ಬಾಗಲಕೋಟೆ ಉಪಚುನಾವಣೆ: ಮೇಟಿ ಕುಟುಂಬದ ಒಳಜಗಳದಿಂದ ಕಾಂಗ್ರೆಸ್​ಗೆ ತಲೆನೋವು, ಖುದ್ದು ಸಿಎಂ ಸಭೆ ನಡೆಸಿದರೂ ಒಮ್ಮತವಿಲ್ಲ

ಮಾಜಿ ಸಚಿವ, ಶಾಸಕ ದಿವಂಗತ ಎಚ್​ವೈ ಮೇಟಿ ಕ್ಷೇತ್ರ ಬಾಗಲಕೋಟೆಯಲ್ಲಿ ಅವರ ಕುಟುಂಬದ ಒಳಜಗಳ ಈಗ ಕಾಂಗ್ರೆಸ್​ಗೆ ಕಗ್ಗಂಟಾಗಿ ಪರಿಣಮಿಸಿದೆ. ಟಿಕೆಟ್ ಗೊಂದಲ ಬಗೆಹರಿಸಲು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಬೆಂಗಳೂರಿನಲ್ಲಿ ಸಭೆ ನಡೆಸಿದ್ದರೂ ಒಮ್ಮತಕ್ಕೆ ಬರಲಾಗಿಲ್ಲ. ಇದು ಕುತೂಹಲವನ್ನು ಹೆಚ್ಚಿಸಿದ್ದು, ಕಾಂಗ್ರೆಸ್ ಮುಂದಿನ ನಡೆ ಏನಿರಲಿದೆ ಎಂಬ ಪ್ರಶ್ನೆ ಮೂಡಿದೆ.

ಬಾಗಲಕೋಟೆ ಉಪಚುನಾವಣೆ: ಮೇಟಿ ಕುಟುಂಬದ ಒಳಜಗಳದಿಂದ ಕಾಂಗ್ರೆಸ್​ಗೆ ತಲೆನೋವು, ಖುದ್ದು ಸಿಎಂ ಸಭೆ ನಡೆಸಿದರೂ ಒಮ್ಮತವಿಲ್ಲ
ಮೇಟಿ ಕುಟುಂಬದ ಒಳಜಗಳದಿಂದ ಕಾಂಗ್ರೆಸ್​ಗೆ ತಲೆನೋವು
Image Credit source: tv9
Edited By:

Updated on: Mar 20, 2026 | 11:24 AM

ಬಾಗಲಕೋಟೆ, ಮಾರ್ಚ್ 20: ಬಾಗಲಕೋಟೆ (Bagalkot) ಉಪಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಪಕ್ಷದಲ್ಲಿ ಟಿಕೆಟ್ ಬಿಕ್ಕಟ್ಟು ತೀವ್ರಗೊಂಡಿದೆ. ಮಾಜಿ ಸಚಿವ, ಶಾಸಕ ದಿ. ಎಚ್​ವೈ ಮೇಟಿ (HY Meti) ಅವರ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರ ಇನ್ನೂ ಗೊಂದಲದಲ್ಲೇ ಉಳಿದಿದೆ. ಈ ಬಿಕ್ಕಟ್ಟನ್ನು ಬಗೆಹರಿಸಲು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ (Siddaramaiah) ಮುಂದಾಗಿ ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ. ಮೇಟಿ ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿ ಒಮ್ಮತ ಸಾಧಿಸಲು ಸೂಚನೆ ನೀಡಿದರೂ, ಅಂತಿಮ ನಿರ್ಧಾರಕ್ಕೆ ಬರಲಾಗಿಲ್ಲ.

ಮೇಟಿ ಕುಟುಂಬದ ಮಕ್ಕಳಾದ ಮಲ್ಲಿಕಾರ್ಜುನ ಮೇಟಿ ಮತ್ತು ಉಮೇಶ್ ಮೇಟಿ ನಡುವೆ ತೀವ್ರ ಪೈಪೋಟಿ ಇದೆ. ಇವರಿಬ್ಬರಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ಸಹೋದರರು ಹೇಳಿಕೊಂಡಿದ್ದಾರೆ. ಆದರೆ ಕೊನೆಯ ಪುತ್ರಿ ಮಹಾದೇವಿ ಮೇಟಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಮಲ್ಲಿಕಾರ್ಜುನ ಮೇಟಿಗೆ ಟಿಕೆಟ್ ನೀಡಿದರೆ ಬಂಡಾಯಕ್ಕೆ ಇಳಿಯುವ ಸೂಚನೆ ನೀಡಿದ್ದಾರೆ.

ಮಹಾದೇವಿ ಮೇಟಿ ತಾವು ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದು, ಇಂದೇ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಅವರ ಇಚ್ಛೆಯಂತೆ ಉಮೇಶ್ ಮೇಟಿಗೆ ಟಿಕೆಟ್ ನೀಡಿದರೆ ಮಾತ್ರ ಒಮ್ಮತ ಸಾಧ್ಯ ಎಂಬ ಮಾತು ಕೇಳಿಬರುತ್ತಿದೆ.

ಇನ್ನೊಂದೆಡೆ, ಯಾರಿಗೆ ಟಿಕೆಟ್ ನೀಡಿದರೂ ಪಕ್ಷದ ಗೆಲುವಿಗಾಗಿ ಶ್ರಮಿಸುವುದಾಗಿ ಮತ್ತೊಬ್ಬ ಪುತ್ರಿ ಬಾಯಕ್ಕ ಮೇಟಿ ಹೇಳಿದ್ದಾರೆ. ಆದರೂ ಕುಟುಂಬದ ಒಳಜಗಳ ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದ್ದು, ಇದು ಬಿಜೆಪಿ ಪಾಲಿಗೆ ಲಾಭವಾಗುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: ಉಪ ಚುನಾವಣೆ: ಕಾಂಗ್ರೆಸ್​​ನಲ್ಲಿ ಬಗೆಹರಿಯದ ಟಿಕೆಟ್​​ ಕಗ್ಗಂಟು; ಮುಂದುವರಿದ ಗೊಂದಲ

ಒಟ್ಟಿನಲ್ಲಿ, ಮಲ್ಲಿಕಾರ್ಜುನ ಮೇಟಿಗೆ ಟಿಕೆಟ್ ನೀಡಿದರೆ ಬಂಡಾಯದ ಬಿಸಿ ಎದುರಾಗುವ ಸಾಧ್ಯತೆ ಇದ್ದು, ಉಮೇಶ್ ಮೇಟಿಗೆ ಟಿಕೆಟ್ ನೀಡಿದರೆ ಒಗ್ಗಟ್ಟು ಸಾಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಂತಿಮವಾಗಿ ಕಾಂಗ್ರೆಸ್ ನಾಯಕತ್ವ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us