AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: ದಿ ಕೇರಳ ಸ್ಟೋರಿ ವೀಕ್ಷಿಸಲು ಬಾಗಲಕೋಟೆಯಲ್ಲಿ ಕಾಲೇಜಿಗೆ ಅರ್ಧ ದಿನ ರಜೆ, ಬಿಜೆಪಿ ಮಾಜಿ ಶಾಸಕನಿಂದ ಫ್ರೀ ಶೋ

ಬಾಗಲಕೋಟೆ ಜಿಲ್ಲೆಯ ಇಳಕಲ್‌ನಲ್ಲಿರುವ ಶ್ರೀ ವಿಜಯ ಮಹಾಂತೇಶ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಬುಧವಾರ ಮಧ್ಯಾಹ್ನ ತನ್ನ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಿದ್ದು ವಿವಾದಾತ್ಮಕ ಚಲನಚಿತ್ರ ಎಂದೆನಿಸಿಕೊಂಡಿರುವ 'ದಿ ಕೇರಳ ಸ್ಟೋರಿ' ವೀಕ್ಷಿಸಲು ಎಲ್ಲಾ ವಿದ್ಯಾರ್ಥಿಗಳಿಗೆ ಸೂಚಿಸಿದೆ.

The Kerala Story: ದಿ ಕೇರಳ ಸ್ಟೋರಿ ವೀಕ್ಷಿಸಲು ಬಾಗಲಕೋಟೆಯಲ್ಲಿ ಕಾಲೇಜಿಗೆ ಅರ್ಧ ದಿನ ರಜೆ, ಬಿಜೆಪಿ ಮಾಜಿ ಶಾಸಕನಿಂದ ಫ್ರೀ ಶೋ
‘ದಿ ಕೇರಳ ಸ್ಟೋರಿ’ ಸಿನಿಮಾ ಪೋಸ್ಟರ್​
ಆಯೇಷಾ ಬಾನು
|

Updated on: May 24, 2023 | 12:37 PM

Share

ಬಾಗಲಕೋಟೆ: ದೇಶಾದ್ಯಂತ ಭಾರೀ ಸಂಚಲನ ಎಬ್ಬಿಸಿರುವ ಬಾಲಿವುಡ್​ನ ದಿ ಕೇರಳ ಸ್ಟೋರಿ(The Kerala Story) ಸಿನಿಮಾ ವೀಕ್ಷಿಸಲು ಕಾಲೇಜು ಆಡಳಿತ ಮಂಡಲಿ ವಿದ್ಯಾರ್ಥಿಗಳಿಗೆ ಅರ್ಧ ದುನದ ರಜೆ ನೀಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಜಿಲ್ಲೆಯ ಇಳಕಲ್‌ನಲ್ಲಿರುವ ಶ್ರೀ ವಿಜಯ ಮಹಾಂತೇಶ ಆಯುರ್ವೇದಿಕ್ ಮೆಡಿಕಲ್ ಕಾಲೇಜು(Sri Vijay Mahantesh Ayurvedic Medical College) ಬುಧವಾರ ಮಧ್ಯಾಹ್ನ ತನ್ನ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಿದ್ದು ವಿವಾದಾತ್ಮಕ ಚಲನಚಿತ್ರ ಎಂದೆನಿಸಿಕೊಂಡಿರುವ ‘ದಿ ಕೇರಳ ಸ್ಟೋರಿ’ ವೀಕ್ಷಿಸಲು ಎಲ್ಲಾ ವಿದ್ಯಾರ್ಥಿಗಳಿಗೆ ಸೂಚಿಸಿದೆ. ಬಿಎಎಮ್​ಎಸ್ ಮೊದಲ ವರ್ಷದಿಂದ ಫೈನಲ್ ವರ್ಷದ ಎಲ್ಲಾ ವಿದ್ಯಾರ್ಥಿಗಳು ಸಿನಿಮಾ ನೋಡುವಂತೆ ತಿಳಿಸಿದ್ದಾರೆ.

ಕಾಲೇಜು ಪ್ರಾಂಶುಪಾಲರಾದ ಡಾ.ಕೆ.ಸಿ.ದಾಸ್ ಅವರು ಮೇ 23 ರಂದು ಹೊರಡಿಸಿದ ನೋಟಿಸ್‌ನಲ್ಲಿ, ಪಟ್ಟಣದ ಶ್ರೀನಿವಾಸ್ ಟಾಕೀಸ್‌ನಲ್ಲಿ ಮಧ್ಯಾಹ್ನ 12 ರಿಂದ 03 ರವರೆಗೆ ಎಲ್ಲಾ ಪದವಿ ಆಯುರ್ವೇದಿಕ್ ಮೆಡಿಸಿನ್ ಮತ್ತು ಸರ್ಜರಿ (ಬಿಎಎಂಎಸ್) ವಿದ್ಯಾರ್ಥಿನಿಯರಿಗೆ ಉಚಿತವಾಗಿ ಚಲನಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಬೆಳಿಗ್ಗೆ 9 ರಿಂದ 12 ರವರೆಗೆ ಕ್ಲಾಸ್ ಅಟೆಂಡ್ ಮಾಡಿ ನಂತರ ಫ್ರೀಯಾಗಿ ದಿ ಕೇರಳಾ ಸಿನಿಮಾ ನೋಡಿ ಎಂದು ಪ್ರಾಂಶುಪಾಲರು ಕಾಲೇಜಿನಲ್ಲಿ ನೋಟಿಸ್ ಅಂಟಿಸಿದ್ದಾರೆ. ಸಿನಿಮಾಗಾಗಿ ತರಗತಿಗಳನ್ನು ಸ್ಥಗಿತಗೊಳಿಸಿದ್ದಾರೆ.

ಇದನ್ನೂ ಓದಿ: ದಿ ಕೇರಳ ಸ್ಟೋರಿ ಸಿನಿಮಾ ವಿಚಾರವಾಗಿ ಗಲಾಟೆ, ಗೆಳೆಯನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ಯುವತಿ

ಫ್ರೀ ಸಿನಿಮಾ ಆಯೋಜಿಸಿದ ಮಾಜಿ ಶಾಸಕ

ಇನ್ನು ಮತ್ತೊಂದೆಡೆ ಬಾಗಲಕೋಟೆ ನಗರದ ಚಂದನ ಥಿಯೇಟರ್ ‌ನಲ್ಲಿ ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಂದ ದಿ ಕೇರಳ ಸಿನಿಮಾ ಫ್ರೀ ಶೋ ಆಯೋಜನೆ ಮಾಡಲಾಗಿದೆ. ಮೇ 23ರಿಂದ ಮೇ 25ರ ವರೆಗೆ ಮೂರು ದಿನ ಫ್ರೀ ಶೋ ಆಯೋಜಿಸಲಾಗಿದೆ. ಪ್ರತಿದಿನ 3 ಗಂಟೆಯಿಂದ ಸಂಜೆ 6 ರ ಶೋವನ್ನು ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ. ಎಲ್ಲ ಹಿಂದೂ ವಿದ್ಯಾರ್ಥಿಗಳು ಒಟ್ಟಾಗಿ ನೋಡಿ ಎಂದು ಮಾಜಿ ಶಾಸಕ, ಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಮನವಿ ಮಾಡಿದ್ದಾರೆ.

ಹಲವು ರಾಜಕೀಯ ಪಕ್ಷಗಳ ವಿರೋಧದ ನಡುವೆಯೂ ‘ದಿ ಕೇರಳ ಸ್ಟೋರಿ’ ಸಿನಿಮಾ ಮೇ 5 ರಂದು ದೇಶಾದ್ಯಂತ ಬಿಡುಗಡೆಯಾಗಿತ್ತು. ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ನಿಂದ ಮಹಿಳೆಯರನ್ನು ಹೇಗೆ ಬಲವಂತವಾಗಿ ಮತಾಂತರಿಸಲಾಗುತ್ತದೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ಚಿತ್ರದ ಬಗ್ಗೆ ಮಾತನಾಡಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ