ಕಲ್ಲು, ಚಪ್ಪಲಿ ತೂರಾಟದ ಬಳಿಕ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಶಾಂತಿ ಸಭೆ ವಿಫಲ, ಎಲ್ಲಾ ಆರೋಪಿಗಳ ಬಂಧನಕ್ಕೆ ಡೆಡ್​ಲೈನ್

ಶಾಂತಿಯುತ ವಾಗಿದ್ದ ಬಾಗಲಕೋಟೆ ಆ ಒಂದು ಘಟನೆಯಿಂದ ಬೂದಿ ಮುಚ್ಚಿದ ಕೆಂಡದಂತಾಗಿದೆ. ದುಷ್ಕರ್ಮಿಗಳ ಕೃತ್ಯದಿಂದ ನಗರದಲ್ಲಿ ಅಶಾಂತಿ ಉಂಟಾಗಿದೆ. ಶಿವಾಜಿ ಜಯಂತಿಯಲ್ಲಿ ದುಷ್ಕೃತ್ಯ ಮೆರೆದಿದ್ದ ಪುಂಡರನ್ನು ಪೊಲೀಸರು ವಿಜಯಪುರ ಜೈಲಿಗಟ್ಟಿದ್ದಾರೆ. ಆದರೆ ವಾತಾವರಣ ಮಾತ್ರ ತಿಳಿಯಾಗಿಲ್ಲ. ಈ ಮಧ್ಯೆ ಶಾಂತಿ ಸಭೆ ಕೂಡ ವಿಫಲವಾಗಿದೆ.

ಕಲ್ಲು, ಚಪ್ಪಲಿ ತೂರಾಟದ ಬಳಿಕ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಶಾಂತಿ ಸಭೆ ವಿಫಲ, ಎಲ್ಲಾ ಆರೋಪಿಗಳ ಬಂಧನಕ್ಕೆ ಡೆಡ್​ಲೈನ್
ಪೊಲೀಸರ ಜತೆ ಯುವಕರ ವಾಗ್ವಾದ
Image Credit source: tv9
Edited By:

Updated on: Feb 21, 2026 | 6:32 AM

ಬಾಗಲಕೋಟೆ, ಫೆಬ್ರವರಿ 21: ಬಾಗಲಕೋಟೆಯಲ್ಲಿ (Bagalkot) ಫೆಬ್ರವರಿ 19ರ ರಾತ್ರಿ 10ಗಂಟೆ ವೇಳೆ ಶಿವಾಜಿ ಮೆರವಣಿಗೆ ಮೇಲೆ ನಡೆದ ಕಲ್ಲು ಹಾಗೂ ಚಪ್ಪಲಿ ತೂರಾಟದ ಬಳಿಕ ಉಂಟಾಗಿದ್ದ ಬಿಗುವಿನ ವಾತಾವರಣ ಮುಂದುವರಿದಿದೆ. ಘಟನೆ ಖಂಡಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಬೀದಿಗಿಳಿದಿದ್ದಾರೆ. ಶುಕ್ರವಾರ ಆಗಿದ್ದರಿಂದ ಪಂಕಾ ಮಸೀದಿ ಹಾಗೂ ಕೊತ್ತಲೇಶ್ವರ ದೇವಸ್ಥಾನದ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಗುರುವಾರ ರಾತ್ರಿ ಕಲ್ಲು ತೂರಾಟ ಸಂಬಂಧ 8 ಆರೋಪಿಗಳನ್ನು ಪೊಲೀಸರು ಬಂಧಿಸಿ, ವಿಜಯಪುರ ಜೈಲಿಗೆ ಅಟ್ಟಿದ್ದಾರೆ.

ಇತ್ತ ನಿಷೇದಾಜ್ಞೆ ಉಲ್ಲಂಘಿಸಿ ಶಿವಭವಾನಿ ದೇವಸ್ಥಾನದಲ್ಲಿ ಹಿಂದು ಮುಖಂಡರು ಸಭೆ ನಡೆಸಿದ್ದಾರೆ. ಮತ್ತೊಂದೆಡೆ ಹಿಂದೂ ಸಂಘಟನೆ ಯುವ ಕಾರ್ಯಕರ್ತರು ಅಂಗಡಿಗಳನ್ನು ಬಂದ್ ಮಾಡಿಸಲು ಮುಂದಾಗಿದ್ದಾರೆ. ಈ ವೇಳೆ ತಡೆದ ಪೊಲೀಸರ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ತರಕಾರಿ ಮಾರುಕಟ್ಟೆ ಪಕ್ಕದ ಮಾಂಸದ ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆದಿದೆ. ತಕ್ಷಣವೇ ಪೊಲೀಸರು ಲಾಠಿ ಬೀಸಿ ಗುಂಪನ್ನು ಚದುರಿಸಿದ್ದಾರೆ.

ಈ ನಡುವೆ ಡಿಸಿ ಕಚೇರಿಯಲ್ಲಿ ಎರಡು ಗುಂಪಿನ ಮುಖಂಡರನ್ನು ಶಾಂತಿ ಸಭೆಗೆ ಕರೆಯಲಾಗಿತ್ತು. ಸಭೆಗೆ ಹಿಂದು ಮುಖಂಡರು ಆಗಮಿಸಿದರು. ಆದರೆ ಸಭೆಗೆಂದು ಡಿಸಿ ಕಚೇರಿಗೆ ಬಂದ ಮುಸ್ಲಿಂ ಮುಖಂಡರು ಸಭೆಯಿಂದ ಹೊರಗುಳಿದಿದ್ದರು. ಇದರಿಂದ ರೊಚ್ಚಿಗೆದ್ದ ಹಿಂದು ಸಂಘಟನೆ ನಾಯಕರು ಶಾಂತಿ ಸಭೆ ಬಹಿಷ್ಕರಿಸಿದ್ದಾರೆ.

ಶಾಂತಿ ಸಭೆ ಬಹಿಷ್ಕರಿಸಿ ಹೊರಬಂದ ಹಿಂದೂ ಮುಖಂಡರು ಎಲ್ಲಾ ಆರೋಪಿಗಳನ್ನು ಬಂಧಿಸಲು ಪೊಲೀಸರಿಗೆ ಗಡುವು ನೀಡಿದ್ದಾರೆ. ಫೆಬ್ರುವರಿ 22 ರಂದು ಸರ್ವ ಸಮಾಜದ ಸಭೆ ಕರೆಯುತ್ತೇವೆ. ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ನಿರ್ಣಯ ಕೈಗೊಳ್ಳುತ್ತೇವೆ ಎಂದು ಹೇಳಿದರು.

ರಾತ್ರಿಯಾಗುತ್ತಿದ್ದಂತೆಯೇ ಕೊತ್ತಲೇಶ್ವರ ದೇವಸ್ಥಾನದ ಬಳಿ ಹಾಕಲಾಗಿರುವ ಬ್ಯಾರಿಕೇಡ್ ತೆರವುಗೊಳಿಸುವಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದಾರೆ. ‘ನಾವು ಗಣಪತಿ ದೇವಸ್ಥಾನಕ್ಕೆ ಹೇಗೆ ಹೋಗಬೇಕು? ಮಸೀದಿಯಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಕೊಟ್ಟಿದ್ದೀರಿ. ನಮಗ್ಯಾಕೆ ತಡೆ?’ ಎಂದು ಬ್ಯಾರಿಕೇಡ್ ಒದ್ದು ತಳ್ಳಿ ಹೋಗಲು ಪ್ರಯತ್ನಿಸಿದ್ದಾರೆ. ಆಗ ತಡೆದ ಪೊಲೀಸರ ಜೊತೆಗೆ ವಾಗ್ವಾದ ನಡೆಸಿದ್ದಾರೆ.

ಇದನ್ನೂ ಓದಿ: ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು

ಈ ಮಧ್ಯೆ ಹೆಚ್ಚಿನ ಭದ್ರತೆಗೆ ಗದಗ ಎಸ್ಪಿ ,ವಿಜಯಪುರ ಎಎಸ್ಪಿ, ಬೆಳಗಾವಿ ಪೊಲೀಸ್ ಅಧಿಕಾರಿಗಳು ಹಾಗೂ ಸಾವಿರಾರು ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us