ಬಾಗಲಕೋಟೆ ಉಪಚುನಾವಣೆ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ: ಆಪ್ತನ ಮಗನ ಗೆಲುವಿಗೆ ಪಣ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾವೇರಿದೆ. ಹೆಚ್.ವೈ. ಮೇಟಿ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಏಪ್ರಿಲ್ 9ರಂದು ಚುನಾವಣೆ ನಡೆಯಲಿದೆ. ಇದೀಗ ಬಾಗಲಕೋಟೆ ಉಪಚುನಾವಣೆ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯರ ಎಂಟ್ರಿ ಆಗಿದೆ. ಉಮೇಶ್ ಮೇಟಿ ಪರ ಪ್ರಚಾರ ನಡೆಸಲಿದ್ದು, ಆಪ್ತನ ಮಗನ ಗೆಲುವಿಗೆ ಪಣತೊಟ್ಟಿದ್ದಾರೆ.

ಬಾಗಲಕೋಟೆ ಉಪಚುನಾವಣೆ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ: ಆಪ್ತನ ಮಗನ ಗೆಲುವಿಗೆ ಪಣ
ಸಿಎಂ ಸಿದ್ದರಾಮಯ್ಯ, ಉಮೇಶ್ ಮೇಟಿ
Image Credit source: thehindu.com
Edited By:

Updated on: Mar 29, 2026 | 6:04 PM

ಬಾಗಲಕೋಟೆ, ಮಾರ್ಚ್​ 29: ಏ.9ರಂದು ನಡೆಯಲಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿರುಬಿಸಿಲಿನಲ್ಲೂ ಕಾಂಗ್ರೆಸ್​​ ನಾಯಕರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದು, ನಾಳೆಯಿಂದ ಅಭ್ಯರ್ಥಿ ಉಮೇಶ್ ಮೇಟಿ ಪರ ಮತಬೇಟೆಗೆ ಇಳಿಯಲಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ 5 ದಿನ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಆಪ್ತರಾಗಿದ್ದ ಹಾಲುಮತದ ಹೆಚ್.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿತ್ತು. ಟಿಕೆಟ್​​ಗಾಗಿ ಮೇಟಿ ಕುಟುಂಬದ ಮಧ್ಯಯೇ ಫೈಟ್ ನಡೆದಿತ್ತು. ಬಳಿಕ ಹೆಚ್​​.ವೈ. ಮೇಟಿ ಅವರ ಎರಡನೇ ಮಗ ಉಮೆಶ್ ಮೇಟಿ​​ಯನ್ನು ಕಾಂಗ್ರೆಸ್​​ ತನ್ನ ಅಭ್ಯರ್ಥಿಯಾಗಿ ಘೋಷಿಸಿತ್ತು.

ಆಪ್ತನ ಮಗನ ಗೆಲ್ಲಿಸಲು 5 ದಿನ ಪ್ರಚಾರ

ಸದ್ಯ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ, ಸರ್ಕಾರದ ವರ್ಚಸ್ಸಿನ ಜೊತೆ ಸಮುದಾಯ ಗೌರವ ಕಾಪಾಡಬೇಕಿದೆ. ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ ಒಮ್ಮೆ ಮಾತ್ರ ಪ್ರಚಾರ ನಡೆಸಿದ್ದರು. ಆದರೆ ಇದೀಗ ಆಪ್ತನ ಮಗನ ಗೆಲ್ಲಿಸಲು 5 ದಿನ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ ಉಪ ಚುನಾವಣೆ: ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ

ನಾಳೆ ಅಂದರೆ ಮಾರ್ಚ್​ 30ರ ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬಳ್ಳಾರಿ ಜಿಲ್ಲೆಯ ಜಿಂದಾಲ್ ಏರ್​ಸ್ಟ್ರಿಪ್​ಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ನಂತರ ಹೆಲಿಕಾಪ್ಟರ್​ನಲ್ಲಿ ಆಲಮಟ್ಟಿ ಡ್ಯಾಮ್​ನತ್ತ ಪ್ರಯಾಣ ಬೆಳಸಲಿದ್ದಾರೆ. ಆಲಮಟ್ಟಿ ಡ್ಯಾಮ್ ಹೆಲಿಪ್ಯಾಡ್​ನಿಂದ ಕಾರಿನಲ್ಲಿ ಸುತಗುಂಡಾರ ಗ್ರಾಮಕ್ಕೆ ಆಗಮಿಸುವ ಸಿಎಂ, ಮಧ್ಯಾಹ್ನ 1 ಗಂಟೆಗೆ ಸುತಗುಂಡಾರ ಗ್ರಾಮದಲ್ಲಿ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ಮಾಡಲಿದ್ದಾರೆ.

ಇದನ್ನೂ ಓದಿ: ಮೂರನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು?

ನಂತರ ನಾಯನೇಗಲಿ, ರಾಂಪುರ, ಬೇವೂರು ಗ್ರಾಮಗಳಲ್ಲಿ ಮತಯಾಚನೆ ಬಳಿಕ ಅಂದು ರಾತ್ರಿ ಆಲಮಟ್ಟಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಇನ್ನು ಮಾರ್ಚ್ 31ರಂದು ಬೆಳಗ್ಗೆ 11ಕ್ಕೆ ಮುಗಳೊಳ್ಳಿ, ಮಧ್ಯಾಹ್ನ 1ಗಂಟೆಗೆ ನೀಲಾನಗರ, 4ಗಂಟೆಗೆ ಐಹೊಳೆ ಮತ್ತು 6ಗಂಟೆಗೆ ಅಮೀನಗಢದಲ್ಲಿ ಸಿಎಂ ಸಿದ್ದರಾಮಯ್ಯ ಮತಯಾಚನೆ ಮಾಡಲಿದ್ದಾರೆ. ಏಪ್ರಿಲ್ 3, 4 ಮತ್ತು 6ರಂದು 2ನೇ ಹಂತದಲ್ಲಿ ಮತ್ತೆ ಪ್ರಚಾರ ಮಾಡಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us