Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ನಾಲ್ವರು ಸೋದರರ ಕೊಲೆ; ವಿಜಯಪುರದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಪ್ರಕರಣ ದಾಖಲು

ಇಂದಿನ ಅಪರಾಧ ಜಗತ್ತಿನ ಸುದ್ದಿಗಳನ್ನು ನೀವಿಲ್ಲಿ ಓದಬಹುದು

ಬಾಗಲಕೋಟೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ನಾಲ್ವರು ಸೋದರರ ಕೊಲೆ; ವಿಜಯಪುರದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಪ್ರಕರಣ ದಾಖಲು
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on: Aug 28, 2021 | 8:54 PM

ಬಾಗಲಕೋಟೆ: ಜಮೀನಿಗೆ ಸಂಬಂಧಿಸಿದ ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ನಾಲ್ವರು ಸಹೋದರರನ್ನು ಹತ್ಯೆಗೈದ ದುರ್ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮಧುರಖಂಡಿಯಲ್ಲಿ ನಡೆದಿದೆ. ಸೋದರರಾದ ಹನುಮಂತ ಉದಗಟ್ಟಿ(45), ಮಲ್ಲಪ್ಪ ಉದಗಟ್ಟಿ (35), ಬಸಪ್ಪ ಉದಗಟ್ಟಿ (37), ಈಶ್ವರ ಉದಗಟ್ಟಿ(35) ಹತ್ಯೆಗೀಡಾದವರು. ತೋಟದ ಮನೆಯೊಂದರಲ್ಲಿ ನಾಲ್ವರು ಸಹೋದರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಜಮಖಂಡಿ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದುಬರಬೇಕಿದೆ.

ವಿಜಯಪುರದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ವಿಜಯಪುರ: ಅಪ್ರಾಪ್ತ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರವೆಸಗಿದ ದುರ್ಘಟನೆ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆದಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈಕುರಿತು ಅಪ್ರಾಪ್ತ ಬಾಲಕಿಯ ತಂದೆ ಪ್ರಕರಣ ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ಯುವಕ ದೇವಿಂದ ಸಂಗೋಗಿ ಪರಾರಿಯಾಗಿದ್ದಾನೆ ಎಂಬ ಮಾಹಿತಿ ತಿಳಿದುಬಂದಿದೆ. ಸಿಂದಗಿ ಪೊಲೀಸರು ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ: 

ಸಿಎಂ ಬೊಮ್ಮಾಯಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲೇ 13 ಜನರ ಕಿಸೆಗೆ ಬಿತ್ತು ಕತ್ತರಿ! 1.50 ಲಕ್ಷ ಕಳ್ಳತನದ ಆರೋಪ

Afghanistan Natural Resources: ಅಫ್ಘಾನಿಸ್ತಾನದಲ್ಲಿ ಅಗಾಧ ಖನಿಜ ಸಂಪತ್ತು ಲೆಕ್ಕಕ್ಕೆ ಸಿಕ್ಕಲ್ಲ, ಕೈಗೆ ದಕ್ಕಲ್ಲ ಏಕೆ ಗೊತ್ತಾ?

(Bagalakote Murder of four brothers Vijayapura Rape on minor girl)

50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ
ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ