Bagalkote: ಕೂಡಲಸಂಗಮದಲ್ಲಿ ಜನವರಿ 12ರಿಂದ 14 ರವರೆಗೆ 36ನೇ ಶರಣಮೇಳ; ಮಾತೆ ಗಂಗಾದೇವಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 09, 2023 | 4:20 PM

36th Sharan Mela: ಬಾಗಲಕೋಟೆಯ ಕೂಡಲಸಂಗಮದಲ್ಲಿ ಜನವರಿ 12 ರಿಂದ 14 ರವರೆಗೆ ಮೂರು ದಿನಗಳ ಕಾಲ‌ 36ನೇ ಶರಣಮೇಳ ನಡೆಸುವುದಾಗಿ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದ್ದಾರೆ.

Bagalkote: ಕೂಡಲಸಂಗಮದಲ್ಲಿ ಜನವರಿ 12ರಿಂದ 14 ರವರೆಗೆ  36ನೇ ಶರಣಮೇಳ; ಮಾತೆ ಗಂಗಾದೇವಿ
ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ
Follow us on

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಜನವರಿ 12 ರಿಂದ 14 ರವರೆಗೆ ಮೂರು ದಿನಗಳ ಕಾಲ‌ 36ನೇ ಶರಣಮೇಳ ನಡೆಸಲಾಗುವುದು ಎಂದು ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದ್ದಾರೆ. ಜನವರಿ 12ರಂದು ಮೊದಲ ದಿನ ರಾಷ್ಟ್ರೀಯ ಬಸವದಳದ 32ನೇ ಅಧಿವೇಶನ ಆಯೋಜನೆ ಮಾಡಲಾಗಿದ್ದು ಕಾರ್ಯಕ್ರಮವನ್ನ ಸಚಿವ ಮುರಗೇಶ ನಿರಾಣಿ ಅವರು ಉದ್ಘಾಟನೆ ಮಾಡಲಿದ್ದಾರೆ. ಎರಡನೇ ದಿನ ಜನವರಿ 13 ರಂದು 36ನೇ ಶರಣಮೇಳವನ್ನ ಸಿಎಂ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಲಿದ್ದಾರೆ.

ಇನ್ನು ಇದೇ ಕಾರ್ಯಕ್ರಮದಲ್ಲಿ ಬಸವ ವಚನಾಮೃತ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದು, ಸಚಿವ ಗೋವಿಂದ ಕಾರಜೋಳ ಅವರು ಬಿಡುಗಡೆ ಮಾಡಲಿದ್ದಾರೆ. ಇದರ ಜೊತೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದ್ದು, ಇನ್ನು ಕೊನೆಯ ದಿನ ಜ.14ರಂದು ಸಮುದಾಯ ಪ್ರಾರ್ಥನೆ ಮತ್ತು ವಚನ ಪಠಣ ಸಮಾರಂಭದ ನಡೆಸಲಿದ್ದು ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಎಂ.ಬಿ‌.ಪಾಟೀಲ್ ಹಾಗೂ ಎಸ್.ಅರ್.ಪಾಟೀಲ್ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:Gavisiddeshwara: ಜನ.. ಜನ.. ಎಲ್ಲೆಲ್ಲೂ ಜನ..ಗವಿಸಿದ್ದೇಶ್ವರ ಅಜ್ಜನ ಜಾತ್ರೆಯಲ್ಲಿ ಸಾಗರದ ಅಲೆಗಳು ಉಕ್ಕಿದಂತೆ ಕಾಣ್ತಿರೋ ಭಕ್ತಗಣ: ವಿಡಿಯೋ ನೋಡಿ

ಹಾಸನ: ಹೆಚ್.ಡಿ.ದೇವೇಗೌಡರ ಫೋಟೋ ಹಿಡಿದು ಅಯ್ಯಪ್ಪಸ್ವಾಮಿ ದರ್ಶನ

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಳ್ಳಿಮುದ್ದನಹಳ್ಳಿ ಗ್ರಾಮದ ಯುವಕರು ಮಾಜಿಪ್ರಧಾನಿ ಹೆಚ್.ಡಿ.ದೇವೇಗೌಡರ ಫೋಟೋ ಹಿಡಿದು ಪಾದಯಾತ್ರೆ ಮೂಲಕ ಅಯ್ಯಪ್ಪಸ್ವಾಮಿ ದರ್ಶನ ಪಡೆದಿದ್ದಾರೆ. ಕನ್ನಡನಾಡಿನ ಏಕೈಕ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ಫೋಟೋ ಹಿಡಿದು ಅವರಿಗೆ ಆರೋಗ್ಯ, ಆಯಸ್ಸು ನೀಡುವುದರ ಜೊತೆಗೆ 2023 ಕ್ಕೆ ಹೆಚ್.ಡಿ.ಕುಮಾರಸ್ವಾಮಿಯವರು ಸಿಎಂ ಆಗಲಿ ಎಂದು ದೇವರಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಮಾಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 4:04 pm, Mon, 9 January 23