ಕಾಶಿಯಲ್ಲಿ ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿ ಸಾವು
ಕುಂಭಮೇಳಕ್ಕೆ ತೆರಳಿದ್ದ ಬಾಗಲಕೋಟೆ ಜಿಲ್ಲೆಯ 44 ವರ್ಷದ ವ್ಯಕ್ತಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲಾ ಪಂಚಾಯತ್‌ನ ಹೊರಗುತ್ತಿಗೆ ಡೇಟಾ ಎಂಟ್ರಿ ಆಪರೇಟರ್ ಆಗಿದ್ದ ಸತೀಶ್, ಒಂದು ವಾರದ ಹಿಂದೆ ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಭಾಗವಹಿಸಿ ಕಾಶಿಗೆ ತೆರಳಿದ್ದರು. ಈ ವೇಳೆ ಸ್ನಾನ ಮಾಡುವಾಗ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಬಾಗಲಕೋಟೆ, ಫೆಬ್ರವರಿ 09: ಕಾಶಿಯಲ್ಲಿ ಸ್ನಾನ ಮಾಡುವ ವೇಳೆ ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಸತೀಶ್ ಜೋಶಿ (44) ಮೃತ ವ್ಯಕ್ತಿ. ಒಂದು ವಾರದ ಹಿಂದೆ ಕುಂಭಮೇಳದಲ್ಲಿ ಭಾಗಿಯಾಗಿದ್ದ ಸತೀಶ್, ಬಳಿಕ ಕಾಶಿಗೆ ತೆರಳಿದ್ದರು. ಬಾಗಲಕೋಟೆ ಜಿಲ್ಲಾ ಪಂಚಾಯತ್ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಇನ್ನು ಮೃತ ಸತೀಶ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.
ಪ್ರಯಾಗರಾಜ್ಗೆ ಹೋಗಿದ್ದ ಕೋಲಾರ ಯುವಕ ಸಾವು
ಕುಂಭಮೇಳದಲ್ಲಿ ಭಾಗಿಯಾಗಲು ಪ್ರಯಾಗರಾಜ್ಗೆ ಹೋಗಿದ್ದ ಯುವಕನೋರ್ವ ಮೃತಪಟ್ಟ ಘಟನೆ ಇತ್ತೀಚೆಗೆ ನಡೆದಿತ್ತು. ಪ್ರಯಾಗರಾಜ್ನಿಂದ ಅಯೋಧ್ಯೆಗೆ ಹೋಗುವಾಗ ಗೋರಖಪುರ ರೈಲು ನಿಲ್ದಾಣದಲ್ಲಿ ವಿದ್ಯುತ್ ತಗುಲಿ ಪ್ರವೀಣ್ ಹೊಸಮನಿ ಮೃತಪಟ್ಟಿದ್ದರು.
ಇದನ್ನೂ ಓದಿ: ಕ್ಯಾಸಿನೋದಲ್ಲಿ ಹೂಡಿಕೆ ಮಾಡುವುದಾಗಿ ನಂಬಿಸಿ ಕೋಟ್ಯಂತರ ರೂ ನಾಮ: ಸ್ಯಾಂಡಲ್ವುಡ್ ಡ್ರಗ್ ಕೇಸ್ ಆರೋಪಿಯಿಂದ ವಂಚನೆ
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿ ಸಿದ್ದಾಪುರ ಗ್ರಾಮದ ನಿವಾಸಿಯಾಗಿದ್ದ ಪ್ರವೀಣ್ ಹದಿನೈದು ದಿನದ ಹಿಂದೆ ಪ್ರಯಾಗರಾಜ್ಗೆ ಹೋಗಿದ್ದರು. ರೈಲು ನಿಲ್ದಾಣದಲ್ಲಿ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ ಅಂತ ಸ್ಥಳೀಯ ಪೊಲೀಸರು ಕುಟುಂಬದವರಿಗೆ ಮಾಹಿತಿ ನೀಡಿದ್ದರು.
ಕೆಎಸ್ಆರ್ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ದುರ್ಮರಣ
ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಗಂಡನನ್ನ ಹತ್ಯೆ ಮಾಡಿ ನದಿಗೆ ಎಸೆದ ಪತ್ನಿ
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಕೆಳಗೆ ಸಿಲುಕಿ ಬೈಕ್ ಅಪ್ಪಚ್ಚಿಯಾಗಿದೆ. ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವಾಗ ಓರ್ವ ಸಾವನ್ನಪ್ಪಿದ್ದಾರೆ. ಮತ್ತೋರ್ವ ಸವಾರನ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಎನ್ಹೆಚ್ 48ರಲ್ಲಿ ಕೆಲಕಾಲ ಟ್ರಾಫಿಕ್ಜಾಮ್ ಉಂಟಾಗಿತ್ತು. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:53 am, Sun, 9 February 25