ಬಾಗಲಕೋಟೆ: ಕಬ್ಬು ತುಂಬಿ ನಿಂತ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಕಾರು; ಬನಶಂಕರಿದೇವಿ ಜಾತ್ರೆಗೆ ಹೋದ ನಾಲ್ವರು ಸಾವು

ಉತ್ತರಕರ್ನಾಟಕದ ಪ್ರಸಿದ್ದ ಬನಶಂಕರಿದೇವಿ ಜಾತ್ರೆ. ಆ ಜಾತ್ರೆ ನಿನ್ನೆಯಿಂದ ಆರಂಭವಾಗಿದ್ದು,ಜಾತ್ರೆಗೆ ಹೋದ ನಾಲ್ವರು ಬಾರದ ಲೋಕಕ್ಕೆ ಸಾಗಿದ್ದಾರೆ. ಬೆಳ್ಳಂಬೆಳಿಗ್ಗೆ ನಡೆದ ಕಾರು ಟ್ರ್ಯಾಕ್ಟರ್ ಅಪಘಾತದಲ್ಲಿ ಮನೆಗೆ ಹೊರಟವರು ಮಸಣದ ಹಾದಿ ಹಿಡಿದಿದ್ದಾರೆ.

ಬಾಗಲಕೋಟೆ: ಕಬ್ಬು ತುಂಬಿ ನಿಂತ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಕಾರು; ಬನಶಂಕರಿದೇವಿ ಜಾತ್ರೆಗೆ ಹೋದ ನಾಲ್ವರು ಸಾವು
ಅಪಘಾತ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 26, 2024 | 7:51 PM

ಬಾಗಲಕೋಟೆ, ಜ.26: ಕಬ್ಬು ತುಂಬಿ ನಿಂತ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದು ನುಜ್ಜುಗುಜ್ಜಾದ ಘಟನೆ ಬಾಗಲಕೋಟೆ (Bagalakote) ಜಿಲ್ಲೆಯ ಬೀಳಗಿ ತಾಲ್ಲೂಕಿನ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಅನಗವಾಡಿ ಗ್ರಾಮದ ಬಳಿ ಬೆಳಿಗ್ಗೆ ನಾಲ್ಕು ಗಂಟೆಯ ಸುಮಾರಿಗೆ ನಡೆದಿದೆ. ಭೀಕರ ಅಪಘಾತ(Accident)ದಲ್ಲಿ ಓರ್ವ ಮಹಿಳೆ,ಮೂವರು ಪುರುಷರು ಸೇರಿ ಒಟ್ಟು ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಅಪಘಾತದ ಸದ್ದು ಕೇಳಿ ಬಂದ ಸ್ಥಳೀಯರು, ಕೂಡಲೇ ಬೀಳಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಹಾಗೂ ಸ್ಥಳೀಯರು ಸೇರಿ ಶವ ಹೊರತೆಗೆಯಲು ಹರಸಾಹಸ ಪಡಬೇಕಾಯಿತು.

ಈ ಬಗ್ಗೆ ಮಾತಾಡಿದ ಪ್ರತ್ಯಕ್ಷದರ್ಶಿ ಬಸು ಛಬ್ಬಿ ಎಂಬಾತ ‘ನಾಲ್ಕು ಗಂಟೆಗೆ ಹೊಲಕ್ಕೆ ಹೋಗಿ ಬರುವಾಗ ಜೋರಾದ ಸದ್ದು ಕೇಳಿ ಬಂತು. ಹೋಗಿ ನೋಡಿದರೆ ಕಾರು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ‌ ಮೃತಪಟ್ಟಿದ್ದರು ಎಂದಿದ್ದಾನೆ. ಮೃತರೆಲ್ಲರೂ ವಿಜಯಪುರ ತಾಲ್ಲೂಕಿನ ಹೊನಗಳ್ಳಿ ಗ್ರಾಮದವರಾಗಿದ್ದಾರೆ. ಚಾಲಕ ಮಲ್ಲು ಪೂಜಾರಿ(25), ಕಲ್ಲು ಕವಟಗಿ(35), ಕಾಮಾಕ್ಷಿ ಬಡಿಗೇರ(30), ತುಕಾರಾಮ ತಳೇವಾಡ(30) ಮೃತರಾಗಿದ್ದಾರೆ. ಇವರಲ್ಲಿ ಕಲ್ಲು ಕವಟಗಿ ಎಂಬಾತ ಗ್ರಾಮ ಪಂಚಾಯತಿ ಸದಸ್ಯರಾಗಿದ್ದಾರೆ.

ಇದನ್ನೂ ಓದಿ:ತಮಿಳುನಾಡು: 4 ವಾಹನಗಳು ಪರಸ್ಪರ ಡಿಕ್ಕಿ, ನಾಲ್ವರು ಸಾವು; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಎಲ್ಲರೂ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಬನಶಂಕರಿ ದೇವಿ ಜಾತ್ರೆಗೆ ಎಂದು ಮನೆಯಿಂದ ಹೊರಟಿದ್ದರು. ನಂತರ ವಾಪಾಸ್ ವಿಜಯಪುರ ಕಡೆ ಹೊರಡುವಾಗ ಈ ದುರ್ಘಟನೆ ನಡೆದಿದೆ. ಇನ್ನು ಸುದ್ದಿ ತಿಳಿದು ಬಾಗಲಕೋಟೆ ಎಸ್ ಪಿ ಅಮರನಾಥ ರೆಡ್ಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೇಲ್ನೋಟಕ್ಕೆ ಅತಿ ವೇಗದಿಂದ ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ, ಹಂಪ್ಸ್ ಇದ್ದರೂ ವೇಗ ಕಡಿಮೆ‌ ಮಾಡದೆ ವೇಗವಾಗಿ ಓಡಿಸಿದ್ದಾನೆ. ಇದರಿಂದ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಈ ಕುರಿತು ಬೀಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಒಟ್ಟಿನಲ್ಲಿ ಬನಶಂಕರಿದೇವಿ ಜಾತ್ರೆಗೆ ಹೋದೋರು ಬಾರದ ದಾರಿಗೆ ಹೋಗಿದ್ದು ವಿಪರ್ಯಾಸ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ