Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ದಿಢೀರ್​ ಕುಸಿತ: ಕಾರಣವಾಯ್ತಾ ಶಾಲೆಗಳ ಅವ್ಯವಸ್ಥೆ?

Bagalkote News: ಬಾಗಲಕೋಟೆ ಜಿಲ್ಲೆಯಲ್ಲಿ ಈ ವರ್ಷ ಸರಕಾರಿ ಶಾಲಾ ಮಕ್ಕಳ ಸಂಖ್ಯೆ ಬಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜಿಲ್ಲೆಯಲ್ಲಿ 1 ರಿಂದ 10ನೇ ತರಗತಿ ವರೆಗೂ ಒಟ್ಟು 1,437 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಇದ್ದು, ಬಹುತೇಕ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆ ಆಗಿರುವುದು ಕಂಡು ಬರುತ್ತಿದೆ.

ಬಾಗಲಕೋಟೆಯ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ದಿಢೀರ್​ ಕುಸಿತ: ಕಾರಣವಾಯ್ತಾ ಶಾಲೆಗಳ ಅವ್ಯವಸ್ಥೆ?
ಪ್ರಾತಿನಿಧಿಕ ಚಿತ್ರ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 12, 2023 | 9:53 PM

ಬಾಗಲಕೋಟೆ, ಆಗಸ್ಟ್​ 12: ಕೊರೊನಾ ಬಳಿಕ ಅನೇಕ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗಳಲ್ಲಿ (government school) ಪ್ರವೇಶ ಮಾಡಿಸಿದ್ದರು. ಕಾರಣ ಸ್ಕೂಲ್ ಸರಿಯಾಗಿ ನಡೆಯದಿದ್ದರೂ ಹೆಚ್ಚಿನ ಶುಲ್ಕ ಕಟ್ಟಬೇಕು ಎನ್ನುವ ಕಾರಣ ಅಡಗಿತ್ತು. ಇದೀಗ ಕೊರೊನಾ ಕಾಟ ಇಲ್ಲದೇ ಶಾಲೆ, ಕಾಲೇಜ್​ಗಳು ಯಥಾಸ್ಥಿತಿಯಲ್ಲಿ ನಡೆಯುತ್ತಿವೆ. ಆದರೆ ಪಾಲಕರು ಮತ್ತೆ ಖಾಸಗಿ ಶಾಲೆಗಳ ಕಡೆಗೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಪುನಃ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ದಿಢೀರ್ ಇಳಿಕೆ ಕಂಡಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಈ ವರ್ಷ ಸರಕಾರಿ ಶಾಲಾ ಮಕ್ಕಳ ಸಂಖ್ಯೆ ಬಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜಿಲ್ಲೆಯಲ್ಲಿ 1 ರಿಂದ 10ನೇ ತರಗತಿ ವರೆಗೂ ಒಟ್ಟು 1,437 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಇದ್ದು, ಬಹುತೇಕ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆ ಆಗಿರುವುದು ಕಂಡು ಬರುತ್ತಿದೆ.

ಸಂಖ್ಯೆ ಕುಸಿತಕ್ಕೆ ಶಾಲೆಗಳ ಅವ್ಯವಸ್ಥೆ ಕಾರಣವೇ?

ಸರ್ಕಾರಿ ಶಾಲೆಗಳಲ್ಲಿ ಸಾಕಷ್ಟು ಸಮಸ್ಯೆಗಳು ತಾಂಡವಾಡುತ್ತಿರುವುದು ಸಹ ಮಕ್ಕಳ ಸಂಖ್ಯೆ ಕಡಿಮೆ ಆಗಲು ಕಾರಣ ಎಂದು ಕೆಲ ಶಿಕ್ಷಕರು ಹೇಳುತ್ತಾರೆ. ಶಿಕ್ಷಕರ ಸಮಸ್ಯೆ ಒಂದು ಕಡೆಯಾದರೆ, ಕೊಠಡಿಗಳ ಸಮಸ್ಯೆಯೂ ಇದೆ. ಅನೇಕ ಸರ್ಕಾರಿ ಶಾಲೆಗಳಲ್ಲಿ ಕೊಠಡಿಗಳು ಮಳೆಗಾಲದಲ್ಲಿ ಸೋರುತ್ತಿರುವುದು, ಕಾಲಕಾಲಕ್ಕೆ ಅವುಗಳ ದುರಸ್ತಿಗೆ ಅನುದಾನ ಲಭ್ಯ ಇಲ್ಲದೇ ಇರುವುದು, ಜೊತೆಗೆ ಶಿಕ್ಷಕರನ್ನು ಶೈಕ್ಷಣಿಕ ಚಟುವಟಿಕೆ ಆಚೆ ಸರ್ಕಾರಿ ವಿವಿಧ ಕೆಲಸ ಕಾರ್ಯಗಳಿಗೆ ಬಳಕೆ ಮಾಡುತ್ತಿರುವುದು ಸಹ ಅನೇಕ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಹಚ್ಚುತ್ತಿರುವುದಕ್ಕೂ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಬೇವಿನ ಮರದಿಂದ ಜಿನುಗುತ್ತಿದೆ ಹಾಲಿನ ರೂಪದ ದ್ರವ

ಬಾಗಲಕೋಟೆ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂಬರ್ 4 ಹಾಗೂ ಇಳಕಲ್ ತಾಲೂಕಿನ ಗುಡೂರ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉದಾಹರಿಸಬಹುದು. ಬಾಗಲಕೋಟೆ ನಗರದ ಹೃದಯ ಭಾಗದಲ್ಲಿ ಇರುವ ನಂಬರ್ 4 ಶಾಲೆಯಲ್ಲಿ 1 ರಿಂದ 8ನೇ ತರಗತಿ ಇದ್ದು, ಎರಡು ವರ್ಷಗಳ ಹಿಂದೆ 1ನೇ ತರಗತಿಗೆ 60 ಮಕ್ಕಳು ದಾಖಲಾಗಿದ್ದರು. ಆದರೆ, ಕಳೆದ ವರ್ಷ ಅದು 20ಕ್ಕೆ ಇಳಿಕೆ ಆಗಿದ್ದು, ಶೈಕ್ಷಣಿಕ ವರ್ಷ 14ಕ್ಕೆ ಕುಸಿತ ಕಂಡಿದೆ.

ನಲಿ-ಕಲಿಗೆ 120 ರಿಂದ 80ಕ್ಕೆ ಬಂದಿದೆ. ಇನ್ನು ಒಟ್ಟಾರೆ, ಶಾಲೆಯಲ್ಲಿ ಕಳೆದ ವರ್ಷಕ್ಕಿಂತ ಈ ಸಲ ಒಂದು ನೂರು ಮಕ್ಕಳ ಸಂಖ್ಯೆ ಕಡಿಮೆ ಆಗಿರುವುದು ಕಂಡು ಬರುತ್ತಿದೆ. ಇಳಕಲ್ಲ ತಾಲೂಕಿನ ಗುಡೂರ ಗ್ರಾಮದ ಮಾದರಿ ಶಾಲೆಯಲ್ಲಿ ಸಹ ಒಂದು ನೂರು ಮಕ್ಕಳ ಸಂಖ್ಯೆ ಕಡಿಮೆ ಆಗಿದೆ. ಅಲ್ಲಿ ಮಕ್ಕಳಿಗೆ ಕೂಡಲು ಕೊಠಡಿಗಳ ಸಮಸ್ಯೆ, ಪೂರ್ಣಾವಧಿ ಶಿಕ್ಷಕರ ಕೊರತೆ, ಶೌಚಾಲಯ ಸಹ ಇಲ್ಲದ್ದು, ಹೀಗೆ ನಾನಾ ಕಾರಣಗಳಿಂದ ಮಕ್ಕಳ ದಾಖಲಾತಿ ಕುಸಿತವಾಗಿದೆ. ಇದು ಬರೀ ಒಂದು, ಎರಡು ಶಾಲೆಗಳ ಪರಿಸ್ಥಿತಿ ಅಲ್ಲ. ಅನೇಕ ಶಾಲೆಗಳಲ್ಲಿ ಇಂತದ್ದೆ ಸಮಸ್ಯೆ ತಾಂಡವವಾಡುತ್ತಿದೆ.

ಇದನ್ನೂ ಓದಿ: ಬಾಗಲಕೋಟೆ ಜಿಲ್ಲೆ ಜನರಲ್ಲಿ ಹೆಚ್ಚಾಯಿತು ಮದ್ರಾಸ್ ಐ ಭೀತಿ: ಪ್ರತಿದಿನ 40ಕ್ಕೂ ಹೆಚ್ಚು ರೋಗಿಗಳು ಜಿಲ್ಲಾಸ್ಪತ್ರೆಗೆ ಭೇಟಿ

ಸರ್ಕಾರ, ಹಾಗೂ ಶಿಕ್ಷಣ ಇಲಾಖೆ ಈ ಬಗ್ಗೆ ಗಮನ ಹರಿಸಿ, ಗುಣಮಟ್ಟದ ಶಿಕ್ಷಣ ಹಾಗೂ ಶಿಕ್ಷಕರು, ಕೊಠಡಿ ಸಮಸ್ಯೆ ಬಗೆಹರಿಸಬೇಕು. ಶಾಲೆಗಳನ್ನು ಸದೃಢಗೊಳಿಸಲು ಮುಂದಾಗಬೇಕು ಎಂದು ಅನೇಕ ಶಿಕ್ಷಕರು ಹೇಳುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಬಗ್ಗೆ ನೋಡೋದಾದರೆ 1 ರಿಂದ 10ನೇ ತರಗತಿ ವರೆಗೂ ಶೈಕ್ಷಣಿಕ ವರ್ಷ-ವಿದ್ಯಾರ್ಥಿಗಳ ಸಂಖ್ಯೆ ಈ ಕೆಳಗಿನಂತಿದೆ.

  • 2019-20 ರಲ್ಲಿ 2,08,416
  • 2020-21 ರಲ್ಲಿ 2,09,959
  • 2021-22 ರಲ್ಲಿ 2,24,265
  • 2022-23 ರಲ್ಲಿ 2,12,192
  • 2023-24 ರಲ್ಲಿ 1,98,312

ಸರ್ಕಾರಿ ಶಾಲೆಗಳಲ್ಲಿ ಇನ್ನೂ ಸಹ ಮಕ್ಕಳ ಪ್ರವೇಶಾತಿ ನಡೆಯುತ್ತಿದೆ. ಸದ್ಯ ಕಳೆದ ಸಲಕ್ಕಿಂತ 14 ರಿಂದ 15 ಸಾವಿರ ಮಕ್ಕಳ ದಾಖಲಾತಿ ಕಡಿಮೆ ಆಗಿದೆ. ಇನ್ನು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಅನೇಕ ಸೌಲಭ್ಯಗಳು ಇವೆ. ಸಮವಸ್ತ್ರ, ಪಠ್ಯಪುಸ್ತಕ ವಿತರಣೆ ಆಗಿದೆ. ಶಿಕ್ಷಕರ ಕೊರತೆ ಇರುವ ಕಡೆಗೆ ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದೆ. ಕೊಠಡಿ ಸಮಸ್ಯೆ ಎಲ್ಲ ಕಾರಣದಿಂದ ಮಕ್ಕಳ ಸಂಖ್ಯ ಕಡಿಮೆಯಾಗಿದೆ.

ಸರಕಾರಿ ಶಾಲೆಗೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗಿರುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಕೇಳಿದರೆ.ಹದಿನೈದು ಸಾವಿರ ಮಕ್ಕಳ ಸಂಖ್ಯೆ ಕಡಿಮೆ ಆಗಿದೆ.ಅಗಷ್ಟ್ ತಿಂಗಳವರೆಗೂ ದಾಖಲಾತಿ‌ ಮಾಡುವ ಅವಕಾಶವಿದೆ.ಆ ವೇಳೆಯಷ್ಟರಲ್ಲಿ ಮಕ್ಕಳ ಸಂಖ್ಯೆ ಏರಿಕೆಯಾಗಬಹುದು ಅಂತ ಸಮರ್ಥನೆ ಮಾಡಿಕೊಳ್ತಾರೆ. ವಿವಿಧ ಕಾರಣದಿಂದ‌ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಸರಕಾರ ಮಕ್ಕಳ ಸೆಳೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:51 pm, Sat, 12 August 23

ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು