AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರೂಣಲಿಂಗ ಪತ್ತೆ ದಂಧೆ ಬೇಧಿಸಲು ಗರ್ಭಿಣಿ ವೇಷ ತೊಟ್ಟ ಎಸಿ! ಬಾಗಲಕೋಟೆಯಲ್ಲಿ ಬಯಲಾಯ್ತು ಬೃಹತ್ ಜಾಲ

ಭ್ರೂಣಹತ್ಯೆ ಮತ್ತು ಭ್ರೂಣಲಿಂಗ ಪತ್ತೆ ಜಾಲ ಪತ್ತೆಹಚ್ಚಲು ಬಾಗಲಕೋಟೆಯಲ್ಲಿ ಅಧಿಕಾರಿಗಳು ಮಾರುವೇಷದಲ್ಲಿ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದ್ದಾರೆ. ಈ ಸಿನಿಮೀಯ ಕಾರ್ಯಾಚರಣೆ ವೇಳೆ, ಮಹಾರಾಷ್ಟ್ರದ ಜತ್ತ ತಾಲೂಕಿನ ಜಾಡರ ಬಬಲಾದಿಯ ತೋಟದ ಮನೆಯಲ್ಲಿ ಅಕ್ರಮವಾಗಿ ಇರಿಸಲಾಗಿದ್ದ ಸ್ಕ್ಯಾನಿಂಗ್ ಯಂತ್ರ ಪತ್ತೆಯಾಗಿದ್ದು, ನಿಖಿಲ್ ತೇಲಿ ಹಾಗೂ ದಾನಮ್ಮ ತೇಲಿ ಎಂಬವರನ್ನು ಬಂಧಿಸಲಾಗಿದೆ.

ಭ್ರೂಣಲಿಂಗ ಪತ್ತೆ ದಂಧೆ ಬೇಧಿಸಲು ಗರ್ಭಿಣಿ ವೇಷ ತೊಟ್ಟ ಎಸಿ! ಬಾಗಲಕೋಟೆಯಲ್ಲಿ ಬಯಲಾಯ್ತು ಬೃಹತ್ ಜಾಲ
ಅಧಿಕಾರಿಗಳು ದಾಳಿ ನಡೆಸಿರುವುದುImage Credit source: tv9
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Oct 07, 2026 | 7:32 AM

Share

ಬಾಗಲಕೋಟೆ, ಅಕ್ಟೋಬರ್ 7: ಬಾಗಲಕೋಟೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಭ್ರೂಣಹತ್ಯೆ ಜಾಲ ಪತ್ತೆಹಚ್ಚಲು ಅಧಿಕಾರಿಗಳು ಮಾರುವೇಷದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಮಹಿಳಾ ಅಧಿಕಾರಿಗಳೇ ವೇಷ ಬದಲಿಸಿಕೊಂಡು ಕಾರ್ಯಾಚರಣೆಗೆ ಇಳಿದಿದ್ದು, ಜಮಖಂಡಿ ಅಸಿಸ್ಟೆಂಟ್ ಕಮಿಷನರ್ ಶ್ವೇತಾ ಬಿಡಿಕರ್ ಗರ್ಭಿಣಿಯಂತೆ, ಆರೋಗ್ಯ ಸೌಧ ಡಿಡಿ ಡಾ. ಶೋಭಾ ನಾದಿನಿಯಂತೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಸುವರ್ಣಾ ಕುಲಕರ್ಣಿ ತಾಯಿಯಂತೆ ವೇಷ ಧರಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಮಹಾಲಿಂಗಪುರದ ಕವಿತಾ ಎಂಬ ನಕಲಿ ವೈದ್ಯೆ ನೀಡಿದ ಮಾಹಿತಿಯ ಮೇರೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಜಾಡರ ಬಬಲಾದಿ, ಕರ್ಜಗಿ ಸೇರಿದಂತೆ ಹಲವೆಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಾರುವೇಷದ ಕಾರ್ಯಾಚರಣೆ ವೇಳೆ ಜಾಡರ ಬಬಲಾದಿಯ ತೋಟದ ಮನೆಯಲ್ಲಿ ಅಕ್ರಮವಾಗಿ ಇರಿಸಲಾಗಿದ್ದ ಸ್ಕ್ಯಾನಿಂಗ್ ಯಂತ್ರ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ನಿಖಿಲ್ ತೇಲಿ ಹಾಗೂ ದಾನಮ್ಮ ತೇಲಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಕ್ಯಾನಿಂಗ್ ಯಂತ್ರ, ಎಂಟಿಬಿ ಡ್ರಗ್ಸ್ ಹಾಗೂ ಎರಡು ಇಂಜೆಕ್ಷನ್‌ಗಳು ಪತ್ತೆಯಾಗಿವೆ. ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗಿರುವ ಡಾ. ಸಂಜಯ್ ವಾಘ್ಮೋರೆ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮಾನತಾದ ಡಿಹೆಚ್​ಒ ಮತ್ತು ಪ್ರಭಾರ ಡಿಹೆಚ್​ಒ ನಡುವೆ ಜಟಾಪಟಿ

ಬಾಗಲಕೋಟೆಯಲ್ಲಿ ಡಿಹೆಚ್‌ಒ ಡಾ. ರಾಜಕುಮಾರ್ ಯರಗಲ್ ಅವರ ಪುತ್ರಿ ಅಂಕಿತಾ ಅವರ ವಿಚಾರವೂ ಈ ಪ್ರಕರಣದ ಹಿನ್ನೆಲೆಯಲ್ಲಿ ಮುನ್ನೆಲೆಗೆ ಬಂದಿದೆ. ಅಂಕಿತಾ ಯರಗಲ್ ಕಾಲೇಜಿನಲ್ಲಿ ಎಂಡಿ ವ್ಯಾಸಂಗ ಮಾಡುತ್ತಿದ್ದು, ತಾನು ವೈದ್ಯೆ ಎಂದು ವೇತನ ಪಡೆಯುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇದೀಗ ಅಮಾನತಾದ ಡಿಹೆಚ್‌ಒ ಡಾ. ರಾಜಕುಮಾರ್ ಯರಗಲ್ ಮತ್ತು ಪ್ರಭಾರ ಡಿಹೆಚ್‌ಒ ಸುವರ್ಣಾ ಕುಲಕರ್ಣಿ ನಡುವೆ ಆರೋಪ-ಪ್ರತ್ಯಾರೋಪಗಳು ಕೇಳಿಬಂದಿವೆ. ಪ್ರಭಾರ ಡಿಹೆಚ್‌ಒ ಸುವರ್ಣಾ ಅವರು ಖಾಸಗಿ ಆಸ್ಪತ್ರೆ ಹೊಂದಿದ್ದಾರೆ ಎಂದು ಅಂಕಿತಾ ಆರೋಪಿಸಿದ್ದಾರೆ. ಇದಕ್ಕೆ ಸ್ಪಷ್ಟನೆ ನೀಡಿರುವ ಸುವರ್ಣಾ, ಆಸ್ಪತ್ರೆ ತಮ್ಮ ಪತಿ ಹೆಸರಿನಲ್ಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ದಂಧೆ ಪ್ರಕರಣ: ತನಿಖೆ ಮುಕ್ತಾಯಗೊಳಿಸಿದ ಸಿಐಡಿ ತಂಡ

ರಾಜ್ಯದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಭ್ರೂಣಹತ್ಯೆಗೆ ಸಂಬಂಧಿಸಿದ ಜಾಲ ಸದ್ದಿಲ್ಲದೆ ನಡೆಯುತ್ತಿದೆ ಎಂಬ ಆರೋಪಗಳ ನಡುವೆ, ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಿಂದ ಮಹಾರಾಷ್ಟ್ರದವರೆಗೆ ವ್ಯಾಪಿಸಿರುವ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 am, Wed, 7 October 26

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಎಟಿಎಂ ಯಂತ್ರವನ್ನೇ ಕಿತ್ತು, ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾದ ಕಳ್ಳರು!
ಎಟಿಎಂ ಯಂತ್ರವನ್ನೇ ಕಿತ್ತು, ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾದ ಕಳ್ಳರು!
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ