ಪ್ರವಾಸೋದ್ಯಮ ಇಲಾಖೆ ಹಣ ವಂಚನೆ ಪ್ರಕರಣ: 19 ಆರೋಪಿಗಳ ಬಂಧನ, ಕೇಸ್ ಶೀಘ್ರ ಸಿಐಡಿಗೆ ಹಸ್ತಾಂತರ

ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆ ಹಣ ವಂಚನೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಆರೋಪಿಗಳು ಇತರೆ ನಾಲ್ಕು ಇಲಾಖೆ ಹಣ ಕೂಡ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸದ್ಯ ಅಕ್ರಮ ಹಣ 6 ಕೋಟಿ ತಲುಪಿದ್ದು ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸುವ ಸಾಧ್ಯತೆ ಇದೆ. ಸದ್ಯ ಈಗ 19 ಜನರನ್ನು ಬಂಧಿಸಲಾಗಿದೆ.

ಪ್ರವಾಸೋದ್ಯಮ ಇಲಾಖೆ ಹಣ ವಂಚನೆ ಪ್ರಕರಣ: 19 ಆರೋಪಿಗಳ ಬಂಧನ,  ಕೇಸ್ ಶೀಘ್ರ ಸಿಐಡಿಗೆ ಹಸ್ತಾಂತರ
ಪ್ರವಾಸೋದ್ಯಮ ಇಲಾಖೆ
Follow us
| Updated By: ಆಯೇಷಾ ಬಾನು

Updated on: Aug 08, 2024 | 11:43 AM

ಬಾಗಲಕೋಟೆ, ಆಗಸ್ಟ್​.08: ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯ(Bagalkot Tourism Department Scam) 2 ಕೋಟಿ 47 ಲಕ್ಷ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮತ್ತಷ್ಟು ಆರೋಪಿಗಳು ಬಲೆಗೆ ಬಿದ್ದಿದ್ದಾರೆ. ಇದುವರೆಗೂ ಒಟ್ಟು 19 ಜನರನ್ನು ಬಂಧಿಸಲಾಗಿದೆ. ಅತಿ ಶೀಘ್ರದಲ್ಲೇ ಸಿಐಡಿಗೆ (CID) ಈ ಪ್ರಕರಣವನ್ನು ಹಸ್ತಾಂತರಿಸಲು ತಯಾರಿ ನಡೆದಿದೆ.

2021 ರಿಂದ 2024 ರವರೆಗೆ 54 ಬಾರಿ 33 ಖಾತೆಗೆ ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಬಾಗಲಕೋಟೆ ಐಡಿಬಿಐ ಬ್ಯಾಂಕ್ ಗುತ್ತಿಗೆ ನೌಕರ ಸೇಲ್ಸ್ ಎಕ್ಸಿಕ್ಯೂಟಿವ್, ಕಿಂಗ್ ಪಿನ್ ಸೂರಜ್ ಸಗರ, ಐಡಿಬಿಐ ಬ್ಯಾಂಕ್ ಅಸಿಸ್ಟೆಂಟ್ ‌ಮ್ಯಾನೇಜರ್‌ ಗಳಾದ ನಿಶಾ ಹಾಗೂ ಸರಸ್ವತಿ, ಬ್ಯಾಂಕ್‌ ಪಬ್ಲಿಕ್‌ ರಿಲೇಷನ್ಶಿಪ್ ಆಫಿಸರ್ ವಿದ್ಯಾಧರ ಹಿರೆಮಠ, ಲೋನ್ ವಿಭಾಗದ ಅಸಿಸ್ಟೆಂಟ್ ಮ್ಯಾನೇಜರ್ ರೋಹಿತ್, ಹಣ ಹಾಕಿಸಿಕೊಂಡ 14 ಜನ ಸೇರಿ ಒಟ್ಟು 19 ಜನರನ್ನು ಬಂಧಿಸಲಾಗಿದೆ.

ಹಣ ಹಾಕಿಸಿಕೊಂಡ‌ ಖಾತೆದಾರರು 30%, 50% ಕಮಿಷನ್ ಪಡೆದು ಹಣ ಸೂರಜ್‌ಗೆ ಮರಳಿಸುತ್ತಿದ್ದರು. ನಂತರ‌ ಸೂರಜ್‌ ಹಾಗೂ ಆರೋಪಿ ಬ್ಯಾಂಕ್‌ ಸಿಬ್ಬಂದಿ ಹಣ ಹಂಚಿಕೊಳ್ತಿದ್ದರು. ಸದ್ಯ ಇದೀಗ ಈ ಘಟನೆ ಸಂಬಂಧ 19 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆ ಹಣ ವಂಚನೆ ಪ್ರಕರಣ; ಮತ್ತೆ ಆರು ಜನರ ಬಂಧನ

ಇನ್ನು ಬಂಧಿತ ಆರೋಪಿಗಳು ಪ್ರವಾಸೋದ್ಯಮ ಇಲಾಖೆ ಜೊತೆಗೆ ಇತರೆ ನಾಲ್ಕು ಇಲಾಖೆ ಹಣ ಕೂಡ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ 79 ಲಕ್ಷ 75 ಸಾವಿರ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ 86 ಲಕ್ಷದ 40 ಸಾವಿರ, ಕೈಮಗ್ಗ ಮತ್ತು ಜವಳಿ ಇಲಾಖೆಯ 18 ಲಕ್ಷದ 15 ಸಾವಿರ, ಹಿಂದುಳಿದ ವರ್ಗ ಕಲ್ಯಾಣ ಇಲಾಖೆಯ 1 ಕೋಟಿ 76 ಲಕ್ಷದ 58 ಸಾವಿರ ಸೇರಿ ಒಟ್ಟು ಐದು ಇಲಾಖೆಯ 6 ಕೋಟಿ ವಂಚನೆ ನಡೆದಿದೆ. ಇತರೆ ಖಾತೆಗಳ ವಂಚನೆಯಲ್ಲೂ ಇವರದ್ದೇ ಕೈವಾಡ ಇರುವುದು ಬಹುತೇಕ ಖಚಿತವಾಗಿದೆ. ವಂಚನೆ ಹಣ ಆರು ಕೋಟಿಗೆ ತಲುಪಿದ ಹಿನ್ನೆಲೆ ಸಿಐಡಿಗೆ ಪ್ರಕರಣವನ್ನು ಹಸ್ತಾಂತರಿಸುವ ಸಾಧ್ಯತೆ ಇದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ