AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ತುಂಬಿದ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣ; 10 ಜನ ‌ಪೊಲೀಸರ ವಶಕ್ಕೆ

ಕಬ್ಬಿಗೆ 3500 ರೂ. ದರಕ್ಕೆ ಒತ್ತಾಯಿಸಿ ರೈತರು ಪ್ರತಿಭಟಿಸಿದ್ದರು. ಇದೇ ವೇಳೆ ಬಾಗಲಕೋಟೆ ಜಿಲ್ಲೆಯ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ಕಿಡಿಗೇಡಿಗಳು ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ್ದರು. ಈ ಸಂಬಂಧ ಪೊಲೀಸರು 10 ರೈತರನ್ನು ವಶಕ್ಕೆ ಪಡೆದಿದ್ದು, ಇದಕ್ಕೆ ವಿರೋಧಿಸಿ ರೈತ ಮುಖಂಡರು ತುರ್ತು ಸಭೆ ಕರೆದಿದ್ದಾರೆ.

ಕಬ್ಬು ತುಂಬಿದ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣ; 10 ಜನ ‌ಪೊಲೀಸರ ವಶಕ್ಕೆ
ಕಬ್ಬು ತುಂಬಿದ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್​ಚಿದ್ದ ಪ್ರಕರಣ ಹಿನ್ನೆಲೆ 10 ಜನರನ್ನು ‌ವಶಕ್ಕೆ ಪಡೆದ ಪೊಲೀಸರು
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Nov 16, 2025 | 12:21 PM

Share

ಬಾಗಲಕೋಟೆ, ನವೆಂಬರ್ 16: ಜಿಲ್ಲೆಯ ರಬಕವಿ ಬನಹಟ್ಟಿಯ ಸಮೀರವಾಡಿ ಬಳಿಯಿರುವ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ (Sugarcane Farmers Protest) ಕಬ್ಬು ತುಂಬಿದ್ದ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 10 ಜನ ರೈತರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಈ ನಡೆಯನ್ನು ವಿರೋಧಿಸಿ ರೈತರು ತುರ್ತು ಸಭೆಗೆ ಮುಂದಾಗಿದ್ದಾರೆ.

ರೈತರ ವಶಕ್ಕೆ ರೈತ ಮುಖಂಡರ ಖಂಡನೆ

ಕಬ್ಬಿಗೆ ಯೋಗ್ಯ ಬೆಲೆ ನೀಡುವಂತೆ ಆಗ್ರಹಿಸಿ ಮುಧೋಳದಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಆಕ್ರೋಶ ತೀವ್ರಗೊಂಡ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಕಾರ್ಖಾನೆಗೆ ಮುತ್ತಿಗೆ ಹಾಕಲು ಹೊರಟಿದ್ದರು. ಈ ಸಂದರ್ಭದಲ್ಲಿ ಕಾರ್ಖಾನೆ ಆವರಣದಲ್ಲಿ ನಿಂತಿದ್ದ ಕಬ್ಬು ತುಂಬಿದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಸಂಬಂಧ ಸಿದ್ದಪ್ಪ ಬಳಗಾನೂರ, ಮಲ್ಲು ಮೆಟಗುಡ್ಡ, ರಾಜುಗೌಡ ಪಾಟೀಲ್, ಬಸು ನಾಯ್ಕರ್ ಸೇರಿದಂತೆ ಒಟ್ಟು 10 ಮಂದಿಯನ್ನು ಮಹಾಲಿಂಗಪುರ ಠಾಣೆಯ ಪೊಲೀಸರು ವಿಚಾರಣೆಗೆ ಕರೆದಿದ್ದು, ನಂತರ ಅವರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ರೋಷಾಗ್ನಿ: 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ

ರೈತರನ್ನು ವಶಕ್ಕೆ ಪಡೆದಿದ್ದನ್ನು ಖಂಡಿಸಿ ರೈತ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಎಲ್‌ಬಿಸಿ ಐಬಿ ಆವರಣದಲ್ಲಿ ತುರ್ತು ಸಭೆ ಕರೆಯಲಾಗಿದ್ದು, ಮುಂದಿನ ಹೋರಾಟದ ತೀವ್ರತೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ ಕಣ್ಮುಂದೆ ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ

ಘಟನೆಯ ಹಿನ್ನೆಲೆಯೇನು?

ಸರ್ಕಾರ ನಿಗದಿ ಪಡಿಸಿದ 3300 ರೂಪಾಯಿ ಕಬ್ಬಿನ ಬೆಲೆಗೆ ವಿರೋಧ ವ್ಯಕ್ತಪಡಿಸಿದ್ದ ಮುಧೋಳ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಸಕ್ಕರೆ ಕಾರ್ಖಾನೆ ಮಾಲೀಕರೇ ಮಾತುಕತೆಗೆ ಬರಬೇಕು. ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನೀಡಬೇಕು ಎಂದು ಆಕ್ರೋಶ ಹೊರಹಾಕಿದ್ದರು. ಅಷ್ಟೇ ಅಲ್ಲದೆ ಅ.13ರಂದು ಗೋದಾವರಿ ಸಕ್ಕರೆ ಕಾರ್ಖಾನೆಯ ಬಳಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್​ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಪ್ರತಿಕ್ರಿಯಿಸಿದ್ದ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್, ಇಡೀ ರಾಜ್ಯದಲ್ಲಿ ಎಲ್ಲೂ ಕೂಡ ರೈತರು ಹೀಗೆ ಮಾಡಿಲ್ಲ, ಹಾಗಾಗಿ ಇದು ರೈತರ ಹೆಸರಲ್ಲಿ ಕಿಡಿಗೇಡಿಗಳು ಮಾಡಿದ್ದು ಎಂದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:19 pm, Sun, 16 November 25

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ