AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಎಸ್​ಎಸ್​ಎಲ್​ಸಿ ಟಾಪರ್ ಅಂಕಿತಾ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ವಜ್ಜರಮಟ್ಟಿ ಗ್ರಾಮದ ಮೆಳ್ಳಿಗೇರಿ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕತಾ ಕೊಣ್ಣೂರ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾಸಿದ್ದರು. ಇದೀಗ ಅಂಕಿತಾ ಕಣ್ಣೂರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕೃತಜ್ಞತೆ ಸಲ್ಲಿಸಿದ್ದಾಳೆ.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಎಸ್​ಎಸ್​ಎಲ್​ಸಿ ಟಾಪರ್ ಅಂಕಿತಾ
ಅಂಕಿತಾ ಕೊಣ್ಣೂರ, ಸಿದ್ದರಾಮಯ್ಯ
ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ|

Updated on:Jun 14, 2024 | 12:01 PM

Share

ಬಾಗಲೋಕಟೆ, ಜೂನ್​ 14: 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ (SSLC Exam) ರಾಜ್ಯಕ್ಕೆ ಫಸ್ಟ್ ಬಂದಿದ್ದ​​ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರ (Ankita Konnur) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಕೃತಜ್ಞತಾ ಪತ್ರ ಬರೆದಿದ್ದಾಳೆ. ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರ ಮುಧೋಳ (Mudhol) ತಾಲೂಕಿನ ವಜ್ಜರಮಟ್ಟಿ ಗ್ರಾಮದ ಮೆಳ್ಳಿಗೇರಿ ಮುರಾರ್ಜಿ ವಸತಿ ಶಾಲೆಯಲ್ಲಿ ಓದಿದ್ದಾಳೆ. ಇವರು ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಆಗಿದ್ದರು.

ಈ ಹಿನ್ನೆಲೆಯಲ್ಲಿ ಅಂಕಿತಾ ಕೊಣ್ಣೂರ ಅವರನ್ನು ಕರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿ ಐದು ಲಕ್ಷ ರೂ. ಪ್ರೋತ್ಸಾಹ ಧನ ನೀಡಿದ್ದರು. ಇದೀಗ ವಿದ್ಯಾರ್ಥಿನಿ ಅಂಕಿತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

ಪತ್ರದಲ್ಲಿ ಏನಿದೆ..?

“ಮಾನ್ಯ ಮುಖ್ಯಮಂತ್ರಿಗಳಿಗೆ ನಾನು ಮಾಡುವ ಸಾಷ್ಟಾಂಗ ನಮಸ್ಕಾರಗಳು. ಈ ಬಾರಿ ಅಂದರೆ, 2023-24ನೇ ಎಸ್​ಎಸ್​ಎಲ್​ಸಿ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ (100%) ಸ್ಥಾನ ಬಂದಿದ್ದು, ರಾಜ್ಯಕ್ಕೆ ಸಂತಸಕರವಾದ ಸಂಗತಿಯಾಗಿದೆ. ಅದರಲ್ಲೂ ಪ್ರತೀ ಬಾರಿ ಫಲಿತಾಂಶ ಎಂದೊಡನೆ ದಕ್ಷಿಣ ಕರ್ನಾಟಕದ ಕಡೆ ಮುಖ ಮಾಡುತ್ತಿದ್ದ ಜನರ ದೃಶ್ಯ ಈ ಬಾರಿ ಬದಲಾಯಿತು”.

“ಉತ್ತರ ಕರ್ನಾಟಕದ ಒಬ್ಬ ಸಾಮಾನ್ಯ ಹುಡುಗಿಯೂ ಸಹ ತಾನಂದುಕೊಂಡಿದ್ದನ್ನು ಸಾಧಿಸಬಲ್ಲಳು ಎಂದು ತೋರಿಸಿ ಕೊಟ್ಟಿದ್ದಕ್ಕೆ ತುಂಬಾ ಹೆಮ್ಮೆ ಇದೆ. ನನ್ನನ್ನು ಬೆಂಗಳೂರಿಗೆ ಅಹ್ವಾನಿಸಿ, ತಮ್ಮ ಸ್ವ-ಗೃಹದವರೆಗೂ ಕರೆದು ಸನ್ಮಾನಿಸಿ, ಅಭಿನಂದಿಸಿ ನನ್ನ ಮುಂದಿನ ಭವಿಷ್ಯಕ್ಕೆ ನೆರವು ನೀಡಿದ್ದೀರಿ. ಅಷ್ಟೇ ಅಲ್ಲದೇ ತುಂಬು ಹೃದಯದಿಂದ ನನ್ನನ್ನು ಸತ್ಕರಿಸಿ, ಹರಸಿ, ಆಶೀರ್ವದಿಸಿದ್ದೀರಿ.”

ಇದನ್ನೂ ಓದಿ: ಎಸ್​ಎಸ್​ಎಲ್​ಸಿಯಲ್ಲಿ ಮೊದಲ ರ‍್ಯಾಂಕ್ ಪಡೆದ ಅಂಕಿತಾಳನ್ನು ಸನ್ಮಾನಿಸಿ ರೂ. 5 ಲಕ್ಷ ಬಹುಮಾನ ನೀಡಿದ ಡಿಕೆ ಶಿವಕುಮಾರ್

“ನಿಮ್ಮಿಂದಲೇ ಪ್ರಾರಂಭವಾದ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು, ಈ ಸಂಸ್ಥೆ ಅಡಿಯಲ್ಲಿ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೆಳ್ಳಗೇರಿಯಲ್ಲಿ ನಾನು ಓದಿದ್ದು, ಈ ಎಲ್ಲ ವಸತಿ ಶಾಲೆಗಳ ಪ್ರಾರಂಭಿಕ ಕಾರಣ ಭೂತರು ತಾವೆಂದು ತಿಳಿದು ಬಹಳ ಸಂತಸವಾಗಿದೆ. ಸಾಕಷ್ಟು ಸುವ್ಯವಸ್ಥೆಯುಳ್ಳ ಈ ಶಾಲೆಗಳು ಸರ್ಕಾರಿ ಶಾಲೆಗಳು ಎಂದು ಸಾಕಷ್ಟು ಜನರಿಗೆ ಇವುಗಳ ಬಗ್ಗೆ ತಪ್ಪು ಕಲ್ಪನೆ ಇರುತ್ತದೆ.”

“ಈ ಶಾಲೆ ಸಾಕಷ್ಟು ಬಡ ಪ್ರತಿಭೆಗಳಿಗೆ ಶಿಕ್ಷಣ ದೊರಕಿ, ಬಾಳಿಗೆ ದಾರಿದೀಪವಾಗಿದೆ. ನಿಮ್ಮನ್ನು ಭೇಟಿಯಾಗುವುದು ಎಂದರೇ ಜನಸಾಮಾನ್ಯರಿಗೆ ಎಟುಕದ ಮಾತು. ಅಂತಹ ಸಂದರ್ಭದಲ್ಲಿ ನನಗೆ ಈ ಅವಕಾಶ ಬಂದಿರುವುದಕ್ಕೆ ಬಹಳ ಸಂತೋಷವಿದೆ. ನಿಮ್ಮ ಆಶೀರ್ವಾದ ಸದಾ ನಮ್ಮಂದಿಗೆ ಇರಲಿ ಎಂದು ಕೇಳಿಕೊಳ್ಳುತ್ತೇನೆ” ಎಂದು ಅಂಕಿತಾ ಬಸಪ್ಪ ಕೊಣ್ಣೂರು ಪತ್ರದಲ್ಲಿ ಕೃತಜ್ಞತೆ ಸಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:59 am, Fri, 14 June 24