AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್​ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ

ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಕಬ್ಬಿನ ಕಟಾವಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಎರಡು ವರ್ಷದ ಮಗು ಸೇರಿದಂತೆ ಕಬ್ಬು ಕಟಾವಿಗೆ ಬಂದಿದ್ದ ಮಹಾರಾಷ್ಟ್ರ ಮೂಲದ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಜಮಖಂಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಬಾಗಲಕೋಟೆಯಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್​ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ
ಟ್ರ್ಯಾಕ್ಟರ್​ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Feb 21, 2026 | 11:37 AM

Share

ಬಾಗಲಕೋಟೆ, ಫೆಬ್ರವರಿ 21: ಜಿಲ್ಲೆಯ ಜಮಖಂಡಿ (Jamakhandi) ತಾಲೂಕಿನ ಕಟ್ಟೆ ಕೆರೆ ಸಮೀಪ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಕಬ್ಬು ಕಟಾವು ಮಾಡಿ ಹಿಂತಿರುಗುತ್ತಿದ್ದ ಕಾರ್ಮಿಕರು

ಮೃತರನ್ನು ಮನೀಷ್ ಪಾಂಡೆ (23), ಹಲಕಿ ಪಾಂಡೆ (2), ಲಕ್ಷ್ಮಿ ಚಿರಮಡಿ (27) ಹಾಗೂ ರೇಖಾ ಭೂಕೆ ಎಂದು ಗುರುತಿಸಲಾಗಿದೆ. ಮೃತರು ಮಹಾರಾಷ್ಟ್ರ ರಾಜ್ಯದ ಯುವತ್ಮಾಳ್ ಜಿಲ್ಲೆಯ ಬೂಸಾ ತಾಲ್ಲೂಕಿನ ಗುಪವಾಡಿ ನಿವಾಸಿಗಳಾಗಿದ್ದು, ಕಬ್ಬಿನ ಕಟಾವು ಕೆಲಸಕ್ಕಾಗಿ ಜಮಖಂಡಿ ಭಾಗಕ್ಕೆ ಆಗಮಿಸಿದ್ದರು ಎನ್ನಲಾಗಿದೆ.

ಹೆಚ್ಚಿನ ಮಾಹಿತಿಗೆ ವೀಡಿಯೋ ನೋಡಿ

ಎಸ್ಪಿ ಸಿದ್ಧಾರ್ಥ್​ ಹೇಳಿದ್ದೇನು?

ಘಟನೆ ಕುರಿತು ಪ್ರತಿಕ್ರಿಯಿಸಿರುವ ಎಸ್ಪಿ , ಇಂದು ನಸುಕಿನ ಜಾವ 2 ಗಂಟೆ ಸುಮಾರಿಗೆ ಅಪಘಾತವಾಗಿದೆ. ಮಹಾರಾಷ್ಟ್ರದಿಂದ ಕಬ್ಬು ಕಾಟವು ಮಾಡಲು ಬಂದಿದ್ದ ಕೂಲಿ‌ ಕಾರ್ಮಿಕರು ಪ್ರಯಾಣ ಮಾಡುತ್ತಿದ್ದ ಜೋಡಿ ಟ್ರಾಲಿಗಳು ಟ್ರ್ಯಾಕ್ಟರ್  ಪಲ್ಟಿಯಾಗಿದ್ದವು. ಒಂದು ಟ್ರಾಲಿ‌ ಮೇಲೆ ಮತ್ತೊಂದು ಟ್ರಾಲಿ ಮುಗುಚಿ ಬಿದ್ದ ಕಾರಣ ಅವಘಡ ನಡೆದಿದೆ. ಘಟನೆಯಲ್ಲಿ ನಾಲ್ಕು ಜನರು ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದಿದ್ದಾರೆ.

ಮಹಾರಾಷ್ಟ್ರದಿಂದ ಕಬ್ಬು ಕಟಾವು ಕೆಲಸಕ್ಕೆ ಬೆಳಗಾವಿ ಜಿಲ್ಲೆಯ ಯರಗಟ್ಟಿಗೆ ಬಂದಿದ್ದ ಇವರು ಇಂದು‌ (ಫೆ.21) ನಸುಕಿನ ಜಾವ ವಾಪಸ್ ತಮ್ಮೂರಿಗೆ ಹೊರಟಿದ್ದರು. ಈ ಹಿನ್ನೆಲೆ ಜಮಖಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣದ ದಾಖಲಾಗಿದ್ದು ಮುಂದಿನ ತನಿಖೆ ನಡೆಯುತ್ತಿದೆ ಎಂದು ಘಟನಾ ಸ್ಥಳಕ್ಕೆ  ಭೇಟಿ ನೀಡಿದ ಎಸ್ಪಿ ಸಿದ್ಧಾರ್ಥ್​ ಗೋಯಲ್ ಮಾಹಿತಿ ನೀಡಿದ್ದಾರೆ. ಜಮಖಂಡಿ ಪೊಲೀಸರು ಅಪಘಾತ ನಡೆದ ಸ್ಥಳದ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:47 am, Sat, 21 February 26

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್