ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಎನ್​ಐಎ ತನಿಖೆಗೆ ಶ್ರೀರಾಮುಲು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್​​ ಶಾಗೆ ಪತ್ರ

ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆ ಮೇಲಿನ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆತ ಘಟನೆಯನ್ನು ಮಾಜಿ ಸಚಿವ ಬಿ. ಶ್ರೀರಾಮುಲು ಖಂಡಿಸಿದ್ದಾರೆ. ಇದು ದೊಡ್ಡ ಸಂಚು ಎಂದು ಶಂಕಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆಗೆ ಮನವಿ ಮಾಡಿದ್ದಾರೆ. ಘಟನೆಯನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ನಗರದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಎನ್​ಐಎ ತನಿಖೆಗೆ ಶ್ರೀರಾಮುಲು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್​​ ಶಾಗೆ ಪತ್ರ
ಅಮಿತ್​ ಶಾ ಹಾಗೂ ಶ್ರೀರಾಮುಲು
Edited By:

Updated on: Feb 26, 2026 | 11:32 AM

ಬಾಗಲಕೋಟೆ, ಫೆ.26: ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆದಿರುವ ಘಟನೆಯ ಬಗ್ಗೆ ಅಕ್ರೋಶದ ವ್ಯಕ್ತಪಡಿಸಿರುವ ಮಾಜಿ ಸಚಿವ ಹಾಗೂ ಸಂಸದ ಬಿ. ಶ್ರೀರಾಮುಲು, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕಳೆದ ಫೆಬ್ರವರಿ 19 ರಂದು ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಸಾಗುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಮೆರವಣಿಗೆಯ ಮೇಲೆ ಚಪ್ಪಲಿ ಎಸೆಯುವ ಮೂಲಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದು ಕೇವಲ ಸ್ಥಳೀಯ ಕಿಡಿಗೇಡಿತನವಲ್ಲ, ಇದರ ಹಿಂದೆ ದೊಡ್ಡ ಸಂಚು ಇರುವ ಸಾಧ್ಯತೆ ಇದೆ. ಹೀಗಾಗಿ ಸತ್ಯಾಸತ್ಯತೆ ಹೊರಬರಲು ಎನ್​ಐಎ ತನಿಖೆ ಅಗತ್ಯ ಎಂದು ಅವರು ಹೇಳಿದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಘಟನೆಗಳು ಸೇರಿದಂತೆ ರಾಜ್ಯದಲ್ಲಿ ಹಿಂದೂ ಸಂಘಟನೆಗಳ ಮೆರವಣಿಗೆ ಮೇಲೆ ನಡೆಯುತ್ತಿರುವ ದಾಳಿಗಳ ಮಾದರಿಯಲ್ಲೇ ಈ ಘಟನೆಯೂ ನಡೆದಿದೆ. ಇಂತಹ ಕೃತ್ಯಗಳು ಮರುಕಳಿಸದಂತೆ ಕಠಿಣ ಕ್ರಮಕ್ಕೆ ಶ್ರೀರಾಮುಲು ಒತ್ತಾಯಿಸಿದ್ದಾರೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದ್ದು, ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ. ಇನ್ನು ಇದಕ್ಕೂ ಮುನ್ನ ಕೆಲ ಮುಸ್ಲಿಂ ಯುವಕರು ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಾಕಾರಿ ವಿಡಿಯೋ ಹರಿಬಿಟ್ಟಿದ್ದು, ವಿವಾದಕ್ಕೆ ಗುರಿಯಾಗಿದೆ. ‘15 ನಿಮಿಷ ಪೊಲೀಸರು ಸುಮ್ಮನಿರಲಿ, ಇಸ್ಲಾಂ ಪವರ್ ತೋರಿಸುತ್ತೇವೆ’ ಎಂಬ ಅರ್ಥದ ಹೇಳಿಕೆಯನ್ನು ಪೋಸ್ಟ್‌ನಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: ಬಾಗಲಕೋಟೆ: ಕಲ್ಲು ತೂರಾಟದ ಕಾವು ಆರುವ ಮುನ್ನವೇ ಜಾಲತಾಣದಲ್ಲಿ ಮುಸ್ಲಿಂ ಯುವಕರಿಂದ ವಿವಾದಾತ್ಮಕ ಪೋಸ್ಟ್

ಕಲ್ಲು ತೂರಾಟ ಖಂಡಿಸಿ ಇಂದು ‘ಬೃಹತ್ ಪ್ರತಿಭಟನೆ’ – ನಗರದಾದ್ಯಂತ ಬಿಗಿ ಭದ್ರತೆ:

ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ಪಂಕಾ ಮಸೀದಿ ಬಳಿ ನಡೆದ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆತ ಪ್ರಕರಣ ಈಗ ಜಿಲ್ಲೆಯಲ್ಲಿ ಕಿಚ್ಚು ಹಚ್ಚಿದೆ. ಈ ಘಟನೆಯನ್ನು ಖಂಡಿಸಿ ಇಂದು ಹಿಂದೂಪರ ಸಂಘಟನೆಗಳು ಬಾಗಲಕೋಟೆ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ. ಜಿಲ್ಲೆಯ ವಿವಿಧ ಭಾಗಗಳಿಂದ ಸುಮಾರು 3,000 ರಿಂದ 4,000 ಹಿಂದೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ಪ್ರತಿಭಟನೆ ಮೂಲಕ ಪಂಕಾ ಮಸೀದಿ ಅಧ್ಯಕ್ಷ ಮತ್ತು ಕಮಿಟಿ ಸದಸ್ಯರ ತಕ್ಷಣದ ಬಂಧನ ಮಾಡಬೇಕು ಎಂಬ ಬೇಡಿಕೆಯನ್ನು ಇಡಲಾಗುವುದು. ಹಾಗೂ ಕಲ್ಲು ಮತ್ತು ಚಪ್ಪಲಿ ಎಸೆದ ಕಿಡಿಗೇಡಿಗಳ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಬೇಕು. ತಪ್ಪಿತಸ್ಥರನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆಗ್ರಹ ಮಾಡಲಾಗುವುದು ಎಂದು ಹೇಳಲಾಗಿದೆ. ಇನ್ನು ಈ ಪ್ರತಿಭಟನೆ ಇಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿದ್ದು, ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಸ್‌ಪಿ ಸಿದ್ದಾರ್ಥ ಗೋಯೆಲ್ ನೇತೃತ್ವದಲ್ಲಿ ಭದ್ರತೆ ಕಲ್ಪಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us