AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳವೆ ಬಾವಿಗೆ ಬಿದ್ದು ಬಾಲಕ ಮೃತಪಟ್ಟರೂ ಎಚ್ಚೆತ್ತುಕೊಳ್ಳದ ಬಾಗಲಕೋಟೆ ಜಿಲ್ಲಾಡಳಿತ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜುಂಜರವಾಡ, ವಿಜಯಪುರ ಜಿಲ್ಲೆಯ ನಾಗಠಾಣ ಎರಡು ಸ್ಥಳದಲ್ಲಿ ಇಬ್ಬರು ಬಾಲಕಿಯರು ಕೊಳಬೆ ಬಾವಿಗೆ ಸಿಲುಕಿ ಮೃತಪಟ್ಟಿದ್ದರು. ಬಾಗಲಕೋಟೆಯಲ್ಲಿ ಬಾಲಕ ತಿಮ್ಮಣ್ಣ ಕೊಳವೆ ಬಾವಿಗೆ ಬಲಿಯಾಗಿದ್ದ.

ಕೊಳವೆ ಬಾವಿಗೆ ಬಿದ್ದು ಬಾಲಕ ಮೃತಪಟ್ಟರೂ ಎಚ್ಚೆತ್ತುಕೊಳ್ಳದ ಬಾಗಲಕೋಟೆ ಜಿಲ್ಲಾಡಳಿತ
ಕೊಳವೆ ಬಾವಿ
TV9 Web
| Edited By: sandhya thejappa|

Updated on: Aug 22, 2021 | 2:39 PM

Share

ಬಾಗಲಕೋಟೆ: ಜಿಲ್ಲೆಯಲ್ಲಿ 2014ರಲ್ಲಿ ನಡೆದ ಕೊಳವೆ ಬಾವಿ ದುರಂತ ಇಡೀ ದೇಶದ ಗಮನ ಸೆಳೆದಿತ್ತು. ಅಂದು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಸೂಳಿಕೇರಿ ಗ್ರಾಮದಲ್ಲಿ ತಿಮ್ಮಣ್ಣ ಎಂಬ ಆರು ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದು ಸಾವನ್ನಪ್ಪಿದ್ದ. ತಮ್ಮ ಹೊಲದಲ್ಲಿ ತೆರೆದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಬಾಲಕನಿಗಾಗಿ ಜಿಲ್ಲಾಡಳಿತ ಹತ್ತು ದಿನಗಳ ಕಾಲ ಕಾರ್ಯಾಚರಣೆ ನಡೆಸಿತ್ತು. ಆದರೆ ಬಾಲಕ ಮಾತ್ರ ಕೊನೆಗೂ ಬದುಕಿ ಬರಲಿಲ್ಲ. ಈ ದುರಂತ ಇಡೀ ರಾಜ್ಯ, ದೇಶದ ಗಮನ ಸೆಳೆದಿತ್ತು. ಎಲ್ಲರೂ ಬಾಲಕ ಬದುಕಿ ಬರಲಿ ಎಂದು ಪ್ರಾರ್ಥನೆ ಮಾಡಿದ್ದರು. ಆದರೆ ಬಾಲಕ ಮಾತ್ರ ಬದುಕಿ ಬರಲೇ ಇಲ್ಲ.

ಅಲ್ಲದೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜುಂಜರವಾಡ, ವಿಜಯಪುರ ಜಿಲ್ಲೆಯ ನಾಗಠಾಣ ಎರಡು ಸ್ಥಳದಲ್ಲಿ ಇಬ್ಬರು ಬಾಲಕಿಯರು ಕೊಳಬೆ ಬಾವಿಗೆ ಸಿಲುಕಿ ಮೃತಪಟ್ಟಿದ್ದರು. ಬಾಗಲಕೋಟೆಯಲ್ಲಿ ಬಾಲಕ ತಿಮ್ಮಣ್ಣ ಕೊಳವೆ ಬಾವಿಗೆ ಬಲಿಯಾಗಿದ್ದ. ಇಷ್ಟಾದರೂ ಬಾಗಲಕೋಟೆ ಜಿಲ್ಲಾಡಳಿತ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಇಂದಿಗೂ ಅಲ್ಲಲ್ಲಿ ತೆರೆದ ಕೊಳವೆ ಬಾವಿಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ.

ಸಾರ್ವಜನಿಕ ಸ್ಥಳದಲ್ಲೇ ರಾಕ್ಷಸನಂತೆ ಬಾಯಿ ತೆರೆದಿರುವ ಕೊಳವೆ ಬಾವಿ ಜಿಲ್ಲೆಯಲ್ಲಿ 2014ರಂದು ನಡೆದ ಕೊಳವೆ ಬಾವಿ ಮಹಾದುರಂತದ ನಂತರ ಇಡೀ ರಾಜ್ಯಾದ್ಯಂತ ತೆರೆದ ಕೊಳವೆ ಬಾವಿ ಮುಚ್ಚುವ ಅಭಿಯಾನ ನಡೆದಿತ್ತು. ಆದರೆ ಈಗ ರಬಕವಿ ಬನಹಟ್ಟಿ ತಾಲೂಕಿನ ತೇರದಾಳ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಸಾರ್ವಜನಿಕ ಸ್ಥಳದಲ್ಲಿ ತೆರೆದ ಕೊಳವೆ ಬಾವಿ ಕಂಡುಬಂದಿದೆ. ಕಳೆದ ಒಂದು ವರ್ಷದಿಂದ ಇದೇ ಸ್ಥಿತಿಯಲ್ಲಿದ್ದು, ಇದನ್ನು ಮುಚ್ಚುವ ಕೆಲಸವನ್ನು ಪುರಸಭೆ ಅಧಿಕಾರಿಗಳು, ಸಿಬ್ಬಂದಿ ಮಾಡುತ್ತಿಲ್ಲ. ಈ ಸ್ಥಳ ಜನನಿಬಿಡ ಸ್ಥಳವಾಗಿದ್ದು, ಚಿಕ್ಕ ಮಕ್ಕಳು ಕೂಡ ಈ ಜಾಗದಲ್ಲಿ ಓಡಾಡುತ್ತಾರೆ. ಹೀಗಿದ್ದರೂ ಅದನ್ನು ಮುಚ್ಚುವ ಕೆಲಸ ಮಾಡದೆ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ.

ಈ ಬಗ್ಗೆ ಸ್ಥಳೀಯರು ಈಗಾಗಲೇ ಅನೇಕ ಬಾರಿ ಪುರಸಭೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ತೆರೆದ ಕೊಳವೆ ಬಾವಿ ಮುಚ್ಚಿ ಅಂತ ಮನವಿ ಮಾಡಿದ್ದಾರೆ. ಆದರೆ ಪುರಸಭೆ ಸಿಬ್ಬಂದಿ ಈ ಬಗ್ಗೆ ಗಮನಹರಿಸಿಲ್ಲ. ನಮ್ಮ ಜಿಲ್ಲೆಯಲ್ಲೇ ಒಂದು ಘಟನೆ ನಡೆದಿದೆ. ಆದರೂ ಅಧಿಕಾರಿಗಳು ಕೇರ್ ಮಾಡುತ್ತಿಲ್ಲ. ಕೂಡಲೆ ಕೊಳವೆ ಬಾವಿ ಮುಚ್ಚಬೇಕು. ಏನಾದರೂ ಅನಾಹುತ ನಡೆದರೆ ಅದಕ್ಕೆ ಪುರಸಭೆ ಅಧಿಕಾರಿಗಳೆ ಹೊಣೆ. ಆದಷ್ಟು ಬೇಗ ಇದನ್ನು ಮುಚ್ಚಿ ಅನಾಹುತ ತಪ್ಪಿಸಿ ಅಂತ ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ

ದೆಹಲಿಯಿಂದ ಬೆಂಗಳೂರಿಗೆ ವಾಪಸ್; ಶನಿವಾರ, ಭಾನುವಾರ ಯಾವ ED ಕಚೇರಿ ತೆರೆದಿರುತ್ತೆ ಎಂದ ಜಮೀರ್

ನೀರಾವರಿ ಯೋಜನೆಗಳ ಜಾರಿಗೆ ತೊಡೆ ತಟ್ಟಿದ ದೇವೇಗೌಡ; ಜೆಡಿಎಸ್ ಸಂಘಟಿಸಲು ಕೆಲಸ ಮಾಡುತ್ತೇನೆ ಎಂದ ನಾಯಕ

(Bagalkot Administration not alerted about Borewell)

Follow Us
TV9 Web
TV9 Web

TV9 Kannada

Read More
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ