AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದರೂ ಪರ ಪುರುಷನ ಜೊತೆ ಅನೈತಿಕ ಸಂಬಂಧ: ಪತಿಯಿಂದಲೇ ಪತ್ನಿಯ ಭೀಕರ ಕೊಲೆ

ಬಾಗಲಕೋಟೆ ಜಿಲ್ಲೆಯ ಗಲಗಲಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನೆಲೆ 23 ವರ್ಷದ ಪತ್ನಿ ಭಾಗ್ಯಶ್ರೀಯನ್ನು ಪತಿ ಪ್ರವೀಣ ಜಿಗಲೂರು ನೇಣು ಬಿಗಿದು ಭೀಕರವಾಗಿ ಕೊಲೆ ಮಾಡಿದ್ದಾನೆ. ದಂಪತಿಗೆ 6 ವರ್ಷಗಳ ಹಿಂದೆ ವಿವಾಹವಾಗಿದ್ದು, ಪತ್ನಿಯ ಅನೈತಿಕ ಸಂಬಂಧದ ವಿಚಾರ 2 ವರ್ಷಗಳ ಹಿಂದೆ ಪತಿಗೆ ಗೊತ್ತಾಗಿತ್ತು. ಈ ವಿಚಾರವಾಗಿ ಇಬ್ಬರ ನಡುವೆ ಕಲಹಗಳೂ ನಡೆಯುತ್ತಿದ್ದವು ಎನ್ನಲಾಗಿದೆ.

ಮದುವೆಯಾದರೂ ಪರ ಪುರುಷನ ಜೊತೆ ಅನೈತಿಕ ಸಂಬಂಧ: ಪತಿಯಿಂದಲೇ ಪತ್ನಿಯ ಭೀಕರ ಕೊಲೆ
ಪತಿಯಿಂದಲೇ ಪತ್ನಿಯ ಭೀಕರ ಕೊಲೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 28, 2026 | 5:13 PM

Share

ಮುಖ್ಯಾಂಶಗಳು

  • ಪರ ಪುರುಷನ ಜೊತೆ ಅನೈತಿಕ ಸಂಬಂಧ
  • ಪತಿಯಿಂದಲೇ ಭೀಕರವಾಗಿ ಪತ್ನಿಯ ಕೊಲೆ
  • ಬಾಗಲಕೋಟೆಯ ಗಲಗಲಿ ಗ್ರಾಮದಲ್ಲಿ ಘಟನೆ

ಬಾಗಲಕೋಟೆ, ಜುಲೈ 28: ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ 23 ವರ್ಷದ ಪತ್ನಿಯನ್ನು ಪತಿ ನೇಣು ಬಿಗಿದು ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗಲಗಲಿ ಗ್ರಾಮದಲ್ಲಿ ನಡೆದಿದೆ. ಮೃತೆಯನ್ನು ಭಾಗ್ಯಶ್ರೀ ಜಿಗಲೂರು ಎಂದು ಗುರುತಿಸಲಾಗಿದ್ದು, ಆರೋಪಿ ಪತಿಯನ್ನು ಪ್ರವೀಣ ಜಿಗಲೂರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಪ್ರವೀಣ ಮೊದಲು ಮರದ ತುಂಡಿನಿಂದ ಪತ್ನಿಯ ಮೇಲೆ ಹಲ್ಲೆ ನಡೆಸಿ, ಬಳಿಕ ಮನೆಯಲ್ಲಿ ನೇಣು ಬಿಗಿದಿದ್ದಾನೆ ಎನ್ನಲಾಗಿದೆ.

ದಂಪತಿಯ ನಡುವೆ ಕಳೆದ ಕೆಲವು ತಿಂಗಳಿಂದ ಆಗಾಗ ಜಗಳವಾಗುತ್ತಿತ್ತು. ಇದರಿಂದ ಸುಮಾರು ಎರಡು ತಿಂಗಳ ಹಿಂದೆ ಭಾಗ್ಯಶ್ರೀ ಪತಿಯ ಮನೆಯಿಂದ ಹೊರಬಂದು ತನ್ನ ತಂದೆ-ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದರು. ಬಳಿಕ ಇನ್ನು ಮುಂದೆ ಶಾಂತಿಯುತವಾಗಿ ಬದುಕೋಣ ಎಂದು ಮನವೊಲಿಸಿ ಪ್ರವೀಣ ಪತ್ನಿಯನ್ನು ಮರಳಿ ಮನೆಗೆ ಕರೆತಂದಿದ್ದ. ಆದರೆ ಮನೆಗೆ ಬಂದ ಅದೇ ದಿನ ಈ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಿಲಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಐಷಾರಾಮಿ ಕಾರುಗಳ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂ. ವಂಚನೆ: ನಾಲ್ವರು ಆರೋಪಿಗಳ ಬಂಧನ!

ಘಟನೆ ಬಗ್ಗೆ ಬಾಗಲಕೋಟೆ ಎಸ್ಪಿ ಸಿದ್ದಾರ್ಥ್​​ ಗೋಯಲ್​​ ಪ್ರತಿಕ್ರಿಯಿಸಿದ್ದು, ಮೃತ ಭಾಗ್ಯಶ್ರೀ ಮೈಮೇಲೆ ರಾಡ್​​ನಿಂದ ಹೊಡೆದ ಗುರುತುಗಳು ಕಂಡುಬಂದಿವೆ. ಆಕೆ ಕಿರುಕುಳಕ್ಕೆ ನೇಣು ಹಾಕಿಕೊಂಡಿರಬಹುದು ಅಥವಾ ಹಲ್ಲೆ ಮಾಡಿ ಪತಿ ಪ್ರವೀಣ ನೇಣು ಹಾಕಿರಬಹುದು. ಪ್ರಾಥಮಿಕ ತನಿಖೆ ಪ್ರಕಾರ ಭಾಗ್ಯಶ್ರೀಗೆ ಅನೈತಿಕ ಸಂಬಂಧ ಇರುವುದು ಬಹುತೇಕ ಖಚಿತವಾಗಿದೆ. ಆಕೆಯ ತವರು ಮನೆ ಮಹಾಲಿಂಗಪುರದ ವ್ಯಕ್ತಿಯ ಜೊತೆಗೆ ಸಂಪರ್ಕ ಹೊಂದಿದ್ದಾಳೆ. ಆ ವ್ಯಕ್ತಿಯ ಜೊತೆಗಿನ ಆಕೆಯ ಅಶ್ಲೀಲ ವಿಡಿಯೋಗಳು ಪ್ರವೀಣ್​​ ಮೊಬೈಲ್​ನಲ್ಲಿ ಸಿಕ್ಕಿವೆ. ಅವನ್ನು ಆತ ತನ್ನ ಕೆಲ ಸ್ನೇಹಿತರಿಗೆ ಶೇರ್​​ ಮಾಡಿದ್ದಾನೆ. ದಂಪತಿಗೆ 6 ವರ್ಷಗಳ ಹಿಂದೆ ವಿವಾಹವಾಗಿದ್ದು, ಪತ್ನಿಯ ಅನೈತಿಕ ಸಂಬಂಧದ ವಿಚಾರ 2 ವರ್ಷಗಳ ಹಿಂದೆ ಪತಿಗೆ ಗೊತ್ತಾಗಿತ್ತು. ಈ ವಿಚಾರವಾಗಿ ಇಬ್ಬರ ನಡುವೆ ಕಲಹಗಳೂ ನಡೆಯುತ್ತಿದ್ದವು. ಘಟನೆ ವೇಳೆ ಮನೆಯಲ್ಲಿ ದಂಪತಿ ಮಾತ್ರ ಇದ್ದರು. ಸ್ಥಳದಲ್ಲಿ ಬಿಯರ್​​ ಬಾಟಲಿಗಳು ದೊರೆತಿದ್ದು, ಆರೋಪಿ ಮದ್ಯ ಸೇವಿಸಿದ್ದ ಸಾಧ್ಯತೆಯೂ ಇದೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:21 pm, Tue, 28 July 26

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ