ಅಚ್ಚರಿ ಘಟನೆಗೆ ಸಾಕ್ಷಿಯಾದ ಬಾಗಲಕೋಟೆ: ಪಶು ಆಸ್ಪತ್ರೆಗೆ ಬಂದು ವೈದ್ಯನ ಬಳಿ ತನ್ನ ಬಾಧೆ ತೋಡಿಕೊಂಡ ಮಂಗ, ವಿಡಿಯೋ ವೈರಲ್

ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲ್ಲೂಕಿನ ಗಡೂರು ಗ್ರಾಮದಲ್ಲಿ ಗಾಯಗೊಂಡ ಕೋತಿಯೊಂದು ಪಶು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದ ಘಟನೆ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿ. ತನ್ನ ಗಾಯವನ್ನು ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆದ ಕೋತಿಯ ಬುದ್ಧಿವಂತಿಕೆ ಎಲ್ಲರನ್ನೂ ಆಶ್ಚರ್ಯಗೊಳಿಸಿದೆ. ಘಟನೆಯ ವಿಡಿಯೋ ಕೂಡ ವೈರಲ್ ಆಗಿದೆ.

ಬಾಗಲಕೋಟೆ, ಮೇ 23: ಮನುಷ್ಯರಿಗೆ ಆರೋಗ್ಯ ಸಮಸ್ಯೆ ಆದರೆ ಕೂಡಲೇ ಆಸ್ಪತ್ರೆಗೆ ಹೋಗುತ್ತಾರೆ. ವೈದ್ಯರಿಗೆ ಸಮಸ್ಯೆ ಹೇಳಿ ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುತ್ತಾರೆ. ಅದೇ ರೀತಿ ಇಲ್ಲೊಂದು ಮಂಗ (Monkey)  ನೇರವಾಗಿ ಪಶು ಆಸ್ಪತ್ರೆಗೆ (veterinary hospital) ಹೋಗಿದೆ. ತನಗಾದ ಸಮಸ್ಯೆಯನ್ನು ವೈದ್ಯರಿಗೆ ತಾನೆ ಸನ್ನೆ ಮೂಲಕ ತೋರಿಸಿದೆ. ಬಳಿಕ ಚಿಕಿತ್ಸೆ ಪಡೆದುಕೊಂಡು ಹೋಗಿದೆ. ಸದ್ಯ ಈ ಘಟನೆ ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಮಂಗಗಳು ಮನುಷ್ಯರಷ್ಟೇ ಬುದ್ದಿ ಜೀವಗಳು ಅನ್ನೋದಕ್ಕೆ ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲ್ಲೂಕಿನ ಗಡೂರು ಗ್ರಾಮದ ಪಶು ಆಸ್ಪತ್ರೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಂಗ, ಚಿಕಿತ್ಸೆಗಾಗಿ ನೇರವಾಗಿ ಪಶು ಆಸ್ಪತ್ರೆಗೆ ಬಂದು ವೈದ್ಯನ ಬಳಿ ಸನ್ನೆ ಮೂಲಕ ತನ್ನ ಬಾಧೆಯನ್ನು ಹೇಳಿಕೊಂಡು ಅಚ್ಚರಿಗೆ ಗ್ರಾಸವಾಗಿದೆ.

ಇದನ್ನೂ ಓದಿ: ಬಾಗಲಕೋಟೆ: ಗಂಡ ನಾಪತ್ತೆ, ಮಾನಸಿಕ ಸ್ಥಿಮಿತ ಕಳೆದುಕೊಂಡ ಪತ್ನಿ, ದನದ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ ಪೋಷಕರು

ತನ್ನ ಗುದದ್ವಾರದ ಬಳಿ ಗಾಯವಾಗಿ, ತೀವ್ರ ನೋವಿನಿಂದ ಬಳಲುತ್ತಿದ್ದ ಕೋತಿಯೊಂದಕ್ಕೆ ತನ್ನ ನೋವಿಗೆ ಪರಿಹಾರ ಕಂಡುಕೊಂಡು ತಾನೆ ಚಿಕಿತ್ಸೆಗಾಗಿ ಪಶು ಆಸ್ಪತ್ರೆ ಬಳಿ ಬಂದಿದೆ. ಇದನ್ನು ಗಮನಿಸಿದ ಸಿಬ್ಬಂದಿ ವೈದ್ಯರನ್ನು ಕರೆದಿದ್ದಾರೆ. ಸ್ಥಳದಲ್ಲೇ ಇದ್ದ ಪಶುವೈದ್ಯಕೀಯ ಪರಿವೀಕ್ಷಕ ಜಿ.ಜಿ.ಬಿಲ್ಲೊರ ತಪಾಸಣೆ ಮಾಡುವಾಗ ಕೋತಿ ತನಗಾದ ಗಾಯದ ಬಗ್ಗೆ ತಾನೆ ತೋರಿಸಿದೆ. ಬಳಿಕ ಚಿಕಿತ್ಸೆ ನೀಡಲಾಗಿದೆ. ಮೂಕ ಪ್ರಾಣಿಯಾದರೂ ಈ ಮಂಗ ಯಾವ ಮನಷ್ಯನಿಗೂ ಕಮ್ಮಿ ಇಲ್ಲದಂತೆ ಬುದ್ದಿವಂತಿಕೆ ತೋರಿಸಿದೆ.

ಗುಡೂರ ಗ್ರಾಮದಲ್ಲಿ ಮಂಗಗಳ ಹಿಂಡು ಬೀಡುಬಿಟ್ಟಿದೆ. ಈ ಕೋತಿಗಳು ನಿತ್ಯ ಆಸ್ಪತ್ರೆ ಸುತ್ತಮುತ್ತಲಿನ ಗಿಡಮರಗಳಲ್ಲಿ ಓಡಾಡುತ್ತಿದ್ದವು. ಈ ಕೋತಿಯ ಬಾಲ ಕೂಡ ಮೊದಲೇ ಕಟ್ ಆಗಿದೆ. ಮರದಿಂದ ಮರಕ್ಕೆ ನೆಗೆಯುವಾಗ ಗುದದ್ವಾರದ ಬಳಿ ಗಾಯ ಆಗಿರುವ ಸಾಧ್ಯತೆ ಇದೆ. ಆ ಗಾಯದಿಂದ ಮಂಗಣ್ಣ ಬಳಲುತ್ತಿತ್ತು. ಬಹುಶಃ ಆಸ್ಪತ್ರೆ ಹೊರಗೆ ನಿತ್ಯ ಹಸು ಎಮ್ಮೆಗಳಿಗೆ ಚಿಕಿತ್ಸೆ ನಿಡುವುದನ್ನು ಗಮನಿಸಿದಂತ್ತಿದೆ. ತನಗೂ ನೋವಾದ ಹಿನ್ನೆಲೆ ಜಾನುವಾರುಗಳಂತೆ ತನ್ನ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಳ್ಳಲು ಬಂದಿರಬಹುದು.

ಆಸ್ಪತ್ರೆ ಬಳಿ ಇದ್ದ ಬೈಕ್ ಮೇಲೆ ಮಲಗಿ ಕೈ ಸನ್ನೆ ಮೂಲಕ ತನ್ನ ನೋವಿನ ವೇದನೆಯನ್ನು ಕೋತಿ ತೋಡಿಕೊಂಡಿದೆ. ಆಗ ವೈದ್ಯ ಕೋತಿ ನೋವು ಅರ್ಥೈಸಿಕೊಂಡು ಚಿಕಿತ್ಸೆ ನೀಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಅಚ್ಚರಿಗೆ ಕಾರಣವಾಗಿದೆ.

ಇದನ್ನೂ ಓದಿ: ಬಾಗಲಕೋಟೆ: ಕಲ್ಯಾಣಮಂಟಪದಲ್ಲೇ ವರನಿಗೆ ಹೃದಯಾಘಾತ, ತಾಳಿ ಕಟ್ಟಿಸಿಕೊಂಡ 15 ನಿಮಿಷದಲ್ಲೇ ವಿಧವೆಯಾದ ನವವಧು

ಮಂಗನಿಂದ ಮಾನವ ಅಂತ ನಾವೆಲ್ಲ ಸಾಕಷ್ಟು ಚರ್ಚೆ ಮಾಡುತ್ತೇವೆ. ಬೈಯುವಾಗಲೂ ‘ಏ ಮಂಗ’ ಅಂತ ಬೈಯುವುದನ್ನು ನೋಡಿದ್ದೇವೆ. ಆದರೆ ಅಂತಹ ಮಂಗ ತೋರಿದ ಜಾಣ್ಮೆಗೆ ಎನ್ನಲರು ಬೆರಗಾಗಿದ್ದಾರೆ. ಇದು ವಿಚಿತ್ರವಾದರೂ ಸತ್ಯ ಎಂದು ಸ್ಥಳೀಯರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಮಂಗನಿಂದ ಮಾನವ ಎನ್ನುವ ಮಾತಿನಂತೆ ಮಾನವನಷ್ಟೇ ನಾನು ಬುದ್ದಿವಂತ ಅನ್ನೊದನ್ನ ಈ ಕೋತಿ ಸಾಬೀತು ಪಡಿಸಿದೆ. ಜಾಣ ಕೋತಿಯ ಘಟನೆ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದು ಮಾತ್ರ ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us