ಬಾಗಲಕೋಟೆ: ವೇತನ ಕೊಡದ ಟೋಲ್ ನಾಕಾ, ಲೇಬರ್ ಗುತ್ತಿಗೆದಾರ ಆತ್ಮಹತ್ಯೆ

ಕಳೆದ ಆರು ತಿಂಗಳ ವೇತನ ಕೊಡದೇ ಏಕಾಏಕಿ ಕೆಲಸದಿಂದ ತೆಗೆದು ಹಾಕಿದ್ದರಿಂದ ಮನನೊಂದ ಲೇಬರ್ ಗುತ್ತಿಗೆದಾರ ಆತ್ಮಹತ್ಯೆ ಮಾಡಿದ್ದಾರೆ.ಬಾಗಲಕೋಟೆ ತಾಲ್ಲೂಕಿನ ಹೊಸೂರು ಬಳಿ ಇರುವ ಬೆಂಗಳೂರು ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಟೋಲ್ ಕಚೇರಿ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಾಗಲಕೋಟೆ: ವೇತನ ಕೊಡದ ಟೋಲ್ ನಾಕಾ, ಲೇಬರ್ ಗುತ್ತಿಗೆದಾರ ಆತ್ಮಹತ್ಯೆ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ರಮೇಶ್ ಬಿ. ಜವಳಗೇರಾ

Updated on: Nov 04, 2023 | 9:01 AM

ಬಾಗಲಕೋಟೆ, (ನವೆಂಬರ್ 04): ಟೋಲ್ ನಾಕಾದಿಂದ ಪೇಮೆಂಟ್ ಕೊಡದ ಹಿನ್ನೆಲೆಯಲ್ಲಿ ಲೇಬರ್ ಗುತ್ತಿಗೆದಾರ (Labour Contractor) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ (Bagalkot)ತಾಲ್ಲೂಕಿನ ಹೊಸೂರು ಬಳಿ ಇರುವ ಬೆಂಗಳೂರು ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಟೋಲ್ ಕಚೇರಿ(bengaluru solapur highway toll plaza) ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾರೆಪ್ಪ ಪೂಜಾರ(50) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ. ಕಳೆದ ಆರು ತಿಂಗಳ ವೇತನ ಕೊಡದೇ ಏಕಾಏಕಿ ಕೆಲಸದಿಂದ ತೆಗೆದುಹಾಕಿದ್ದಕ್ಕೆ ಮನವೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬಾಗಲಕೋಟೆ ತಾಲ್ಲೂಕಿನ ‌ನಾಯನೇಗಲಿ ಗ್ರಾಮದ ನಿವಾಸಿಯಾಗಿರುವ ವಾರೆಪ್ಪ ಪೂಜಾರ, ಟೋಲ್ ನಾಕಾ ಅಡಿಯಲ್ಲಿ ಹೆದ್ದಾರಿಯಲ್ಲಿ ಗಾರ್ಡನಿಂಗ್ ನಿರ್ವಹಣೆ, ಗಿಡಗಳಿಗೆ ‌ನೀರು ಹಾಕುವುದು ಹಾಗೂ ಸ್ವಚ್ಚತಾ ಕಾಮಗಾರಿ ಮಾಡಿಸುತ್ತಿದ್ದ. ಬೊಲೆರೊ ವಾಹನಗಳು, ಟ್ಯಾಂಕರ್ ಇಟ್ಟುಕೊಂಡು ಕಾರ್ಮಿಕರ ಮೂಲಕ ಕೆಲಸ ಮಾಡಿಸುತ್ತಿದ್ದರು. ನಿಡಗುಂದಿಯಿಂದ ಹುನಗುಂದವರೆಗೆ ರಸ್ತೆಯ ಗಾರ್ಡನ್ ನಿರ್ವಹಣೆ ಕಾರ್ಯ ಮಾಡುತ್ತಿದ್ದರು. ಆದ್ರೆ, ಆರು ತಿಂಗಳ ವೇತನ ಕೊಡದೇ ಹೊರ ಹಾಕಿದ್ದರು. ಇದರಿಂದ ಮನನೊಂದು ಇಂದು (ನವೆಂಬರ್ 04)ಬೆಳಗ್ಗೆ ಟೋಲ್​ ಕಚೇರಿ ಬಳಿಯೇ ಪ್ರಾಣ ಬಿಟ್ಟಿದ್ದಾರೆ.

ಇದರಿಂದ ಸ್ಥಳೀಯರು ಆಕ್ರೋಶಗೊಂಡಿದ್ದು, ಟೋಲ್ ನಾಕಾ ಬಳಿ ರಾಷ್ಟ್ರೀಯ ಹೆದ್ದಾತಿ ಬಂದ್‌ ಮಾಡಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ವಾಹನಗಳು ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ