AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಬೈ ಎಲೆಕ್ಷನ್​​: ಮೊದಲ ಚುನಾವಣೆಯಲ್ಲೇ ಗೆದ್ದು ಬೀಗಿದ ಕಾಂಗ್ರೆಸ್​​ನ ಉಮೇಶ್ ಮೇಟಿ

Bagalkot By-poll Result: ಬಹು ನಿರೀಕ್ಷಿತ ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್ ಮೇಟಿ ಜಯದ ನಗೆ ಬೀರಿದ್ದಾರೆ. ಎಚ್.ವೈ. ಮೇಟಿ ನಿಧನದಿಂದ ತೆರವಾದ ಕ್ಷೇತ್ರಕ್ಕೆ ನಡೆದಿದ್ದ ಬೈ ಎಲೆಕ್ಷನ್​​ನಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ, ಎದುರಿಸಿದ್ದ ಮೊದಲ ಚುನಾವಣೆಯಲ್ಲಿಯೇ ಕಾಂಗ್ರೆಸ್​​ ಅಭ್ಯರ್ಥಿ ವಿಜಯ ಪತಾಕೆ ಹಾರಿಸಿದ್ದಾರೆ.

ಬಾಗಲಕೋಟೆ ಬೈ ಎಲೆಕ್ಷನ್​​: ಮೊದಲ ಚುನಾವಣೆಯಲ್ಲೇ ಗೆದ್ದು ಬೀಗಿದ ಕಾಂಗ್ರೆಸ್​​ನ ಉಮೇಶ್ ಮೇಟಿ
ಗೆದ್ದು ಬೀಗಿದ ಕಾಂಗ್ರೆಸ್​​ನ ಉಮೇಶ್ ಮೇಟಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:May 04, 2026 | 12:56 PM

Share

ಬಾಗಲಕೋಟೆ, ಮೇ 04: ಹೆಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ (Bagalakot) ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ ಕ್ಷೇತ್ರವನ್ನು ಮರಳಿ ಕಾಂಗ್ರೆಸ್​ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಪೈಪೋಟಿ ನೀಡಿದ್ದರಾದರೂ ಅಂತಿಮವಾಗಿ ಸೋಲುಂಡಿದ್ದಾರೆ. ಹೆಚ್​​.ವೈ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ ಟಿಕೆಟ್​​ ನೀಡಲು ನಿರ್ಧರಿಸಿದ್ದ ಕಾಂಗ್ರೆಸ್,​​ ಮೇಟಿ ಪುತ್ರ ಉಮೇಶ್​​​​ರನ್ನು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ಉಮೇಶ್​​ ಮೇಟಿ ಅಂತಿಮವಾಗಿ ಗೆದ್ದು ಬೀಗಿದ್ದಾರೆ.

ಎಷ್ಟು ಮತಗಳ ಅಂತದರದಲ್ಲಿ ಜಯ?

ಬಿಜೆಪಿಯ ವೀರಣ್ಣ ಚರಂತಿಮಠ್​​ಗೆ ಒಟ್ಟು 76,075 ಮತಗಳು ಬಿದ್ದಿದ್ದರೆ, ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್​​ ಮೆಟಿ ಪರ 97,941 ವೋಟ್​​ ಚಲಾವಣೆ ಆಗಿದ್ದವು. ಹೀಗಾಗಿ 21,866 ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ.

ದಾಖಲೆ ಬರೆದ ಉಮೇಶ್​​ ಮೇಟಿ

ಇನ್ನು ಗೆಲುವಿನ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್​ ಮೇಟಿ ಹೊಸ ದಾಖಲೆ ಬರೆದಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ಬಾಗಲಕೋಟೆ ಕ್ಷೇತದಲ್ಲಿ ಆಭ್ಯರ್ಥಿಗಳು ಪಡೆದಿದ್ದ ಲೀಡ್ ದಾಖಲೆಯನ್ನು ಉಮೇಶ್​​ ಮೇಟಿ ಮುರಿದಿದ್ದು, 2018ರಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ 15,934 ಮತಗಳ ಅಂತರದ ಗೆಲುವೇ ಕ್ಷೇತ್ರದಲ್ಲಿ ಈವರೆಗಿನ ಅತಿದೊಡ್ಡ ಮತಗಳ ಅಂತರವಾಗಿತ್ತು.

‘ತಂದೆ ಆತ್ಮಕ್ಕೆ ಶಾಂತಿ ಸಿಕ್ಕಿದೆ’

ಬಾಗಲಕೋಟೆ ಉಪಚುನಾವಣೆಯಲ್ಲಿ ಉಮೇಶ್ ಮೇಟಿ ಜಯಭೇರಿ ಸಂಬಂಧ ಅವರ ಸಹೋದರ ಮಲ್ಲಿಕಾರ್ಜುನ ಮೇಟಿ ಟಿವಿ9 ಜೊತೆ ಸಂತಸ ಹಂಚಿಕೊಂಡಿದ್ದಾರೆ. ಇದೊಂದು ಭಾವುಕ ಕ್ಷಣವಾಗಿದ್ದು, ಈ ಗೆಲುವಿನಿಂದ ನಮ್ಮ ತಂದೆ ಆತ್ಮಕ್ಕೆ ಶಾಂತಿ ಸಿಕ್ಕ ಹಾಗಾಗಿದೆ. ನಮ್ಮ ತಂದೆ ಕೈ ಹಿಡಿದಿದ್ದ ಜನರು ಈಗ ನಮ್ಮ ಸಹೋದರನ ಕೈಯನ್ನೂ ಹಿಡಿದಿದ್ದಾರೆ. ಸಿಎಂ, ಸಚಿವರು ಮತ್ತು ಮತದಾರರಿಗೆ ಧನ್ಯವಾದ ಹೇಳೋದಾಗಿ ಅವರು ತಿಳಿಸಿದ್ದಾರೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:17 pm, Mon, 4 May 26

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More