ಬಾಗಲಕೋಟೆಯಲ್ಲಿ ಮಳೆ ಅವಾಂತರ: ಮೂವರು ಸಾವು

ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಸುರಿದ ಮಳೆ ಕೆಲ ಅವಾಂತರಕ್ಕೆ ಕಾರಣವಾಗಿದೆ. ಸಿಡಿಲು ಬಡಿದು ಅಜ್ಜಿ ಮತ್ತು ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಾಯಗಳಾಗಿವೆ. ಇನ್ನೊಂದೆಡೆ, ವಿದ್ಯುತ್ ತಂತಿ ಬಿದ್ದು ಬೈಕ್ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಸ್ಥಳಕ್ಕೆ ಆಯಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಮಳೆ ಅವಾಂತರ: ಮೂವರು ಸಾವು
ಮೃತರು
Image Credit source: tv9 kannada
Edited By:

Updated on: Sep 24, 2026 | 8:50 PM

ಬಾಗಲಕೋಟೆ, ಸೆಪ್ಟೆಂಬರ್​​ 24: ಬಾಗಲಕೋಟೆ ಜಿಲ್ಲೆಯಲ್ಲಿ ಸುರಿದ ಮಳೆಗೆ ಕೆಲ ಅವಾಂತರಗಳು ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮತ್ತೊಂದೆಡೆ ವಿದ್ಯುತ್ ತಂತಿ ಬಿದ್ದು ಬೈಕ್ ಹಿಂಬದಿ ಸವಾರ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಐಹೊಳೆಯಲ್ಲಿ ಸಿಡಿಲು ಬಡಿದು ಅಜ್ಜಿ-ಮೊಮ್ಮಗ ಸಾವು: ಮೂವರ ಸ್ಥಿತಿ ಗಂಭೀರ

ಬಾದಾಮಿ ತಾಲೂಕಿನ ಐಹೊಳೆ ಗ್ರಾಮ ಒಂದರ ಹೊಲದಲ್ಲಿ ಬೆಳೆಯ ರಾಶಿ ಮಾಡಲು ತೆರಳಿದ್ದ ವೇಳೆ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ರಾಮವ್ವ (60) ಹಾಗೂ ಅವರ ಮೊಮ್ಮಗ ಬರಮಪ್ಪ ಖಂಡೇಕರ್ (23) ಮೃತರು. ಕಾಟಾಪುರ ಗ್ರಾಮದ ಮುತ್ತಪ್ಪ ಕಂಡೇಕರ್(70), ಜ್ಯೋತಿ ಕಳಕಪ್ಪ ಕಂಡೇಕರ್(32), ಐಹೊಳೆ ಗ್ರಾಮದ ಜ್ಯೋತಿ ಶರಣಪ್ಪ ಕುರಿ(32) ಮತ್ತು ರೇವಣ್ಣ ಸುಟ್ಟನ್ನವರ್(35) ಗಾಯಾಳುಗಳು.

ಇದನ್ನೂ ಓದಿ: ಬರದ ಮಧ್ಯೆ ಮಳೆಯ ಸಿಂಚನ: 3 ದಿನ ಕರ್ನಾಟಕದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಳೆ ಬಂದ ಹಿನ್ನೆಲೆ ಆಶ್ರಯ ಪಡೆಯಲು ಮರದ ಕೆಳಗೆ ನಿಂತಿದ್ದ ಸಂದರ್ಭದಲ್ಲಿ ಏಕಾಏಕಿ ಸಿಡಿಲು ಬಡಿದಿದೆ. ಪರಿಣಾಮ ಅಜ್ಜಿ ಮತ್ತು ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಜೊತೆಯಲ್ಲಿದ್ದ ಮತ್ತಿಬ್ಬರು ಸೇರಿ ಒಟ್ಟು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಬೈಕ್ ಸವಾರನ ಮೇಲೆ ಬಿದ್ದ ವಿದ್ಯುತ್ ತಂತಿ: ಓರ್ವ ಸಾವು

ಬಾಗಲಕೋಟೆ ನಗರದ ಕಿಲ್ಲಾ ಓಣಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಮರ ಬಿದ್ದು ವಿದ್ಯುತ್ ತಂತಿ ತುಂಡಾಗಿ ಮೈಮೇಲೆ ಬಿದ್ದ ಪರಿಣಾಮ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಜಿಮಲಂಗ್ ಶೇಖ್ (50)ಮೃತ ವ್ಯಕ್ತಿ.

ಇದನ್ನೂ ಓದಿ: ಮಳೆಗೆ ಗಿರಿನಗರದಲ್ಲಿ ಕಾಂಪೌಂಡ್ ಗೋಡೆ ಕುಸಿತ: ಅದೃಷ್ಟವಶಾತ್ ತಪ್ಪಿದ ದೊಡ್ಡ ದುರಂತ

ರಸ್ತೆಯಲ್ಲಿ ಬೈಕ್ ಚಲಿಸುತ್ತಿದ್ದ ವೇಳೆ ಗಾಳಿಗೆ ಬಿದ್ದ ಮರದಿಂದ ವಿದ್ಯುತ್ ತಂತಿ ತುಂಡಾಗಿ ಹಿಂಬದಿ ಸವಾರನ ಮೈಮೇಲೆ ಬಿದ್ದಿದೆ. ವಿದ್ಯುತ್ ಪ್ರವಹಿಸಿದ ಪರಿಣಾಮ ಹಾಜಿಮಲಂಗ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಮುಂಬದಿ ಬೈಕ್ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:54 pm, Thu, 24 September 26

ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Loading...
Unable to load recommendations.
Follow Us