AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಗತಿ ನಡೆಯುತ್ತಿದ್ದ ವೇಳೆಯೇ ಕುಸಿದ ಸರ್ಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ: ಎಂಜಿನಿಯರ್ ನಿರ್ಲಕ್ಷ್ಯದಿಂದ ಅವಘಡ?

ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯ ಛಾವಣಿ ಕುಸಿದು 8 ವಿದ್ಯಾರ್ಥಿಗಳು ಗಾಯಗೊಂಡ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪಿಆರ್‌ಡಿ ಎಂಜಿನಿಯರ್ ನಿರ್ಲಕ್ಷ್ಯವೇ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಶಾಲಾ ಆರಂಭದ ವೇಳೆ ಜಿಲ್ಲೆಯಾದ್ಯಂತ ಕಟ್ಟಡ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ 628 ಶಾಲಾ ಕಟ್ಟಡಗಳು ಅನ್​​ಫಿಟ್​​ ಎಂದು ವರದಿ ನೀಡಲಾಗಿತ್ತು. ಆದರೆ ಈ ಶಾಲೆಯ ಹೆಸರು ಆ ಲಿಸ್ಟ್​​ನಲ್ಲಿ ಇರಲಿಲ್ಲ ಎನ್ನಲಾಗಿದೆ.

ತರಗತಿ ನಡೆಯುತ್ತಿದ್ದ ವೇಳೆಯೇ ಕುಸಿದ ಸರ್ಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ: ಎಂಜಿನಿಯರ್ ನಿರ್ಲಕ್ಷ್ಯದಿಂದ ಅವಘಡ?
ಕುಸಿದ ಕೊಠಡಿ ಮೇಲ್ಛಾವಣಿImage Credit source: Tv9 Kannada
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Sep 03, 2026 | 3:28 PM

Share

ಮುಖ್ಯಾಂಶಗಳು

  • ತರಗತಿ ನಡೆಯುತ್ತಿದ್ದ ವೇಳೆಯೇ ಕುಸಿದ ಕೊಠಡಿ ಮೇಲ್ಛಾವಣಿ
  • ಮುಗಳೊಳ್ಳಿ ತಾಂಡಾ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ಘಟನೆ
  • ಎಂಜಿನಿಯರ್ ನಿರ್ಲಕ್ಷ್ಯದಿಂದಲೇ ನಡೆಯಿತಾ ಅವಘಡ?

ಬಾಗಲಕೋಟೆ, ಸೆಪ್ಟೆಂಬರ್​​ 03: ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ವೇಳೆಯೇ ಕೊಠಡಿ ಮೇಲ್ಛಾವಣಿಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ 8 ಮಕ್ಕಳು ಗಾಯಗೊಂಡ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್​​ ಸಿಕ್ಕಿದೆ. ಕಟ್ಟಡ ಸೋರಿಕೆಯಾಗುತ್ತಿದ್ದರೂ ಅನ್ ಫಿಟ್ ಎಂದು ಪಿಆರ್​​ಡಿ ಎಂಜಿನಿಯರ್ ವರದಿ ಕೊಡದೆ ನಿರ್ಲಕ್ಷ್ಯವಹಿಸಿದ್ದೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಶಾಲಾ ಆರಂಭದ ವೇಳೆ ಜಿಲ್ಲೆಯಾದ್ಯಂತ ಕಟ್ಟಡ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ 628 ಶಾಲಾ ಕಟ್ಟಡಗಳು ಅನ್​​ಫಿಟ್​​ ಎಂದು ವರದಿ ನೀಡಲಾಗಿತ್ತು. ಆದರೆ ಈ ಶಾಲೆಯ ಹೆಸರು ಆ ಲಿಸ್ಟ್​​ನಲ್ಲಿ ಇರಲಿಲ್ಲ ಎನ್ನಲಾಗಿದೆ.

ಎಂಜಿನಿಯರ್​​ಗೆ ನೊಟೀಸ್​​ ಕೊಡ್ತೇವೆ ಎಂದ ಜಿ.ಪಂ. ಸಿಇಒ

ಹೀಗಾಗಿ ಮೇಲ್ನೋಟಕ್ಕೆ ಎಂಜಿನಿಯರ್​​ ಶಾಲೆಯ ಕಟ್ಟಡವನ್ನು ಸರಿಯಾಗಿ ಪರಿಶೀಲನೆ ನಡೆಸದಿರೋದು ಸಾಬೀತಾಗಿದೆ. ಹೀಗಾಗಿ ಪರಿಶೀಲನೆ ನಡೆಸಿ ವರದಿ ನೀಡಿರುವ ಎಂಜಿನಿಯರ್​​ಗೆ ನೊಟೀಸ್ ಕೊಡೋದಾಗಿ ಬಾಗಲಕೋಟೆ ಜಿ.ಪಂ. ಸಿಇಒ ಗಜಾನನ ಬಾಲೆ ತಿಳಿಸಿದ್ದಾರೆ. ಘಟನೆಯಲ್ಲಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಕಟ್ಟಡದ ಹಾನಿಗೊಳಗಾದ ಭಾಗವನ್ನು ಕೂಡಲೇ ದುರಸ್ತಿ ಮಾಡುವಂತೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಗೆ ಸೂಚಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

LIVE TV

ಇದನ್ನೂ ಓದಿ: ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!

ಶಾಲಾ ಕಟ್ಟಡ ಕುಸಿತ ಘಟನೆ ಬಗ್ಗೆ ಬಿಜೆಪಿ ಕಿಡಿ

ಇನ್ನು ಘಟನೆ ಬಗ್ಗೆ ಕಿಡಿ ಕಾರಿರುವ ವಿಪಕ್ಷ ಬಿಜೆಪಿ, ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿ ಅಯೋಮಯವಾಗಿದೆ. ಒಂದೆಡೆ ಸರ್ಕಾರಿ ಶಾಲೆಗಳತ್ತ ಮಕ್ಕಳು ಸುಳಿಯುತ್ತಿಲ್ಲ, ಮತ್ತೊಂದೆಡೆ ಇರುವ ಸರ್ಕಾರಿ ಶಾಲೆಗಳು ಕುಸಿದು ಬೀಳುತ್ತಿದೆ. ಶಿಕ್ಷಣ ಇಲಾಖೆ ಹಾಗೂ ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯದ ಪರಿಣಾಮ ಬಾಗಲಕೋಟೆ ತಾಲ್ಲೂಕಿನ ಮುಗಳೊಳ್ಳಿ ತಾಂಡಾದಲ್ಲಿ ಪಾಠ ಕೇಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಶಾಲೆಯ ಛಾವಣಿ ಕುಸಿದು ಬಿದ್ದಿದೆ‌. ಈ ಮೂಲಕ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಮಕ್ಕಳಿಗೆ ಭವಿಷ್ಯವಿಲ್ಲ ಮತ್ತು ಅವರ ಜೀವಕ್ಕೆ ಗ್ಯಾರಂಟಿಯೂ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ರಾಜ್ಯದಲ್ಲಿ ಈ ರೀತಿ ಸರಣಿ ದುರಂತ ನಡೆಯುತ್ತಿದ್ದರೂ ಕಾಂಗ್ರೆಸ್ ಪ್ರಾಯೋಜಕತ್ವದ ಅಂದೋಲನ ಜೀವಿಗಳಾದ ಧಿಮಾಗಿ ನಕ್ಸಲರು ನಾಪತ್ತೆಯಾಗಿದ್ದು, ತಮ್ಮ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪಾರ್ಟಿ ಮೂಡ್‌ನಲ್ಲಿ ಇದ್ದಾರೆ ಎಂದು ಬಿಜೆಪಿ ಕಿಡಿ ಕಾರಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:20 pm, Thu, 3 September 26

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಯಶ್​​ ಅವರ ನೋಡಲು ದೂರ-ದೂರದಿಂದ ಬಂದಿರುವ ಅಭಿಮಾನಿಗಳು
ಯಶ್​​ ಅವರ ನೋಡಲು ದೂರ-ದೂರದಿಂದ ಬಂದಿರುವ ಅಭಿಮಾನಿಗಳು
'ನಕ್ಸಲಿಸಂನ ಎಲ್ಲ ಕುರುಹನ್ನೂ ಅಳಿಸಿಹಾಕಬೇಕು'; ಅಮಿತ್ ಶಾ ಹೇಳಿಕೆ
'ನಕ್ಸಲಿಸಂನ ಎಲ್ಲ ಕುರುಹನ್ನೂ ಅಳಿಸಿಹಾಕಬೇಕು'; ಅಮಿತ್ ಶಾ ಹೇಳಿಕೆ
ಹಾರ್ಮುಜ್ ಜಲಸಂಧಿಯಲ್ಲಿ ಮುಳುಗಿದ ಹಡಗು; ಸಮುದ್ರದಲ್ಲಿ ತೇಲಾಡಿದ ಐಫೋನ್‌ಗಳು
ಹಾರ್ಮುಜ್ ಜಲಸಂಧಿಯಲ್ಲಿ ಮುಳುಗಿದ ಹಡಗು; ಸಮುದ್ರದಲ್ಲಿ ತೇಲಾಡಿದ ಐಫೋನ್‌ಗಳು
ಸ್ಟಿಂಗ್ ಆಪರೇಷನ್: ಉನ್ನತ ಮಟ್ಟದ ತನಿಖೆಗೆ ನೀಡಲು ಸರ್ಕಾರ ಹಿಂದೇಟು!
ಸ್ಟಿಂಗ್ ಆಪರೇಷನ್: ಉನ್ನತ ಮಟ್ಟದ ತನಿಖೆಗೆ ನೀಡಲು ಸರ್ಕಾರ ಹಿಂದೇಟು!
ಸೂಳೆಕೆರೆಯ ಋಣ ತೀರಿಸಲು ಮುಂದಾದ ರೈತರು
ಸೂಳೆಕೆರೆಯ ಋಣ ತೀರಿಸಲು ಮುಂದಾದ ರೈತರು
ಬರಪೀಡಿತ ಪಟ್ಟಿಗೆ 9 ತಾಲೂಕುಗಳ ಸೇರ್ಪಡೆ: ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ
ಬರಪೀಡಿತ ಪಟ್ಟಿಗೆ 9 ತಾಲೂಕುಗಳ ಸೇರ್ಪಡೆ: ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
‘ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು’: ಗಾನವಿ ಬಗ್ಗೆ ಗಗನ್ ಚಿನ್ನಪ್ಪ ಟೀಕೆ
‘ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು’: ಗಾನವಿ ಬಗ್ಗೆ ಗಗನ್ ಚಿನ್ನಪ್ಪ ಟೀಕೆ
ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಎಚ್​​ಡಿಕೆ
ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಎಚ್​​ಡಿಕೆ