AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ನಿರಂತರ ಮಳೆಗೆ ಗೋಡೆ ಕುಸಿದು ಬಾಲಕ ಸಾವು; ಮತ್ತೋರ್ವನಿಗೆ ಗಂಭೀರ ಗಾಯ

ಕರ್ನಾಟಕದಲ್ಲಿ ಕೊಂಚ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ಅಬ್ಬರಿಸಲು ಶುರು ಆಗಿದೆ. ಧಾರಾಕಾರ ಮಳೆಗೆ ಹಲವೆಡೆ ಅವಾಂತರಗಳು ಉಂಟಾಗಿವೆ. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಮನೆ ಮೇಲ್ಚಾವಣಿ ಮತ್ತು ಗೋಡೆ ಕುಸಿದು ಬಾಲಕ ಸಾವನ್ನಪ್ಪಿರುವಂತಹ ಭೀಕರ ಘಟನೆ ನಡೆದಿದೆ.

ಬಾಗಲಕೋಟೆ: ನಿರಂತರ ಮಳೆಗೆ ಗೋಡೆ ಕುಸಿದು ಬಾಲಕ ಸಾವು; ಮತ್ತೋರ್ವನಿಗೆ ಗಂಭೀರ ಗಾಯ
ಮಳೆಗೆ ಕುಸಿದ ಗೋಡೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Sep 27, 2025 | 11:15 AM

Share

ಬಾಗಲಕೋಟೆ, ಸೆಪ್ಟೆಂಬರ್​ 27: ರಾಜ್ಯದಲ್ಲಿ ಕೊಂಚ ಬಿಡುವು ನೀಡಿದ್ದ ಮಳೆರಾಯ (rain) ಮತ್ತೆ ಅಬ್ಬರಿಸಲು ಶುರುವಾಗಿದೆ. ಪರಿಣಾಮ ಮನೆ ಮೇಲ್ಚಾವಣಿ, ಗೋಡೆ ಕುಸಿದು ಬಾಲಕ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ನಡೆದಿದೆ. ಬೆಳಗಿನ ಜಾವ 5 ಗಂಟೆಗೆ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿದುಬಿದ್ದು, ದರ್ಶನ್ ಲಾತೂರ(11) ಮೃತಪಟ್ಟಿದ್ದಾನೆ. ಮತ್ತೋರ್ವ ಬಾಲಕ ಶ್ರೀಶೈಲ್​ಗೆ ಗಂಭೀರ ಗಾಯಗಳಾಗಿವೆ.

ಮೃತ ದರ್ಶನ್ ಲಾತೂರ, ನಾಗಪ್ಪ ಲಾತೂರ್ ಎಂಬುವವರ ಮಗ. ಮಹಾಲಿಂಗಪುರದ ಅಂಬೇಡ್ಕರ್ ವೃತ್ತದ ಬಳಿ ಮನೆ ಇದ್ದು, ಇಬ್ಬರು ಮಕ್ಕಳು ಮನೆಯ ಕೋಣೆಯಲ್ಲಿ ತಾಯಿಯೊಂದಿಗೆ ಮಲಗಿದ್ದರು. ಬೆಳಗ್ಗೆ ತಾಯಿ ಎದ್ದು ಬೇರೆ ಕೊಠಡಿಗೆ ಬರುತ್ತಿದ್ದಂತೆ ಇತ್ತ ಗೋಡೆ ಕುಸಿದುಬಿದ್ದಿದೆ.

ಇದನ್ನೂ ಓದಿ: Karnataka Weather: ಇಂದಿನಿಂದ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆ, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಅವಘಡದಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಗಾಯಗೊಂಡ ಬಾಲಕ ಶ್ರೀಶೈಲ್​ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೆತ್ತ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮಟ್ಟಿದೆ.

ತೋಟದ ಮನೆಯಲ್ಲಿ ಸಿಲುಕಿದ್ದ 8 ಜನರ ರಕ್ಷಣೆ

ವಿಜಯಪುರ ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹದಿಂದ ಜನರು ತತ್ತರಿಸಿದ್ದಾರೆ. ಆಲಮೇಲ ತಾಲೂಕಿನ ತಾವರಖೇಡ ಗ್ರಾಮದಲ್ಲಿ ಭೀಮಾ ನದಿ ಪ್ರವಾಹದಿಂದ ಮನೆಗಳು ಜಲಾವೃತಗೊಂಡಿದೆ. ಪ್ರವಾಹ ಸ್ಥಿತಿಯ ನಡುವೆಯೂ ತೋಟದಲ್ಲಿ ಕುಟುಂಬಗಳು ವಾಸವಿದ್ದರು. ತೋಟದ ಮನೆಗಳಲ್ಲಿದ್ದ 8 ಜನರನ್ನು ಬೋಟ್ ಮೂಲಕ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಧಾರಾಕಾರ ಮಳೆ: ಸೇತುವೆಗಳು ಮುಳುಗಡೆ

ಕಲಬುರಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಜಿಲ್ಲೆಯ ಚಿಂಚೋಳಿ ತಾಲೂಕಿನ ಮುಲ್ಲಾಮಾರಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ 2 ಕಿರು ಸೇತುವೆಗಳು ಮುಳುಗಡೆ ಆಗಿವೆ. ನಿನ್ನೆಯಿಂದ ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ಗ್ರಾಮಸ್ಥರು ಪರದಾಡುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್