ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು KSRTC ಬಸ್​ ಚಾಲಕ ಕಮ್​ ನಿರ್ವಾಹಕ ಆತ್ಮಹತ್ಯೆ

ಪ್ರತ್ಯೇಕ ಪ್ರಕರಣ: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬಾಗಲಕೋಟೆ ಜಿಲ್ಲೆಯ ಬೀಳಗಿಯ ಕೆಎಸ್​ಆರ್​ಟಿಸಿ ಬಸ್​ ಚಾಲಕ ಕಮ್​ ನಿರ್ವಾಹಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಚಾಮರಾಜನಗರ ವಿಭಾಗದ ವ್ಯಸ್ಥಾಪಕ ನಿರ್ದೇಶಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ

Updated on:Sep 08, 2024 | 1:18 PM

ಬಾಗಲಕೋಟೆ, ಸೆಪ್ಟೆಂಬರ್​​ 08: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ದ ಬಸ್​​ ಚಾಲಕ ಕಮ್​ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಲಕ ಕಮ್​ ನಿರ್ವಾಹಕ ಶ್ರೀಶೈಲ್​​ ವಿಭೂತಿ (45) ಬೀಳಗಿಯಲ್ಲಿನ (Bilagi) ತಮ್ಮ ಮನೆಯಲ್ಲಿ ಶನಿವಾರ ತಡರಾತ್ರಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಬೀಳಗಿ ಕೆಎಸ್​ಆರ್​ಟಿಸಿ ಬಸ್ ಡಿಪೋ ಮ್ಯಾನೇಜರ್​​​​​​​ ಮತ್ತು ಜಿಲ್ಲಾ ಕಂಟ್ರೋಲರ್​ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಬೀಳಗಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶ್ರೀಶೈಲ್​ ವಿಭೂತಿ 2022ರಲ್ಲಿ ಮೇಲಧಿಕಾರಿಗಳ ಕಿರುಕುಳದ ಬಗ್ಗೆ ಮಾತಾಡಿ​ ಕಣ್ಣೀರಿಟ್ಟಿದ್ದ ಹಳೇ ವಿಡಿಯೋ ವೈರಲ್​​​ ಆಗಿತ್ತು.

ನೌಕರರಿಗೆ ಕಿರುಕುಳ ವಿಡಿಯೋ ವೈರಲ್​​

ಚಾಮರಾಜನಗರ: ಚಾಮರಾಜನಗರ ವಿಭಾಗದ ನೌಕರರಿಗೆ ಮೇಲಾಧಿಕಾರಿಗಳು ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಘಟಕ ವ್ಯವಸ್ಥಾಪಕ ಕುಮಾರನಾಯ್ಕ ನಿರ್ವಾಹಕನ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ಲವರ್ ಜೊತೆ ರಾತ್ರಿ ಲಾಡ್ಜ್​ನಲ್ಲಿದ್ದ ಅಪ್ರಾಪ್ತ ಬಾಲಕಿ ಮನೆಗೆ ಬಂದಕೂಡಲೆ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಚಂದ್ರಶೇಖರ್ ಎಂಬುವರ ಚಾಲಕ ತಂದೆ ಮರಣ ಹೊಂದಿದ್ದರು. ಈ ಹಿನ್ನೆಲೆಯಲ್ಲಿ ನಿರ್ವಾಹಕ ಚಂದ್ರಶೇಖರ್ ಕರ್ತವ್ಯಕ್ಕೆ ಗೈರಾಗಿದ್ದರು. ಗೈರಾದ ಹಿನ್ನಲೆ ನಿರ್ವಾಹಕನಿಗೆ ವಿಭಾಗ ವ್ಯವಸ್ಥಾಪಕ ನಿರ್ದೇಶಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಪ್ರತಿ ದಿನ 400 ಕಿಮೀ ಸಂಚಾರ ಮಾಡಲೇಬೇಕು ಎಂದು ತಾಕೀತು ಮಾಡಿದ್ದಾನೆ. ನಿಗದಿತ ಕಿಮೀ ಸಂಚರಿಸದಿದ್ದರೆ, ವೇತನ ಖಡಿತ ಮಾಡುವುದಾಗಿ ಧಮ್ಕಿ ಹಾಕಿದ್ದಾನೆ. ಚಾಮರಾಜನಗರ ಘಟಕ ವ್ಯವಸ್ಥಾಪಕನ ಕಿರುಕುಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:01 pm, Sun, 8 September 24

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು