ಬಾಗಲಕೋಟೆ: ಕುಡುಕ ಮಗನ ಕಾಟ ತಾಳಲಾರದೆ ಬೆಂಕಿ ಹಚ್ಚಿ ಕೊಲೆ; ತಂದೆ, ತಾಯಿ ಸೇರಿ ಮೂವರ ಬಂಧನ

ಮದ್ಯವ್ಯಸನಿ ಮಗನನ್ನು ಆತನ ಕುಟುಂಬವೇ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಬಿದರಿ ಗ್ರಾಮದಲ್ಲಿ ಸೆಪ್ಟೆಂಬರ್​ 5ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ, ತಾಯಿ ಮತ್ತು ಸೋದರನನ್ನು ಅರೆಸ್ಟ್​ ಮಾಡಲಾಗಿದೆ. ಸಾವಳಗಿ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆ: ಕುಡುಕ ಮಗನ ಕಾಟ ತಾಳಲಾರದೆ ಬೆಂಕಿ ಹಚ್ಚಿ ಕೊಲೆ; ತಂದೆ, ತಾಯಿ ಸೇರಿ ಮೂವರ ಬಂಧನ
ಅನಿಲ್, ಬಸವರಾಜ, ಶಾಂತಾ, ಪರಪ್ಪ
Edited By:

Updated on: Sep 08, 2025 | 8:57 AM

ಬಾಗಲಕೋಟೆ, ಸೆಪ್ಟೆಂಬರ್​ 08: ಕುಡಿದು ಬಂದು ನಿತ್ಯ ಗಲಾಟೆ ಮಾಡುತ್ತಿದ್ದ ಮಗನಿಗೆ (son) ಕುಟುಂಬಸ್ಥರಿಂದಲೇ ಬೆಂಕಿ ಹಚ್ಚಿ ಕೊಲೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಬಿದರಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ. ಡೀಸೆಲ್ ಸುರಿದು ಬೆಂಕಿ ಹಚ್ಚಿ ಅನಿಲ್ ಪರಪ್ಪ ಕಾನಟ್ಟಿ(32) ಕೊಲೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿಂದತೆ ತಂದೆ ಪರಪ್ಪ ಕಾನಟ್ಟಿ, ತಾಯಿ ಶಾಂತಾ ಕಾನಟ್ಟಿ ಮತ್ತು ಸೋದರ ಬಸವರಾಜ ಕಾನಟ್ಟಿ ಬಂಧಿತರು. ಸಾವಳಗಿ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು?

ಈ ಘಟನೆ ಸೆಪ್ಟೆಂಬರ್ 5 ರಂದೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅನಿಲ್ ದುಶ್ಚಟಕ್ಕೆ ದಾಸನಾಗಿದ್ದ. ಆನ್​ಲೈನ್​ ಬೆಟ್ಟಿಂಗ್, ಕುಡಿತ, ಮೋಜು ಮಸ್ತಿಗಾಗಿ 20 ಲಕ್ಷ ರೂ ಸಾಲ ಮಾಡಿದ್ದ. ಕುಟುಂಬ ಆತನ ಸಾಲ ಕೂಡ ತೀರಿಸಿತ್ತು. ಬಳಿಕ ಮತ್ತೆ ಐದು ಲಕ್ಷ ರೂ ಹಣ ಕೇಳುತ್ತಿದ್ದ. ತನ್ನ ಪಾಲಿನ ಆಸ್ತಿ ನೀಡುವಂತೆ ನಿತ್ಯ ಜಗಳ ಮಾಡುತ್ತಿದ್ದ.

ಇದನ್ನೂ ಓದಿ: ಬೆಂಗಳೂರು: ಕಳ್ಳತನಕ್ಕೆಂದು ಪಿಜಿಗೆ ನುಗ್ಗಿ ಯುವತಿಯ ಕಾಲು ಸವರಿ ಎಸ್ಕೇಪ್ ಆಗಿದ್ದವ ಕೊನೆಗೂ ಅರೆಸ್ಟ್

ಇದನ್ನೂ ಓದಿ
ಯುವತಿಯರನ್ನ ಬುಟ್ಟಿಗೆ ಬೀಳಿಸಿಕೊಂಡು ಮದ್ವೆಯಾಗಿ ಕೈಕೊಡುವುದೇ ಇವನ ಕಾಯಕ
ಮಕ್ಕಳು ತಂದಿಟ್ಟ ಜಗಳದಲ್ಲಿ ಹೋಯ್ತು ತಂದೆಯ ಜೀವ
ಅನ್ಯಜಾತಿ ಯುವಕನನ್ನು ಲವ್ ಮಾಡಿದ್ದಕ್ಕೆ ಮಗಳನ್ನೇ ಕೊಂದು ಸುಟ್ಟುಹಾಕಿದ ತಂದೆ
50 ಲಕ್ಷ ರೂ. ಖರ್ಚು ಮಾಡಿ ಮದ್ವೆ: ಮೂರೇ ವರ್ಷದಲ್ಲಿ ಟೆಕ್ಕಿ ದುರಂತ ಸಾವು

ಒಂದು ವೇಳೆ ಆಸ್ತಿ ಕೊಟ್ಟರೆ ಅದನ್ನು ಮಾರಾಟ ಮಾಡುತ್ತಾನೆ ಎಂದು ಕೊಟ್ಟಿರಲಿಲ್ಲ. ಆತನ ಮದುವೆ ಮಾಡಿ ನಂತರ ಆಸ್ತಿ ಕೊಡಲು ತಂದೆ-ತಾಯಿ ಹಾಗೂ ಸಹೋದರ ಮುಂದಾಗಿದ್ದರು. ಆದರೆ ಅನಿಲ್​ ನಿತ್ಯ ಕಾಟ ಕೊಡುವುದು, ಜಗಳ ಮಾಡುವುದು ಮಾತ್ರ ತಪ್ಪಿರಲಿಲ್ಲ. ಕೊಲೆಯಾಗುವ ದಿನದಂದು ಕೂಡ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡಿದ್ದ.

ಇದನ್ನೂ ಓದಿ: ವಿಜಯಪುರ: ಮಹಾದೇವ ಭೈರಗೊಂಡ ಪರಮಾಪ್ತ ರೌಡಿಶೀಟರ್‌ ಭೀಮನಗೌಡ ಗುಂಡಿನ ದಾಳಿಗೆ ಬಲಿ

ಇನ್ನು ಅನಿಲ್​​ನ ಸಹೋದರ ಬಸವರಾಜ ಕಾನಟ್ಟಿ ಓರ್ವ ಯೋಧ. ರಜೆಗೆ ಅಂತ ಊರಿಗೆ ಬಂದಿದ್ದ. ಆತನ ಜೊತೆಗೂ ಜಗಳ ಮಾಡಿದ್ದಾನೆ. ನನ್ನ ಆಸ್ತಿ ಕೊಡದಿದ್ದರೆ ನಿಮ್ಮನ್ನು ಸಾಯಿಸುತ್ತೇನೆ ಎಂದು ಕೈಗೆ ಸಿಕ್ಕ ವಸ್ತುಗಳಿಂದ ತಂದೆ-ತಾಯಿ ಮತ್ತು ಸಹೋದರನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಪರಿಸ್ಥಿತಿ ಕೈ ಮೀರಿದಾಗ ಅನಿಲ್​​​​​ನ ಕೈ, ಕಾಲಿಗೆ ಹಗ್ಗ ಕಟ್ಟಿ ಕೊಲೆ ಮಾಡಿದ್ದಾರೆ. ನಂತರ ಡೀಸೆಲ್ ಹಾಕಿ ಸುಟ್ಟಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us