AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ ಡಿಹೆಚ್ಓ ಡಾ. ರಾಜಕುಮಾರ ಯರಗಲ್ ಅವರ ಪುತ್ರಿ ಹಾಗೂ ಶಾಸಕ ಉಮೇಶ್ ಮೇಟಿ ಅವರ ಸೊಸೆ ಡಾ. ಅಂಕಿತಾ ಯರಗಲ್ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಾ, 'ನಮ್ಮ ಕ್ಲಿನಿಕ್'ನಿಂದ ಮಾಸಿಕ 75,000 ರೂ. ಸರಕಾರಿ ವೇತನ ಪಡೆದಿರುವ ಗಂಭೀರ ಅಕ್ರಮ ಬೆಳಕಿಗೆ ಬಂದಿದೆ. ಈ ಕುರಿತು ತನಿಖೆಗೆ ನೋಟಿಸ್ ನೀಡಲು ಇಲಾಖೆ ಮುಂದಾಗಿದೆ.

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!
ಡಾ. ಅಂಕಿತಾ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Sep 12, 2026 | 11:50 AM

Share

ಮುಖ್ಯಾಂಶಗಳು

  • ಶಾಸಕ ಉಮೇಶ್ ಮೇಟಿ ಸೊಸೆ, ಡಿಹೆಚ್ಓ ಮಗಳು ಡಾ. ಅಂಕಿತಾ ವಿರುದ್ಧ ಅಕ್ರಮ ಆರೋಪ.
  • ಎಂಡಿ ಪ್ಯಾಥಾಲಜಿ ಓದುತ್ತಾ 'ನಮ್ಮ ಕ್ಲಿನಿಕ್'ನಿಂದ ಮಾಸಿಕ 75 ಸಾವಿರ ಸರಕಾರಿ ವೇತನ ಸವಿದ ಆರೋಪ.
  • ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ವೈದ್ಯೆಯ ವೇತನ ತಡೆಹಿಡಿದು, ನೋಟಿಸ್ ನೀಡಲು ಮುಂದಾದ ಇಲಾಖೆ.

ಬಾಗಲಕೋಟೆ, ಸೆಪ್ಟೆಂಬರ್ 12: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಗಂಭೀರ ಸ್ವರೂಪದ ಅಕ್ರಮವೊಂದು ಬೆಳಕಿಗೆ ಬಂದಿದ್ದು, ಪ್ರಭಾವಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕೃಪಾಕಟಾಕ್ಷದಿಂದ ಸರಕಾರಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಾಗಲಕೋಟೆ ಶಾಸಕ ಉಮೇಶ್ ಮೇಟಿ ಅವರ ಸೊಸೆ ಹಾಗೂ ಪ್ರಸ್ತುತ ಜಿಲ್ಲಾ ಆರೋಗ್ಯ ಅಧಿಕಾರಿ (ಡಿಹೆಚ್ಓ) ಡಾ. ರಾಜಕುಮಾರ ಯರಗಲ್ ಅವರ ಪುತ್ರಿ ಡಾ. ಅಂಕಿತಾ ಯರಗಲ್ ವಿರುದ್ಧ ಈ ಗಂಭೀರ ಅಕ್ರಮದ ಆರೋಪ ಕೇಳಿಬಂದಿದೆ.

ಖಾಸಗಿ ಕಾಲೇಜಿನಲ್ಲಿ MD ಓದುತ್ತಾ ಸರಕಾರಿ ಕ್ಲಿನಿಕ್‌ನಿಂದ 75 ಸಾವಿರ ವೇತನ!

2025 ರಲ್ಲಿ ವಾಂಬೆ ಕಾಲೋನಿಯ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಡಾ. ಅಂಕಿತಾ, 2026 ರ ಮಾರ್ಚ್‌ನಲ್ಲಿ ಬಾಗಲಕೋಟೆಯ ಎಸ್.ಎನ್. ಮೆಡಿಕಲ್ ಕಾಲೇಜಿನಲ್ಲಿ ಎಂಡಿ (MD) ಪ್ಯಾಥಾಲಜಿ ಕೋರ್ಸ್‌ಗೆ ಪ್ರವೇಶ ಪಡೆದಿದ್ದರು. ಏಪ್ರಿಲ್‌ನಿಂದ ತರಗತಿಗಳು ಆರಂಭವಾಗಿದ್ದರೂ, ಅವರು ನಮ್ಮ ಕ್ಲಿನಿಕ್‌ಗೆ ಸರಿಯಾಗಿ ಹಾಜರಾಗದೆ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರಿಸುತ್ತಿದ್ದರು. ಸರಕಾರಿ ನಿಯಮಾವಳಿ ಪ್ರಕಾರ ಪೂರ್ಣಾವಧಿ ಎಂಡಿ ವ್ಯಾಸಂಗ ಮಾಡುತ್ತಿರುವಾಗ ಸರಕಾರಿ ವೈದ್ಯೆಯಾಗಿ ಕರ್ತವ್ಯ ನಿರ್ವಹಿಸಿ ವೇತನ ಪಡೆಯುವುದು ಕಾನೂನುಬಾಹಿರ. ಆದಾಗ್ಯೂ, ಪ್ರತಿ ತಿಂಗಳು 75,000 ರೂ. ಸರಕಾರಿ ವೇತನ ಪಡೆಯುತ್ತಿದ್ದರು ಎಂಬ ಸತ್ಯ ಆರೋಗ್ಯ ಇಲಾಖೆಯ ಬ್ಯಾಂಕ್ ಖಾತೆ ದಾಖಲೆಗಳಿಂದ ಬಹಿರಂಗವಾಗಿದೆ.

ಬಂದ್ ಆದ ಸ್ಥಿತಿಯಲ್ಲಿ ಕ್ಲಿನಿಕ್

ಬೆಳಿಗ್ಗೆ 9 ರಿಂದ ಸಂಜೆ 4:30 ರವರೆಗೆ ಕ್ಲಿನಿಕ್‌ನಲ್ಲಿ ಇರಬೇಕಾದ ವೈದ್ಯಾಧಿಕಾರಿ ಇಲ್ಲದ ಕಾರಣ ವಾಂಬೆ ಕಾಲೋನಿಯ ‘ನಮ್ಮ ಕ್ಲಿನಿಕ್’ ಬಹುತೇಕ ಬಂದ್ ಆದ ಸ್ಥಿತಿಯಲ್ಲಿದೆ. ಮಗಳು ಎಂಬ ಕಾರಣಕ್ಕೆ ಡಿಹೆಚ್‌ಒ ರಾಜಕುಮಾರ ಯರಗಲ್ ಎಲ್ಲವೂ ತಿಳಿದಿದ್ದರೂ ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಅಧಿಕಾರಿಗಳ ಸ್ಪಷ್ಟನೆ

ಈ ಕುರಿತು ಪ್ರತಿಕ್ರಿಯಿಸಿರುವ ಡಿಹೆಚ್ಓ ಡಾ. ರಾಜಕುಮಾರ ಯರಗಲ್, “ಈ ನೇಮಕಾತಿ ಹಿಂದಿನ ಡಿಹೆಚ್ಓ ಮಂಜುನಾಥ ದೊಡ್ಡೇರಿ ಅವಧಿಯಲ್ಲಿ ನಡೆದಿದ್ದು, ಪ್ರಸ್ತುತ ಡಾ. ಅಂಕಿತಾ ಅವರ ವೇತನವನ್ನು ತಡೆಹಿಡಿಯಲಾಗಿದೆ,” ಎಂದು ಸಮಜಾಯಿಷಿ ನೀಡಿದ್ದಾರೆ. ಮತ್ತೊಂದೆಡೆ ತಾಲೂಕು ಆರೋಗ್ಯಾಧಿಕಾರಿ (THO) ಸರಸ್ವತಿ ಮಾಗಿ ಮಾತನಾಡಿ, “ವೈದ್ಯರು ಎಂಡಿ ಓದುತ್ತಿರುವ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ, ಈ ಕುರಿತು ವಿಚಾರಣೆ ನಡೆಸಿ ನೋಟಿಸ್ ನೀಡಲಾಗುವುದು,” ಎಂದು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:50 am, Sat, 12 September 26

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!