AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಪೆಟ್ರೋಲ್ ಬಂಕ್​ನಲ್ಲಿ ರಿಯಾಲಿಟಿ ಚೆಕ್: ಇಂಧನ ಪ್ರಮಾಣದಲ್ಲಿ ಭಾರೀ ವ್ಯತ್ಯಾಸ, ಗ್ರಾಹಕರಲ್ಲಿ ಮೂಡಿದ ಅನುಮಾನ

ಬಾಗಲಕೋಟೆ ಪೆಟ್ರೋಲ್ ಪಂಪ್‌ಗಳಲ್ಲಿ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ಇಂಧನ ಪ್ರಮಾಣದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದೆ. ಪ್ರತಿ ಲೀಟರ್‌ಗೆ 80-100 ಮಿಲಿಲೀಟರ್ ಪೆಟ್ರೋಲ್ ಕಡಿಮೆ ಬಂದಿದೆ. ಇದು ಮಾಪನದಲ್ಲಿನ ಲೋಪದೋಷಗಳನ್ನು ಎತ್ತಿ ತೋರಿಸುತ್ತದೆ ಮತ್ತು ಗ್ರಾಹಕರಿಗೆ ಮೋಸವಾಗುತ್ತಿರುವ ಬಗ್ಗೆ ಗಂಭೀರ ಕಳವಳ ಮೂಡಿಸಿದೆ. ಮಾಪನ ಶಾಸ್ತ್ರ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ.

ಬಾಗಲಕೋಟೆ ಪೆಟ್ರೋಲ್ ಬಂಕ್​ನಲ್ಲಿ ರಿಯಾಲಿಟಿ ಚೆಕ್: ಇಂಧನ ಪ್ರಮಾಣದಲ್ಲಿ ಭಾರೀ ವ್ಯತ್ಯಾಸ, ಗ್ರಾಹಕರಲ್ಲಿ ಮೂಡಿದ ಅನುಮಾನ
ಪೆಟ್ರೋಲ್ ಪಂಪ್ ಟಿವಿ9 ರಿಯಾಲಿಟಿ ಚೆಕ್Image Credit source: tv9 kannada
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Sep 17, 2026 | 8:19 PM

Share

ಬಾಗಲಕೋಟೆ, ಸೆಪ್ಟೆಂಬರ್​​ 17: ರಾಜ್ಯದಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸಿಗಬೇಕಾದ ಪ್ರಮಾಣಕ್ಕಿಂತ ಕಡಿಮೆ ಇಂಧನ ಪೂರೈಕೆಯಾಗುತ್ತಿದ್ಯಾ ಎನ್ನುವ ಪ್ರಶ್ನೆ ಮೂಡಿದೆ. ಏಕೆಂದರೆ ಕೆಲ ಪೆಟ್ರೋಲ್ ಬಂಕ್‌ಗಳ ಕಳ್ಳಾಟ ಬಯಲಾಗಿದೆ. ಇತ್ತ ಬಾಗಲಕೋಟೆಯ ಆರ್​ಟಿಒ ಕಚೇರಿ ಬಳಿಯ ಪೆಟ್ರೋಲ್ ಬಂಕ್​​ನಲ್ಲಿ ಟಿವಿ9 ರಿಯಾಲಿಟಿ ಚೆಕ್​​ ವೇಳೆ ಪೆಟ್ರೋಲ್ ಪ್ರಮಾಣದಲ್ಲಿ ಅನುಮಾನ ಮೂಡಿಸಿದೆ.

ಟಿವಿ9 ರಿಯಾಲಿಟಿ ಚೆಕ್​​ನಲ್ಲಿ ಬಯಲಾಗಿದ್ದೇನು?

ಮೊದಲಿಗೆ ಬೈಕ್‌ನಲ್ಲಿದ್ದ ಪೆಟ್ರೋಲ್ ಅನ್ನು ಸಂಪೂರ್ಣವಾಗಿ ಖಾಲಿ ಮಾಡಲಾಗಿದೆ. ಬಳಿಕ ಬೈಕ್​​ನ್ನು ಸ್ಟಾರ್ಟ್​ ಮಾಡದೆ ತಳ್ಳಿಕೊಂಡು ಪೆಟ್ರೋಲ್ ಪಂಪ್‌ಗೆ ತೆಗೆದುಕೊಂಡು ಹೋಗಲಾಗಿದೆ. ನಂತರ ಬೈಕ್‌ಗೆ ನೇರವಾಗಿ 1 ಲೀಟರ್ ಪೆಟ್ರೋಲ್ ಹಾಕಿಸಲಾಗಿದೆ. ಇಂಧನ ತುಂಬಿಸಿಕೊಂಡ ಬಳಿಕವೂ ಬೈಕ್ ಸ್ಟಾರ್ಟ್ ಮಾಡದೆ ತಳ್ಳಿಕೊಂಡೇ ವಾಪಸ್ ತರಲಾಗಿದೆ.

ಪ್ರಮಾಣದಲ್ಲಿ 80 ರಿಂದ 100 ಎಂ.ಎಲ್. ವ್ಯತ್ಯಾಸ

ನಂತರ ಬೈಕನ್ನು ಸಂಪೂರ್ಣವಾಗಿ ಬಗ್ಗಿಸಿ, ಅಲುಗಾಡಿಸಿ ಟ್ಯಾಂಕ್‌ನಲ್ಲಿದ್ದ ಇಂಧನವನ್ನು ಪುನಃ 1 ಲೀಟರ್ ಬಾಟಲಿಗೆ ತೆಗೆದು ಅಳತೆ ಮಾಡಲಾಯಿತು. ಈ ವೇಳೆ ಬಾಟಲಿಯಲ್ಲಿ ಬರಬೇಕಿದ್ದ ಅಳತೆಗಿಂತ ಕನಿಷ್ಠ 250 ಎಂ.ಎಲ್. ಪೆಟ್ರೋಲ್ ಕಡಿಮೆ ಬಂದಿದೆ. ಬೈಕ್‌ನ ಕಾರ್ಬೊರೇಟರ್ ಹಾಗೂ ಟ್ಯಾಂಕ್‌ನ ತಳಮಟ್ಟದಲ್ಲಿ ಅಂದಾಜು 150 ಎಂ.ಎಲ್. ಇಂಧನ ಉಳಿದಿದೆ ಎಂದು ಲೆಕ್ಕ ಹಾಕಿದರೂ, ಇನ್ನೂ ಕನಿಷ್ಠ 80 ರಿಂದ 100 ಎಂ.ಎಲ್.ನಷ್ಟು ಪೆಟ್ರೋಲ್ ಕಡಿಮೆಯಾಗಿರುವುದು ಪತ್ತೆಯಾಗಿದೆ.

ಮಾಪನ ಶಾಸ್ತ್ರ ಇಲಾಖೆ ಕ್ರಮಕ್ಕೆ ಆಗ್ರಹ

ನೇರವಾಗಿ ಬಾಟಲಿಯಲ್ಲಿ ಪಡೆದ ಪೆಟ್ರೋಲ್ ಪ್ರಮಾಣಕ್ಕೂ, ಬೈಕ್‌ಗೆ ಹಾಕಿಸಿದ ಇಂಧನದ ಪ್ರಮಾಣಕ್ಕೂ ನಡುವೆ ಇಷ್ಟೊಂದು ವ್ಯತ್ಯಾಸ ಕಂಡುಬಂದಿರುವುದು ಗ್ರಾಹಕರಿಗೆ ಆಗುತ್ತಿರುವ ವಂಚನೆಯ ಸಂಶಯ ಮೂಡಿದೆ. ಹೀಗಾಗಿ ಸಂಬಂಧಪಟ್ಟ ತೂಕ ಮತ್ತು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕಿದೆ.

LIVE TV

ಗ್ರಾಹಕರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಲು ಸರ್ಕಾರವೇ ಮುಂದಾಗಬೇಕು 

ಇನ್ನು ಇತ್ತ ಹಾಸನ ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 231 ಪೆಟ್ರೋಲ್ ಬಂಕ್‌ಗಳು ಕಾರ್ಯಾಚರಣೆ ನಡೆಸುತ್ತಿದ್ದು, ಇವುಗಳಲ್ಲಿ ಹೆಚ್‌ಪಿಸಿಎಲ್‌ನ 76, ಬಿಪಿಸಿಎಲ್‌ನ 50, ಐಒಸಿಎಲ್‌ನ 78 ಹಾಗೂ ಇತರ ಸಂಸ್ಥೆಗಳ 36 ಬಂಕ್‌ಗಳು ಒಳಗೊಂಡಿವೆ. ಗ್ರಾಹಕರು ಸರ್ಕಾರದ ಕಟ್ಟುನಿಟ್ಟಿನ ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ. ‘ನಾವು ಹಾಕಿಸುವ ಇಂಧನ ಸರಿಯಾಗಿಯೇ ಇರುತ್ತದೆ ಎಂದು ನಂಬಿರುತ್ತೇವೆಯೇ ಹೊರತು, ಪಂಪ್‌ಗಳಲ್ಲಿ ವಾಸ್ತವವಾಗಿ ಎಷ್ಟು ಪೆಟ್ರೋಲ್ ಅಥವಾ ಡೀಸೆಲ್ ಬೀಳುತ್ತದೆ ಎಂಬುದನ್ನು ನಾವಾಗಿಯೇ ಪರಿಶೀಲಿಸಲು ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ: ಕರ್ನಾಟಕದ ಪೆಟ್ರೋಲ್ ಬಂಕ್‌ಗಳಲ್ಲಿ ನಡೆಯುತ್ತಿದೆಯೇ ಅಳತೆ ವಂಚನೆ? ‘ಟಿವಿ9’ ರಿಯಾಲಿಟಿ ಚೆಕ್​ನಲ್ಲಿ ಕಾಣಿಸಿದ್ದೇನು ನೋಡಿ

ಆದ್ದರಿಂದ ಗ್ರಾಹಕರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಲು ಸರ್ಕಾರವೇ ಕಾಲಕಾಲಕ್ಕೆ ದಿಢೀರ್ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:18 pm, Thu, 17 September 26

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ