AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಆಫೀಸರ್ಸ್ ಎತ್ತಂಗಡಿ

ಬಾಗಲಕೋಟೆ ಉಪಚುನಾವಣಾ ಕದನದಲ್ಲಿ NSUI ಕಾರ್ಯಕರ್ತರಿಂದ ಬಿಜೆಪಿ ವಿರುದ್ಧ ಕರಪತ್ರ ಹಂಚಿಕೆ ಆರೋಪ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಐವರು NSUI ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಬೆನ್ನಲ್ಲೇ ಇದೀಗ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಡಿಜಿ & ಐಜಿಪಿ ಆದೇಶ ಹೊರಡಿಸಿದ್ದಾರೆ.

ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಆಫೀಸರ್ಸ್ ಎತ್ತಂಗಡಿ
ಕರಪತ್ರ ಹಂಚಿಕೆ ಆರೋಪImage Credit source: tv9 kannada
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Apr 05, 2026 | 3:23 PM

Share

ಬಾಗಲಕೋಟೆ, ಏಪ್ರಿಲ್​ 05: ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ (By-election) ಗೆಲ್ಲೋದಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ತಂತ್ರ ಪ್ರತಿತಂತ್ರ ಹೂಡುತ್ತಿವೆ. ಈ ಮಧ್ಯೆ ನಿನ್ನೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ದೊಡ್ಡ ಹೈಡ್ರಾಮಾವೇ ನಡೆದಿತ್ತು. ಇದೀಗ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ.

ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಸಂಘಟನೆ ಅಪಪ್ರಚಾರ ಮಾಡಿದ ಆರೋಪ ಕೇಳಿಬಂದಿದೆ. ಕುಮಾರೇಶ್ವರ ಕ್ಯಾಂಪಸ್​​ನಲ್ಲಿ ಕರಪತ್ರ ಹಿಡಿದು ಬಂದಿದ್ದ 18 NSUI ಕಾರ್ಯಕರ್ತರು ಹಾಗೂ ಬಿಜೆಪಿಯ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿತ್ತು. ಬಳಿಕ ಐವರು NSUI ಕಾರ್ಯಕರ್ತರನ್ನು ಪೊಲೀಸರು ಠಾಣೆಗೆ ಕರೆ ತಂದಿದ್ದರು. ಬಾಗಲಕೋಟೆ ನವನಗರದ ಸಿಪಿಐ ಕಚೇರಿಯಲ್ಲಿ ಗದ್ದಲ ಉಂಟಾಗಿತ್ತು. ಠಾಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಜಮಾವಣೆಗೊಂಡು ಗೊಂದಲಮಯ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ

ಇದೀಗ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆ ಸಿಪಿಐ ವಿಜಯ ಮುರಗುಂಡಿ ಮತ್ತು ನವನಗರ ಪೊಲೀಸ್ ಠಾಣೆ ಪಿಎಸ್​ಐ ಅಶೋಕ ಚೌಹಾಣ್​​ರನ್ನು ಎತ್ತಂಗಡಿ ಮಾಡಿ ಡಿಜಿ & ಐಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಉತ್ತರ ವಲಯ ಐಜಿಪಿ ಕಚೇರಿಗೆ PSI ಅಶೋಕ್​ರನ್ನ ವರ್ಗಾವಣೆ ಮಾಡಲಾಗಿದ್ದು, ವಿಜಯಪುರ ಮಹಿಳಾ ಠಾಣೆಗೆ ಸಿಪಿಐ ವಿಜಯ ಮುರಗುಂಡಿ ಅವರನ್ನ ವರ್ಗಾವಣೆ ಮಾಡಲಾಗಿದೆ.

ಬಾಗಲಕೋಟೆ ಡಿಸಿ ಭೇಟಿ ಮಾಡಿದ ಬಿಜೆಪಿ ನಾಯಕರು

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಡಿಸಿ ಕಚೇರಿಗೆ ವಿಪಕ್ಷ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಬಿಜೆಪಿ ನಾಯಕರು ಡಿಸಿ ಭೇಟಿ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದವರ ವಿರುದ್ಧ ಕ್ರಮಕೈಗೊಳ್ಳಿ ಹಾಗೂ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡುವಂತೆ ಮನವಿ ಪತ್ರ ನೀಡಲಾಗಿದೆ. ವಿಪಕ್ಷ ನಾಯಕ ಅಶೋಕ್​​, ಸಂಸದ ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ನಾರಾಯಣಸ ಭಾಂಡಗೆ, MLC ಪೂಜಾರ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್, ಅರುಣ ಶಹಾಪುರ ಭಾಗಿ ಆಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ