AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಮುಸ್ಲಿಂ​ ಮುಖಂಡರು! ದಿಢೀರ್ ಬೆಳವಣಿಗೆಗೆ ಕಾರಣ ಏನು ಗೊತ್ತೇ?

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರುತ್ತಿದ್ದು, ಮುಸ್ಲಿಂ ಮುಖಂಡರು ಆಲಮಟ್ಟಿ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಕ್ಷೇತ್ರದ ಚುನಾವಣಾ ಪ್ರಚಾರಕ್ಕಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಕರೆಸುವಂತೆ ಈ ವೇಳೆ ಒತ್ತಾಯಿಸಲಾಗಿದೆ. ಸದ್ಯ ಕೇರಳದಲ್ಲಿ ಪ್ರಚಾರದಲ್ಲಿರುವ ಜಮೀರ್, ಏಪ್ರಿಲ್ 6 ಮತ್ತು 7 ರಂದು ಬಾಗಲಕೋಟೆಯಲ್ಲಿ ಅಬ್ಬರದ ಪ್ರಚಾರ ನಡೆಸುವ ಸಾಧ್ಯತೆ ಇದೆ.

ರಾತ್ರೋರಾತ್ರಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಮುಸ್ಲಿಂ​ ಮುಖಂಡರು! ದಿಢೀರ್ ಬೆಳವಣಿಗೆಗೆ ಕಾರಣ ಏನು ಗೊತ್ತೇ?
ರಾತ್ರೋರಾತ್ರಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಮುಸ್ಲಿಂ​ ಮುಖಂಡರು!Image Credit source: tv9
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Mar 31, 2026 | 8:46 AM

Share

ಬಾಗಲಕೋಟೆ, ಮಾರ್ಚ್ 31: ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರದ ಉಪಚುನಾವಣೆ (By Election) ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ, ಮುಸ್ಲಿಂ ಮುಖಂಡರು ರಾತ್ರೋರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಮುಸ್ಲಿಂ ಮುಖಂಡರು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಬಾಗಲಕೋಟೆ ಕ್ಷೇತ್ರದ ಉಪಚುನಾವಣಾ ಪ್ರಚಾರಕ್ಕಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಕರೆಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಕಾರಿನಲ್ಲೇ ಕುಳಿತು ಮುಖಂಡರೊಂದಿಗೆ ಕೆಲ ಸಮಯ ಚರ್ಚೆ ನಡೆಸಿದ್ದಾರೆ.

ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಕೇರಳದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಏಪ್ರಿಲ್ 5ರಂದು ಕರ್ನಾಟಕಕ್ಕೆ ವಾಪಸ್ ಆಗಲಿದ್ದು, ಮೊದಲು ದಾವಣಗೆರೆ ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಬಳಿಕ ಏಪ್ರಿಲ್ 6 ಮತ್ತು 7ರಂದು ಬಾಗಲಕೋಟೆ ಕ್ಷೇತ್ರದ ಪ್ರಚಾರಕ್ಕೆ ಭಾಗವಹಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಮುಖಂಡ ಸಾಧಿಕ್ ಪೈಲ್ವಾನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಜಮೀರ್ ಅಹ್ಮದ್ ಖಾನ್ ಅಸಮಾಧಾನಗೊಂಡಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡಿತ್ತು. ಆದರೆ ಈ ಆರೋಪವನ್ನು ಜಮೀರ್ ಅಹ್ಮದ್ ತಳ್ಳಿ ಹಾಕಿದ್ದು, ಪಕ್ಷದ ಅಭ್ಯರ್ಥಿಯ ಗೆಲುವಿಗೆ ತಾನು ಸಂಪೂರ್ಣವಾಗಿ ಶ್ರಮಿಸುವುದಾಗಿ ಸ್ಪಷ್ಟಪಡಿಸಿದ್ದರು.

ಆದಾಗ್ಯೂ, ಅವರು ಈ ನಡುವೆ ಕೇರಳ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವುದರಿಂದ ಕರ್ನಾಟಕ ಉಪಚುನಾವಣೆಯ ಪ್ರಚಾರದಲ್ಲಿ ಕಾಣಿಸಿಕೊಳ್ಳದಿರುವುದು ಚರ್ಚೆಗೆ ಕಾರಣವಾಗಿದೆ. ಹೀಗಾಗಿ ಬಾಗಲಕೋಟೆ ಸೇರಿದಂತೆ ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಜಮೀರ್ ಅಹ್ಮದ್ ಪ್ರಚಾರಕ್ಕೆ ಬರಬೇಕು ಎಂಬ ಬೇಡಿಕೆಯನ್ನು ಮುಸ್ಲಿಂ ಮುಖಂಡರು ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​​ನ ಆಪರೇಷನ್ ಮುಸ್ಲಿಂ ಕ್ಯಾಂಡಿಡೇಟ್ ಕಾರ್ಯಾಚರಣೆ ಫೇಲ್

ಒಟ್ಟಾರೆ ಬಾಗಲಕೋಟೆ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮುಸ್ಲಿಂ ಮುಖಂಡರ ಈ ದಿಢೀರ್ ಭೇಟಿ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:46 am, Tue, 31 March 26

Follow Us
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!