AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಲವ್‌ ಜಿಹಾದ್​ ಆರೋಪಕ್ಕೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ

ಬಾಗಲಕೋಟೆಯಲ್ಲಿ ಮುಸ್ಲಿಂ ಹುಡುಗ ಮತ್ತು ಹಿಂದೂ ಯುವತಿ ಪ್ರೇಮ ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸದ್ಯ ಇಬ್ಬರ ಫೋನ್​​ಗಳನ್ನ ಸೀಜ್​ ಮಾಡಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ. ಯುವತಿಯ ತಾಯಿ ದೂರಿನನ್ವಯ ಹಲವು ವರ್ಷಗಳಿಂದ ಹುಡುಗ ರಿಲೇಷನ್‌ಶಿಪ್​​​ನಲ್ಲಿದ್ದ ಎಂಬ ಸ್ಫೋಟಕ ವಿಚಾರವನ್ನು ಎಸ್​ಪಿ ಬಹಿರಂಗ ಮಾಡಿದ್ದಾರೆ.

ಬಾಗಲಕೋಟೆ ಲವ್‌ ಜಿಹಾದ್​ ಆರೋಪಕ್ಕೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ
ಎಸ್ಪಿ ಸಿದ್ದಾರ್ಥ ಗೋಯೆಲ್, ಯುವಕ, ಮರತ ಯುವತಿImage Credit source: tv9 kannada
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Apr 16, 2026 | 4:49 PM

Share

ಬಾಗಲಕೋಟೆ, ಏಪ್ರಿಲ್​ 16: ಆಕೆ‌ ಹಿಂದೂ ಹುಡುಗಿ, ಆತ‌ ಮುಸ್ಲಿಂ ಹುಡುಗ. ಇಬ್ಬರ ಮಧ್ಯೆ ನಾಲ್ಕು ವರ್ಷದಿಂದ ಪ್ರೀತಿ ಇತ್ತಂತೆ. ಆದರೆ ಹುಡುಗಿ ನಿನ್ನೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು (death). ಈ ಬೆನ್ನಲ್ಲೇ ಲವ್‌ ಜಿಹಾದ್​ (Love Jihad) ಆರೋಪ ಕೇಳಿಬಂದಿತ್ತು. ಹುಡುಗನ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಸಂಬಂಧಿಕರು ಗಂಭೀರ ಆರೋಪ ಕೂಡ ಮಾಡಿದ್ದಾರೆ. ಈ ಮಧ್ಯೆ ಹುಡುಗಿಯ ತಾಯಿ ನೀಡಿದ ದೂರಿನಲ್ಲಿ ಹಲವು ವರ್ಷಗಳಿಂದ ಹುಡುಗ ರಿಲೇಷನ್‌ಶಿಪ್​​​ನಲ್ಲಿದ್ದ ಎಂಬ ಸ್ಫೋಟಕ ವಿಚಾರವನ್ನು ಬಾಗಲಕೋಟೆ ಎಸ್​​ಪಿ ಸಿದ್ದಾರ್ಥ ಗೋಯೆಲ್​ ಬಹಿರಂಗ ಮಾಡಿದ್ದಾರೆ.

ಎಸ್​​ಪಿ ಸಿದ್ದಾರ್ಥ ಗೋಯೆಲ್ ಹೇಳಿದ್ದಿಷ್ಟು

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್​​ಪಿ ಸಿದ್ದಾರ್ಥ ಗೋಯೆಲ್​, ನಿನ್ನೆ ಭೂಮಿಕಾ ಮೋಹನ್ ತಿಪ್ಪಣ್ಣವರ ಎಂಬ 19 ವರ್ಷದ ಯುವತಿ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಕ್ಷಣ ನಾವು ಹಾಗೂ ನಮ್ಮ ಸಿಬ್ಬಂದಿ ಸ್ಥಳಕ್ಕೆ ಹೋಗಿದ್ದೆವು. ಸೀನ್ ಆಫ್ ಕ್ರೈಂ ಅಧಿಕಾರಿಗಳು ಕೂಡ ಬಂದಿದ್ದರು. ಹುಡುಗಿಯ ಫೋನ್ ಸೀಜ್ ಮಾಡಿದ್ದೇವೆ. ಡೊಂಗ್ರಿ ಸಾಬ್ ನದಾಫ್ ಎಂಬ ಹುಡುಗನ ಮೇಲೆ ಯುವತಿ ತಾಯಿ ಕೊಟ್ಟ ದೂರಿನ ಮೇಲೆ ಎಫ್​ಐಆರ್​ ದಾಖಲಿಸಿದ್ದೇವೆ. ಆತನ ಫೋನ್ ಕೂಡ ಸೀಜ್ ಮಾಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ, ಲವ್ ಜಿಹಾದ್ ಆರೋಪ

ಕ್ರೈಂ ನಂ 68/2026, ಬಿಎನ್​ಎಸ್ 108 ಆತ್ಮಹತ್ಯೆಗೆ ಪ್ರೇರಣೆ ಅಡಿ ಪ್ರಕರಣ ದಾಖಲಿಸಿದ್ದೇವೆ. ಈಗಾಗಲೇ ಆ ಹುಡುಗನನ್ನು ಅರೆಸ್ಟ್ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದೇವೆ. ಅವರ ತಾಯಿ ಹೇಳುವ ಪ್ರಕಾರ  ಹುಡುಗಿಯ ಜೊತೆ ಹಲವು ವರ್ಷಗಳಿಂದ ಹುಡುಗ ರಿಲೇಷನ್‌ಶಿಪ್​​ನಲ್ಲಿದ್ದ​. ಮದುವೆ ಮಾಡಿಕೊಳ್ಳಲು ಆತ ಒತ್ತಾಯ ಮಾಡುತ್ತಿದ್ದ ಎಂದು ಹೇಳಲಾಗಿದೆ. ಆದ ಕಾರಣ ಮಾನಸಿಕವಾಗಿ ನೊಂದು ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ತಾಯಿ ದೂರದಲ್ಲಿ ಉಲ್ಲೇಖಿಸಿದ್ದಾರೆ ಎಂದರು.

ಡೆತ್ ನೋಟ್ ಸಿಕ್ಕಿಲ್ಲ ಎಂದ ಎಸ್​​ಪಿ

ಯುವತಿಗೆ ಯಾವ ರೀತಿ ಟಾರ್ಚರ್ ಕೊಡಿತ್ತಿದ್ದರು, ಏನೆಲ್ಲಾ ತೊಂದರೆ ಕೊಡುತ್ತಿದ್ದರು ಅದರ ಬಗ್ಗೆ ಸಂಪೂರ್ಣ ವಿಚಾರಣೆ ಮಾಡಿ ನಾವು ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಸುತ್ತೇವೆ. ಎರಡು ಸಮುದಾಯದವರೆಗೂ ನಾವು ಮನವಿ ಮಾಡುತ್ತೇವೆ ದಯವಿಟ್ಟು ಶಾಂತಿ ಕಾಪಾಡಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಪ್ರಕಾರ ನಾವು ಕ್ರಮಕೈಗೊಳ್ಳುತ್ತೇವೆ. ಡೆತ್ ನೋಟ್ ಏನು ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರೇಮ ಸಂಬಂಧವೋ? ಲವ್​​ ಜಿಹಾದೋ?: ಅಸಲಿಗೆ ಹುಬ್ಬಳ್ಳಿ, ಧಾರವಾಡದಲ್ಲಿ ಆಗ್ತಿರೋದೇನು?

ಇನ್ನು ಹಿಂದೂಪರ ಸಂಘಟನೆಯಿಂದ ಲವ್ ಜಿಹಾದ್ ಆರೋಪ‌ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ತಾಯಿಯ ದೂರಿನಲ್ಲಿ ಸದ್ಯಕ್ಕೆ ಅಂತಹ ಯಾವುದೇ ವಿಷಯಗಳ ಉಲ್ಲೇಖವಿಲ್ಲ. ಅವರಿಗೆ ಅವಕಾಶ ಇದೆ, ಇನ್ನೊಂದು ಸಾರಿ ದೂರು ಕೊಡುವುದಕ್ಕೆ. ಅವರು ಏನೆಲ್ಲಾ ವಿಷಯಗಳನ್ನು ಉಲ್ಲೇಖ ಮಾಡುತ್ತಾರೆ ಅದರ ಪ್ರಕಾರ ಕ್ರಮಕೈಗೊಳ್ಳುತ್ತೇವೆ ಎಂದು ಎಸ್​​ಪಿ ಸಿದ್ದಾರ್ಥ ಗೋಯೆಲ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:42 pm, Thu, 16 April 26

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ