮಿಕ ಅಧಿಕಾರಿಗಳ ಸಹಿ ಪಡೆದು ಬೇರೆ ಖಾತೆಗಳಿಗೆ ಅನುದಾನ ಮಂಜೂರು ಮಾಡಿಸಿಕೊಂಡು ಆ ಹಣವನ್ನು ಡ್ರಾ ಮಾಡಿಸಿಕೊಂಡು ವಂಚನೆ ಮಾಡಿದ್ದಾನೆ. 37,12,837 ರೂ ವಂಚನೆ ಹಿನ್ನೆಲೆ ಎಫ್​ಐಆರ್ ದಾಖಲಾಗಿದೆ. ಎಫ್​ಐಆರ್ ನಲ್ಲಿ ಇದಷ್ಟೇ ಅಲ್ಲದೇ ಕೋಟ್ಯಾಂತರ ರೂ ತನ್ನ ಹಾಗೂ ಇತರೆ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾನೆಂದು ಉಲ್ಲೇಖಿಸಲಾಗಿದೆ. ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಸಂಬಂಧಿಕರ, ಆಪ್ತರ ಖಾತೆ ಸೇರಿಸಿ 37,12,837 ರೂ ವಂಚನೆ ಮಾಡಿದ್ದು ತನ್ನ ಖಾತೆ ಹಾಗೂ ಸಂಬಂಧಿಕರಾದ ಭಾಗೀರಥಿ ತಳವಾರ, ಹನುಮಾನ ತಳವಾರ, ಪಲ್ಲವಿ ತಳವಾರ ಖಾತೆಗೆ ಹಣ ಬಿಡುಗಡೆ ಮಾಡಿದ್ದಾನೆ. ನಂತರ ಆ ಹಣ ಪಡೆದು ಕಾರ್ಮಿಕ ಇಲಾಖೆಗೆ ಮೋಸ ಮಾಡಿದ್ದಾನೆ ಎಂದು ಉಲ್ಲೇಖಿಸಲಾಗಿದೆ.

ಅಕ್ರಮದ ಬಗ್ಗೆ ಉಪಕಾರ್ಮಿಕ ಆಯುಕ್ತ ಡಿ.ಜಿ.ನಾಗೇಶ್ ದೂರು ಹಿನ್ನೆಲೆ ಆರೋಪಿ ದ್ಯಾವಪ್ಪ ತಳವಾರ, ಸಂಬಂಧಿಕರಾದ ಭಾಗೀರಥಿ ತಳವಾರ, ಹನುಮಾನ ತಳವಾರ, ಪಲ್ಲವಿ ತಳವಾರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಫೆ.29ರಂದು ಬಾಗಲಕೋಟೆ ಸಿಇಎನ್ ಠಾಣೆಯಲ್ಲಿ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಸದ್ಯ ನಾಲ್ವರು ಆರೋಪಿಗಳು ಜಾಮೀನಿನ ಮೇಲೆ ಹೊರ ಬಂದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:18 pm, Tue, 16 July 24

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ