ಬಾಗಲಕೋಟೆ: ಹುನಗುಂದ ಶಾಸಕ ವಿಜಯಾನಂದ ವಿರುದ್ಧ ಸಂಸದ, ಮಾಜಿ ಶಾಸಕರ ದೂರು

ವಿಜಯಾನಂದ ಕಾಶಪ್ಪನವರ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ. 307, ಜಾತಿನಿಂದನೆ ಕೇಸ್ ಹಾಕಿಸುತ್ತಿದ್ದಾರೆಂದು ಬಿಜೆಪಿ ಮಾಜಿ ಶಾಸಕ, ಬೆಂಬಲಿಗರು ಎಸ್​ಪಿಗೆ ದೂರು ಸಲ್ಲಿಸಿದ್ದಾರೆ. ಹುನಗುಂದ ತಾಲೂಕಿನ ವ್ಯಾಪ್ತಿಯಲ್ಲಿ ಮಟಕಾ ಅಡ್ಡೆ, ಇಸ್ಪೀಟ್‌, ಅಕ್ರಮ ಮರಳು ಸಾಗಾಣಿಕೆ ಇತ್ಯಾದಿ ಚಟುವಟಿಕೆಗಳು ಹೆಚ್ಚಾಗಿವೆ. ಇವುಗಳಿಗೆ ಶಾಸಕ ವಿಜಯಾನಂದ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಾಗಲಕೋಟೆ: ಹುನಗುಂದ ಶಾಸಕ ವಿಜಯಾನಂದ ವಿರುದ್ಧ ಸಂಸದ, ಮಾಜಿ ಶಾಸಕರ ದೂರು
ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಎಸ್​ಪಿಗೆ ದೂರು
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಆಯೇಷಾ ಬಾನು

Updated on:Oct 22, 2023 | 9:46 AM

ಬಾಗಲಕೋಟೆ, ಅ.22: ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ (Vijayanand Kashappanavar) ವಿರುದ್ಧ ಅಧಿಕಾರ ದುರುಪಯೋಗ ಆರೋಪ ಮಾಡಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ (Doddanagouda Patil) ನೇತೃತ್ವದಲ್ಲಿ ಬಿಜೆಪಿ ಬೆಂಬಲಿಗರು ಎಸ್ಪಿಗೆ ದೂರು ಸಲ್ಲಿಸಿದ್ದಾರೆ. ವಿಜಯಾನಂದ ಕಾಶಪ್ಪನವರ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ. 307, ಜಾತಿನಿಂದನೆ ಕೇಸ್ ಹಾಕಿಸುತ್ತಿದ್ದಾರೆಂದು ಮಾಜಿ ಶಾಸಕರು ಎಸ್​ಪಿಗೆ ದೂರು ಸಲ್ಲಿಸಿದ್ದಾರೆ. ಹಾಗೂ ಶಾಸಕರ ಅಣತಿಯಂತೆ ಪೊಲೀಸರು ನಡೆದುಕೊಳ್ತಿದ್ದಾರೆಂದು ಆಕ್ರೋಶ ಹೊರ ಹಾಕಿದ್ದಾರೆ.

ಹುನಗುಂದ ತಾಲೂಕಿನ ವ್ಯಾಪ್ತಿಯಲ್ಲಿ ಮಟಕಾ ಅಡ್ಡೆ, ಇಸ್ಪೀಟ್‌, ಅಕ್ರಮ ಮರಳು ಸಾಗಾಣಿಕೆ ಇತ್ಯಾದಿ ಚಟುವಟಿಕೆಗಳು ಹೆಚ್ಚಾಗಿವೆ. ಇವುಗಳಿಗೆ ಶಾಸಕ ವಿಜಯಾನಂದ ಕುಮ್ಮಕ್ಕು ನೀಡುತ್ತಿದ್ದಾರೆ. ಅಲ್ಲದೆ ಪೊಲೀಸ್ ಪ್ರಕರಣ ದಾಖಲಾಗದಂತೆ ನೋಡಿಕೊಳ್ಳುತ್ತಿದ್ದಾರೆ. ಇಳಕಲ್‌ ಹಾಗೂ ಹುನಗುಂದ ಠಾಣೆಯ ಪೊಲೀಸರು ಶಾಸಕರು ಹೇಳಿದಂತೆ ಕೇಳುತ್ತಿದ್ದಾರೆ. ಅಕ್ರಮ ಚಟುವಟಿಕೆಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಹೀಗಾಗಿ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಬಾಗಲಕೋಟೆ ಎಸ್ಪಿ ಕಚೇರಿಗೆ ಆಗಮಿಸಿದ ಸಂಸದ ಪಿ.ಸಿ.ಗದ್ದಿಗೌಡ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಬಿಜೆಪಿ ಕಾರ್ಯಕರ್ತರು ಎಸ್ಪಿ ಅಮರನಾಥ ರೆಡ್ಡಿಗೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಹಾಡಹಗಲೇ ಗ್ರಾಮ ಪಂಚಾಯ್ತಿ ಸದಸ್ಯನ ಬರ್ಬರ ಕೊಲೆ! ಅನುಮಾನಾಸ್ಪದ ಓರ್ವ ವ್ಯಕ್ತಿ ಅರೆಸ್ಟ್

ಹುನಗುಂದದಲ್ಲಿ ಮುಂದಿನ ದಿನಗಳಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿಕೊಂಡು ಹೋಗುವುದು ತುಂಬಾ ಕಷ್ಟಕರವಾಗಿದೆ. ಶಾಸಕ ವಿಜಯಾನಂದ ಹಾಗೂ ಅವರ ಬೆಂಬಲಿಗರು ಬಲಾಢ್ಯರಾಗಿರುವುದರಿಂದ ಅನ್ಯಾಯ ಪ್ರಶ್ನಿಸಿ ಜೀವನ ನಡೆಸುವುದು ಕಷ್ಟವಾಗಿದೆ. ಅಮಾಯಕರ ವಿರುದ್ಧ ನಕಲಿ ಎಸ್‌ಸಿ/ಎಸ್‌ಟಿ ಪ್ರಕರಣಗಳನ್ನು ದಾಖಲು ಮಾಡಲಾಗುತ್ತಿದೆ. ಯಾವುದೇ ವಿಚಾರಣೆ ನಡೆಸದೆ ಮುಗ್ದ ಜನರನ್ನು ದಸ್ತಗಿರಿ ಮಾಡಲಾಗುತ್ತದೆ. ಸತ್ಯಾಸತ್ಯತೆ ಪರಿಶೀಲಿಸಬೇಕು ಎಂದು ಬಿಜೆಪಿ ಬೆಂಬಲಿಗರು ಆಗ್ರಹಿಸಿದರು.

ಬಾಗಲಕೋಟೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:44 am, Sun, 22 October 23

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ