ಮೈಸೂರು ದಸರಾ ವೇಳೆ ಗಣ್ಯರ ಸಾಲಿನಲ್ಲಿ ಕೂತಿದ್ದ ರೌಡಿಶೀಟರ್, ಹೇಗೆ ಕೂರಿಸಿದ್ರಿ ಎಂದು ಬಾಗಲಕೋಟೆ ಜನರ ಆಕ್ರೋಶ

ಮೈಸೂರು ದಸರಾ ಕಾರ್ಯಕ್ರಮದ ವೇದಿಕೆ ಮೇಲೆ ಗಣ್ಯರ ಸಾಲಿನಲ್ಲಿ 420, ರೌಡಿಶೀಟರ್ ಪ್ರಕಾಶ್ ಮುಧೋಳ ಕಾಣಿಸಿಕೊಂಡರು. ಗಣ್ಯರ ಸಾಲಲ್ಲಿ ಪ್ರಕಾಶ್‌ ಮುಧೋಳ ಆಸನ ಪಡೆದಿದ್ದೇಗೆ ಎಂಬ ಪ್ರಶ್ನೆ ಎದ್ದಿದೆ. ಗಣ್ಯರ ಸಾಲಲ್ಲಿ ಹೇಗೆ ಕೂರಿಸಿದರು ಎಂದು ಬಾಗಲಕೋಟೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow us
| Updated By: ಆಯೇಷಾ ಬಾನು

Updated on:Oct 13, 2024 | 7:56 AM

ಬೆಂಗಳೂರು, ಅ.13: ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಬಳಿ ಇರುವ ರಾಮಾರೂಢ ಮಠದ ಸ್ವಾಮೀಜಿ ಅವರನ್ನು ಹೆದರಿಸಿ ₹1 ಕೋಟಿ ಹಣ ವಸೂಲು ಮಾಡಿದ್ದ ರೌಡಿಶೀಟರ್ ಪ್ರಕಾಶ ಮುಧೋಳ ಮೈಸೂರು ದಸರಾ (Mysuru Dasara) ವೇಳೆ ಗಣ್ಯರ ಸಾಲಿನಲ್ಲಿ ನಾಣಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್​.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್​ ಕೂತಿದ್ದ ವಿಐಪಿ ಸಾಲಿನಲ್ಲಿ ಪ್ರಕಾಶ್‌ ಮುಧೋಳ ಕುಳಿತಿದ್ದರು.

ಮೈಸೂರು ದಸರಾ ಕಾರ್ಯಕ್ರಮದ ವೇದಿಕೆ ಮೇಲೆ ಗಣ್ಯರ ಸಾಲಿನಲ್ಲಿ 420, ರೌಡಿಶೀಟರ್ ಪ್ರಕಾಶ್ ಮುಧೋಳ ಕಾಣಿಸಿಕೊಂಡರು. ಡಿಸಿಎಂ ಡಿಕೆ ಶಿವಕುಮಾರ್, MLC ಯತೀಂದ್ರ ಜೊತೆಗೂ ಪ್ರಕಾಶ್‌ ಮುಧೋಳ ಸೆಲ್ಫಿ ತೆಗೆದುಕೊಂಡಿದ್ದಾರೆ. ಗಣ್ಯರ ಸಾಲಲ್ಲಿ ಪ್ರಕಾಶ್‌ ಮುಧೋಳ ಆಸನ ಪಡೆದಿದ್ದೇಗೆ ಎಂಬ ಪ್ರಶ್ನೆ ಎದ್ದಿದೆ. ಗಣ್ಯರ ಸಾಲಲ್ಲಿ ಹೇಗೆ ಕೂರಿಸಿದರು ಎಂದು ಬಾಗಲಕೋಟೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತುಮಕೂರು ದಸರಾ ಮೆರವಣಿಗೆಯಲ್ಲಿ ಪರಮೇಶ್ವರ್ ಭರ್ಜರಿ ಡ್ಯಾನ್ಸ್

ಇತ್ತೀಚೆಗಷ್ಟೇ ಬಾಗಲಕೋಟೆ ತಾಲೂಕಿನ ಸೀಮಿಕೇರಿ ರಾಮಾರೂಢ ಮಠದ ಪರಮರಾಮಾರೂಢಶ್ರೀಗೆ ರೌಡಿಶೀಟರ್​ ಪ್ರಕಾಶ್ ಮುಧೋಳ ಬೆದರಿಕೆ ಹಾಕಿ 1 ಕೋಟಿ ರೂ. ವಸೂಲಿ ‌ಮಾಡಿದ್ದ. ಎಡಿಜಿಪಿ, ಐಜಿಪಿ ಹೆಸರಲ್ಲಿ ಕರೆ ಮಾಡಿ ವಂಚನೆ ಮಾಡಿದ್ದ. ಈ ಸಂಬಂಧ ಬಾಗಲಕೋಟೆ ಸಿಇಎನ್ ಠಾಣೆ ಪೊಲೀಸರು ಪ್ರಕಾಶ್​ನನ್ನು​​ ಬಂಧಿಸಿದ್ದರು. ಸದ್ಯ 4 ದಿನದ ಹಿಂದೆ ಪ್ರಕಾಶ್ ‌ಮುಧೋಳ ಜಾಮೀನಿನ ಮೇಲೆ ಹೊರ ಬಂದಿದ್ದಾನೆ. ಇದೀಗ ದಸರಾ ಕಾರ್ಯಕ್ರಮದಲ್ಲಿ ಗಣ್ಯರ ವೇದಿಕೆಯಲ್ಲಿ ಪ್ರತ್ಯಕ್ಷನಾಗಿದ್ದಾನೆ.

2023ರ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆ ರಾಮದುರ್ಗ ಕ್ಷೇತ್ರದಲ್ಲಿ ಜೆಡಿಎಸ್​ ಅಭ್ಯರ್ಥಿಯಾಗಿ ಪ್ರಕಾಶ್ ಸ್ಪರ್ಧಿಸಿದ್ದ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೆಸರಿನಲ್ಲಿ ವಂಚನೆಗೆ ಯತ್ನಿಸಿದ್ದ. ಬಾಗಲಕೋಟೆ ಉಸ್ತುವಾರಿ ಸಚಿವ ತಿಮ್ಮಾಪುರ ಅವರ ಅಳಿಯ ಎಂದು ಕಾರ್ ಲೋನ್ ಪಡೆಯಲು ಯತ್ನಿಸಿದ್ದ. ವಂಚನೆ, ಸುಲಿಗೆ ಸೇರಿ ಪ್ರಕಾಶ್ ಮುಧೋಳ ವಿರುದ್ಧ ಒಟ್ಟು 11 ಕೇಸ್​ಗಳಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:45 am, Sun, 13 October 24

ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು