AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಉಪಚುನಾವಣೆಗೆ ಈಗಿಂದಲೇ ತಂತ್ರ, ಪ್ರತಿತಂತ್ರ ಶುರು: ಯಾರೆಲ್ಲಾ ಆಕಾಂಕ್ಷಿಗಳು ಗೊತ್ತಾ?

ಬಾಗಲಕೋಟೆ ಉಪಚುನಾವಣೆ ಕಾವೇರುತ್ತಿದೆ. ಹೆಚ್​.ವೈ.ಮೇಟಿ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಏಪ್ರಿಲ್ 9 ರಂದು ಮತದಾನ ನಡೆಯಲಿದೆ. ಈ ಮಧ್ಯೆ ಸಿಎಂ-ಡಿಸಿಎಂ ನಿನ್ನೆ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಮನೆಗೆ ಭೇಟಿ ನೀಡುವ ಮೂಲಕ ರಾಜಕೀಯ ತಂತ್ರ ಹೊಣೆದಿದ್ದಾರೆ. ಪ್ರಬಲ ಆಕಾಂಕ್ಷಿಗಳು ಕಣಕ್ಕಿಳಿಯಲು ಸಜ್ಜಾಗಿದ್ದು, ಚುನಾವಣಾ ಅಖಾಡ ರಂಗೇರಿದೆ.

ಬಾಗಲಕೋಟೆ ಉಪಚುನಾವಣೆಗೆ ಈಗಿಂದಲೇ ತಂತ್ರ, ಪ್ರತಿತಂತ್ರ ಶುರು: ಯಾರೆಲ್ಲಾ ಆಕಾಂಕ್ಷಿಗಳು ಗೊತ್ತಾ?
Bagalkot By-electionImage Credit source: google
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Mar 15, 2026 | 8:45 PM

Share

ಬಾಗಲಕೋಟೆ, ಮಾರ್ಚ್​​ 15: ಕರ್ನಾಟಕದಲ್ಲಿ ಸದ್ಯ ಎರಡು ಉಪಚುನಾವಣೆ ಮೇಲೆ‌ ಎಲ್ಲರ ಚಿತ್ತವಿದೆ. ಅದರಲ್ಲೊಂದು ‌ಹೆಚ್​ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ (Bagalkot By-election). ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕ ಘೋಷಣೆ ಮಾಡುತ್ತಿದ್ದಂತೆ ಇತ್ತ ಬಾಗಲಕೋಟೆ ಉಪಚುನಾವಣೆಗಾಗಿ ತಂತ್ರ ಪ್ರತಿತಂತ್ರಗಳು ಶುರುವಾಗಿವೆ. ಅದರಲ್ಲೂ ನಿನ್ನೆ ಸಿಎಂ, ಡಿಸಿಎಂ ಮಾಡಿದ ತಂತ್ರ ಬಾರಿ ಸಂಚಲನ ಸೃಷ್ಟಿ ಮಾಡಿದೆ.

ಬಾಗಲಕೋಟೆ ಉಪಚುನಾವಣೆ ವಿಚಾರ ಸದ್ಯ ಕಾವೇರುತ್ತಿದೆ. ಹೆಚ್​.ವೈ.ಮೇಟಿ ನಿಧನದಿಂದ ಕ್ಷೇತ್ರ ತೆರವಾಗಿದ್ದು, ಮೇಟಿಯವರ ಕನಸಿನ ಕೂಸು ಸರಕಾರಿ ಮೆಡಿಕಲ್ ಕಾಲೇಜು ಕಟ್ಟಡಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಉಪಚುನಾವಣೆ ಸಮೀಪದಲ್ಲಿ ಮಾಡಿದ ಕಾರ್ಯದ ಹಿಂದೆ ಲಾಭದ ಉದ್ದೇಶ ಅಡಗಿದೆ ಎಂದು ಬಿಂಬಿಸಲಾಗುತ್ತಿದೆ. ಅದರಲ್ಲೂ ಸಿಎಂ, ಡಿಸಿಎಂ ಬಿಜೆಪಿಗೆ ಚೆಕ್ ಮೇಟ್ ಕೊಟ್ಟಿದ್ದಾರೆ.

ಬಿಜೆಪಿ ಸಂಭಾವ್ಯ ಅಭ್ಯರ್ಥಿ ಮನೆಗೆ ಸಿಎಂ, ಡಿಸಿಎಂ ಭೇಟಿ 

ಬಿಜೆಪಿ ಸಂಭಾವ್ಯ ಅಭ್ಯರ್ಥಿ ವೀರಣ್ಣ ಚರಂತಿಮಠ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರ ಮನೆಗೆ ಸಿಎಂ, ಡಿಸಿಎಂ ಭೇಟಿ ನೀಡಿ ಚಹಾ ಕುಡಿದಿದ್ದಾರೆ. ಇದು ಉಪಚುನಾವಣೆ ಹೊತ್ತಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಕೇವಲ ಕುಶಲೋಪರಿ ಮಾತ್ರ ಎಂದು ಹೇಳಿರುವ ಮಲ್ಲಿಕಾರ್ಜುನ ಚರಂತಿಮಠ, ಚರ್ಚೆಯ ಗುಟ್ಟು ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ: ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​: ಮತದಾನ, ಫಲಿತಾಂಶ ಯಾವಾಗ?; ಇಲ್ಲಿದೆ ಮಾಹಿತಿ

ಇನ್ನೊಂದು ಕಡೆ ಈಗಾಗಲೇ ಕೇಂದ್ರ ಚುನಾವಣಾ ಆಯೋಗದಿಂದ ಬಾಗಲಕೋಟೆ ಉಪಚುನಾವಣೆಗೆ ಏಪ್ರಿಲ್ 9ರಂದು ದಿನಾಂಕ ಫಿಕ್ಸ್ ಆಗಿದೆ. ಇದರಿಂದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮತ್ತಷ್ಟು ಚುನಾವಣಾ ಚಟುವಟಿಕೆಗಳು ಕಾಂಗ್ರೆಸ್​ನಲ್ಲಿ ಗರಿಗೆದರಿವೆ. ಹೆಚ್​​ವೈ ಮೇಟಿ ಮಕ್ಕಳಾದ ಮಲ್ಲಿಕಾರ್ಜುನ ಮೇಟಿ, ಉಮೇಶ್ ಮೇಟಿ, ಮಾದೇವಿ ಮೇಟಿ, ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಕುಟುಂಬವನ್ನು ಹೊರತುಪಡಿಸಿದರೆ ಮಾಜಿ ಸಚಿವ ಅಜಯ್ ಕುಮಾರ್ ಸರನಾಯಕ್, ಗೋವಿಂದ ಬಳ್ಳಾರಿ, ರಕ್ಷಿತಾ ಈಟಿ ಸೇರಿದಂತೆ ಅನೇಕ ಪ್ರಬಲ ಆಕಾಂಕ್ಷಿಗಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಾಗಲಕೋಟೆ ಉಪಚುನಾವಣೆಯ ತಂತ್ರದ ಮೊದಲ ಹೆಜ್ಜೆ ಎಂಬಂತೆ ನಿನ್ನೆ ಭರ್ಜರಿ ಸ್ಟ್ರೋಕ್ ನೀಡಿದ್ದಾರೆ. ಬಿಜೆಪಿ ಸಂಭಾವ್ಯ ಅಭ್ಯರ್ಥಿ ವೀರಣ್ಣ ಚರಂತಿಮಠ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಭೇಟಿ ನೀಡಿದ್ದಾರೆ. ಇದು ಉಪಚುನಾವಣೆ ಹೊತ್ತಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಮಲ್ಲಿಕಾರ್ಜುನ ಚರಂತಿಮಠ ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡಿ 10 ಸಾವಿರಕ್ಕೂ ಅಧಿಕ ಮತಗಳನ್ನು ಗಳಿಸಿದ್ದರು. ನಂತರ ಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಆದರೆ ಇತ್ತೀಚಿಗೆ ಮಲ್ಲಿಕಾರ್ಜುನ ಚರಂತಿಮಠ ವಾಪಸ್ ಬಿಜೆಪಿಗೆ ಬರುತ್ತಾರೆ ಎಂಬ ಸುದ್ದಿ ಹರಡಿತ್ತು. ಈ ಬೆನ್ನಲ್ಲೇ ಸಿಎಂ, ಡಿಸಿಎಂ ಅವರ ಮನೆಗೆ ಹೋಗಿದ್ದು ಸಂಚಲನ ಸೃಷ್ಟಿದೆ.

ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು 

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಯಾವುದೇ ರೀತಿ ಪ್ರತಿಕ್ರಿಯೆ ನೀಡಲಿಲ್ಲ. ಆದರೆ ಡಿಸಿಎಂ ಡಿಕೆ ಶಿವಕುಮಾರ್ ಆದಷ್ಟು ಬೇಗ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ‌ ಮಾಡುತ್ತೇವೆ‌. ಅವರೇ ಜವಾಬ್ದಾರಿಯಾಗಿ ನಿಂತುಕೊಂಡು ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಕೆಲಸವನ್ನು ಮಾಡುತ್ತಾರೆ. ನಮ್ಮ ಸ್ನೇಹಿತರು ಬಹಳ ಒಳ್ಳೆಯವರು. ಅವರು ನಮ್ಮ ಜೊತೆ ಇರ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

ಸದ್ಯ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷಗಳು ಭರ್ಜರಿ ತಂತ್ರ ಪ್ರತಿತಂತ್ರ ಹೆಣೆಯುತ್ತಿದ್ದು, ಇದರಲ್ಲಿ ಯಾರ ತಂತ್ರ ಫಲ ನೀಡುತ್ತೋ ಚುನಾವಣೆಯೇ ಉತ್ತರಿಸಬೇಕು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು