ಕೆರೂರು ಗಲಾಟೆಗೆ ಸಂಬಂಧಿಸಿ 4 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಗುಂಪಿನ 18 ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದ ಬಾಗಲಕೋಟೆ ಎಸ್ಪಿ ಜಯಪ್ರಕಾಶ್, ನಿನ್ನೆ ಎರಡು ಕೋಮಿನ ಯುವಕರ ಮಧ್ಯೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಒಂದು ಗುಂಪಿನ 3 ಜನ, ಮತ್ತೊಂದು ಗುಂಪಿನ ಓವ೯ ಸೇರಿ ಒಟ್ಟು ನಾಲ್ವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಇದನ್ನೂ ಓದಿ: Veerendra Heggade: ಹುದ್ದೆಗಾಗಿ ಹಂಬಲಿಸಿದವನು ನಾನಲ್ಲ, ಕೇಳಿದವನೂ ಅಲ್ಲ: ವಿರೇಂದ್ರ ಹೆಗ್ಗಡೆ
ಘಟನೆಯಲ್ಲಿ ಒಂದು ಬೈಕ್ ಮತ್ತು ತಳ್ಳುವ ಗಾಡಿ ಸುಟ್ಟಿದ್ದಾರೆ. 6 ಬೈಕ್ಗಳು ಜಖಂ ಆಗಿವೆ. ಭದ್ರತೆಗಾಗಿ 5 ಐಆರ್ಬಿ ತುಕುಡಿಗಳು ಸೇರಿದಂತೆ ಹೆಚ್ಚಿನ ಆಫೀಸರ್ಗಳನ್ನು ನಿಯೋಜಿಸಲಾಗಿದೆ ಎಂದು ಎಸ್ಪಿ ಜಯಪ್ರಕಾಶ್ ಹೇಳಿದರು.
ಶಾಲಾ-ಕಾಲೇಜುಗಳಿಗೆ ರಜೆ:
ನಿನ್ನೆ ರಾತ್ರಿ ಹಿಂದೂ ಮುಸ್ಲಿಂ ಯುವಕರ ನಡುವೆ ಗಲಾಟೆ ನಡೆದಿತ್ತು. ಕೆರೂರು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನೆಲೆಸಿರುವ ಹಿನ್ನೆಲೆ ನಾಳೆ ರಾತ್ರಿ 8 ಗಂಟೆಯವರೆಗೂ 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಎಲ್ಲ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ: Viral Video: ಮ್ಯಾಂಗ್ರೋವ್ ಕಾಡುಗಳ ಮರುಸ್ಥಾಪಿಸುವ ಫಿಶ್ಬೋನ್ ಚಾನೆಲ್ ಪ್ಲಾಂಟೇಶನ್ ವಿಧಾನದ ವಿಡಿಯೋ ವೈರಲ್