ಬಾಗಲಕೋಟೆ: ಕುಡುಕ ಮಗನ ಕಾಟ ತಾಳಲಾರದೆ ಬೆಂಕಿ ಹಚ್ಚಿ ಕೊಲೆ; ತಂದೆ, ತಾಯಿ ಸೇರಿ ಮೂವರ ಬಂಧನ
ಮದ್ಯವ್ಯಸನಿ ಮಗನನ್ನು ಆತನ ಕುಟುಂಬವೇ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಬಿದರಿ ಗ್ರಾಮದಲ್ಲಿ ಸೆಪ್ಟೆಂಬರ್ 5ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ, ತಾಯಿ ಮತ್ತು ಸೋದರನನ್ನು ಅರೆಸ್ಟ್ ಮಾಡಲಾಗಿದೆ. ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆ, ಸೆಪ್ಟೆಂಬರ್ 08: ಕುಡಿದು ಬಂದು ನಿತ್ಯ ಗಲಾಟೆ ಮಾಡುತ್ತಿದ್ದ ಮಗನಿಗೆ (son) ಕುಟುಂಬಸ್ಥರಿಂದಲೇ ಬೆಂಕಿ ಹಚ್ಚಿ ಕೊಲೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಬಿದರಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ. ಡೀಸೆಲ್ ಸುರಿದು ಬೆಂಕಿ ಹಚ್ಚಿ ಅನಿಲ್ ಪರಪ್ಪ ಕಾನಟ್ಟಿ(32) ಕೊಲೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿಂದತೆ ತಂದೆ ಪರಪ್ಪ ಕಾನಟ್ಟಿ, ತಾಯಿ ಶಾಂತಾ ಕಾನಟ್ಟಿ ಮತ್ತು ಸೋದರ ಬಸವರಾಜ ಕಾನಟ್ಟಿ ಬಂಧಿತರು. ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದದ್ದೇನು?
ಈ ಘಟನೆ ಸೆಪ್ಟೆಂಬರ್ 5 ರಂದೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅನಿಲ್ ದುಶ್ಚಟಕ್ಕೆ ದಾಸನಾಗಿದ್ದ. ಆನ್ಲೈನ್ ಬೆಟ್ಟಿಂಗ್, ಕುಡಿತ, ಮೋಜು ಮಸ್ತಿಗಾಗಿ 20 ಲಕ್ಷ ರೂ ಸಾಲ ಮಾಡಿದ್ದ. ಕುಟುಂಬ ಆತನ ಸಾಲ ಕೂಡ ತೀರಿಸಿತ್ತು. ಬಳಿಕ ಮತ್ತೆ ಐದು ಲಕ್ಷ ರೂ ಹಣ ಕೇಳುತ್ತಿದ್ದ. ತನ್ನ ಪಾಲಿನ ಆಸ್ತಿ ನೀಡುವಂತೆ ನಿತ್ಯ ಜಗಳ ಮಾಡುತ್ತಿದ್ದ.
ಇದನ್ನೂ ಓದಿ: ಬೆಂಗಳೂರು: ಕಳ್ಳತನಕ್ಕೆಂದು ಪಿಜಿಗೆ ನುಗ್ಗಿ ಯುವತಿಯ ಕಾಲು ಸವರಿ ಎಸ್ಕೇಪ್ ಆಗಿದ್ದವ ಕೊನೆಗೂ ಅರೆಸ್ಟ್
ಒಂದು ವೇಳೆ ಆಸ್ತಿ ಕೊಟ್ಟರೆ ಅದನ್ನು ಮಾರಾಟ ಮಾಡುತ್ತಾನೆ ಎಂದು ಕೊಟ್ಟಿರಲಿಲ್ಲ. ಆತನ ಮದುವೆ ಮಾಡಿ ನಂತರ ಆಸ್ತಿ ಕೊಡಲು ತಂದೆ-ತಾಯಿ ಹಾಗೂ ಸಹೋದರ ಮುಂದಾಗಿದ್ದರು. ಆದರೆ ಅನಿಲ್ ನಿತ್ಯ ಕಾಟ ಕೊಡುವುದು, ಜಗಳ ಮಾಡುವುದು ಮಾತ್ರ ತಪ್ಪಿರಲಿಲ್ಲ. ಕೊಲೆಯಾಗುವ ದಿನದಂದು ಕೂಡ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡಿದ್ದ.
ಇದನ್ನೂ ಓದಿ: ವಿಜಯಪುರ: ಮಹಾದೇವ ಭೈರಗೊಂಡ ಪರಮಾಪ್ತ ರೌಡಿಶೀಟರ್ ಭೀಮನಗೌಡ ಗುಂಡಿನ ದಾಳಿಗೆ ಬಲಿ
ಇನ್ನು ಅನಿಲ್ನ ಸಹೋದರ ಬಸವರಾಜ ಕಾನಟ್ಟಿ ಓರ್ವ ಯೋಧ. ರಜೆಗೆ ಅಂತ ಊರಿಗೆ ಬಂದಿದ್ದ. ಆತನ ಜೊತೆಗೂ ಜಗಳ ಮಾಡಿದ್ದಾನೆ. ನನ್ನ ಆಸ್ತಿ ಕೊಡದಿದ್ದರೆ ನಿಮ್ಮನ್ನು ಸಾಯಿಸುತ್ತೇನೆ ಎಂದು ಕೈಗೆ ಸಿಕ್ಕ ವಸ್ತುಗಳಿಂದ ತಂದೆ-ತಾಯಿ ಮತ್ತು ಸಹೋದರನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಪರಿಸ್ಥಿತಿ ಕೈ ಮೀರಿದಾಗ ಅನಿಲ್ನ ಕೈ, ಕಾಲಿಗೆ ಹಗ್ಗ ಕಟ್ಟಿ ಕೊಲೆ ಮಾಡಿದ್ದಾರೆ. ನಂತರ ಡೀಸೆಲ್ ಹಾಕಿ ಸುಟ್ಟಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.








