
ಬಾಗಲಕೋಟೆ, ಸೆಪ್ಟೆಂಬರ್ 03: ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ವೇಳೆಯೇ ಕೊಠಡಿ ಮೇಲ್ಛಾವಣಿಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ 8 ಮಕ್ಕಳು ಗಾಯಗೊಂಡ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಕಟ್ಟಡ ಸೋರಿಕೆಯಾಗುತ್ತಿದ್ದರೂ ಅನ್ ಫಿಟ್ ಎಂದು ಪಿಆರ್‌ಡಿ ಎಂಜಿನಿಯರ್ ವರದಿ ಕೊಡದೆ ನಿರ್ಲಕ್ಷ್ಯವಹಿಸಿದ್ದೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಶಾಲಾ ಆರಂಭದ ವೇಳೆ ಜಿಲ್ಲೆಯಾದ್ಯಂತ ಕಟ್ಟಡ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ 628 ಶಾಲಾ ಕಟ್ಟಡಗಳು ಅನ್ಫಿಟ್ ಎಂದು ವರದಿ ನೀಡಲಾಗಿತ್ತು. ಆದರೆ ಈ ಶಾಲೆಯ ಹೆಸರು ಆ ಲಿಸ್ಟ್ನಲ್ಲಿ ಇರಲಿಲ್ಲ ಎನ್ನಲಾಗಿದೆ.
ಹೀಗಾಗಿ ಮೇಲ್ನೋಟಕ್ಕೆ ಎಂಜಿನಿಯರ್ ಶಾಲೆಯ ಕಟ್ಟಡವನ್ನು ಸರಿಯಾಗಿ ಪರಿಶೀಲನೆ ನಡೆಸದಿರೋದು ಸಾಬೀತಾಗಿದೆ. ಹೀಗಾಗಿ ಪರಿಶೀಲನೆ ನಡೆಸಿ ವರದಿ ನೀಡಿರುವ ಎಂಜಿನಿಯರ್ಗೆ ನೊಟೀಸ್ ಕೊಡೋದಾಗಿ ಬಾಗಲಕೋಟೆ ಜಿ.ಪಂ. ಸಿಇಒ ಗಜಾನನ ಬಾಲೆ ತಿಳಿಸಿದ್ದಾರೆ. ಘಟನೆಯಲ್ಲಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಕಟ್ಟಡದ ಹಾನಿಗೊಳಗಾದ ಭಾಗವನ್ನು ಕೂಡಲೇ ದುರಸ್ತಿ ಮಾಡುವಂತೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಗೆ ಸೂಚಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿ ಅಯೋಮಯವಾಗಿದೆ. ಒಂದೆಡೆ ಸರ್ಕಾರಿ ಶಾಲೆಗಳತ್ತ ಮಕ್ಕಳು ಸುಳಿಯುತ್ತಿಲ್ಲ, ಮತ್ತೊಂದೆಡೆ ಇರುವ ಸರ್ಕಾರಿ ಶಾಲೆಗಳು ಕುಸಿದು ಬೀಳುತ್ತಿದೆ. ಶಿಕ್ಷಣ ಇಲಾಖೆ ಹಾಗೂ ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯದ ಪರಿಣಾಮ ಬಾಗಲಕೋಟೆ ತಾಲ್ಲೂಕಿನ ಮುಗಳೊಳ್ಳಿ ತಾಂಡಾದಲ್ಲಿ ಪಾಠ ಕೇಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಶಾಲೆಯ… pic.twitter.com/Ol4K6YkQ9s
— BJP Karnataka (@BJP4Karnataka) September 3, 2026
ಇನ್ನು ಘಟನೆ ಬಗ್ಗೆ ಕಿಡಿ ಕಾರಿರುವ ವಿಪಕ್ಷ ಬಿಜೆಪಿ, ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿ ಅಯೋಮಯವಾಗಿದೆ. ಒಂದೆಡೆ ಸರ್ಕಾರಿ ಶಾಲೆಗಳತ್ತ ಮಕ್ಕಳು ಸುಳಿಯುತ್ತಿಲ್ಲ, ಮತ್ತೊಂದೆಡೆ ಇರುವ ಸರ್ಕಾರಿ ಶಾಲೆಗಳು ಕುಸಿದು ಬೀಳುತ್ತಿದೆ. ಶಿಕ್ಷಣ ಇಲಾಖೆ ಹಾಗೂ ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯದ ಪರಿಣಾಮ ಬಾಗಲಕೋಟೆ ತಾಲ್ಲೂಕಿನ ಮುಗಳೊಳ್ಳಿ ತಾಂಡಾದಲ್ಲಿ ಪಾಠ ಕೇಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಶಾಲೆಯ ಛಾವಣಿ ಕುಸಿದು ಬಿದ್ದಿದೆ. ಈ ಮೂಲಕ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಮಕ್ಕಳಿಗೆ ಭವಿಷ್ಯವಿಲ್ಲ ಮತ್ತು ಅವರ ಜೀವಕ್ಕೆ ಗ್ಯಾರಂಟಿಯೂ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ರಾಜ್ಯದಲ್ಲಿ ಈ ರೀತಿ ಸರಣಿ ದುರಂತ ನಡೆಯುತ್ತಿದ್ದರೂ ಕಾಂಗ್ರೆಸ್ ಪ್ರಾಯೋಜಕತ್ವದ ಅಂದೋಲನ ಜೀವಿಗಳಾದ ಧಿಮಾಗಿ ನಕ್ಸಲರು ನಾಪತ್ತೆಯಾಗಿದ್ದು, ತಮ್ಮ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪಾರ್ಟಿ ಮೂಡ್‌ನಲ್ಲಿ ಇದ್ದಾರೆ ಎಂದು ಬಿಜೆಪಿ ಕಿಡಿ ಕಾರಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:20 pm, Thu, 3 September 26