ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ಕಲ್ಲು ತೂರಾಟದಲ್ಲಿ ಭಾಗಿಯಾಗಿದ್ದ ಇಬ್ಬರು ಹಿಂದೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ
ಕಲ್ಲು ತೂರಾಟ ಕೇಸ್
Image Credit source: google
Edited By:

Updated on: Feb 21, 2026 | 10:01 PM

ಬಾಗಲಕೋಟೆ, ಫೆಬ್ರವರಿ 21: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಸಂಘರ್ಷಕ್ಕೆ ಬಾಗಲಕೋಟೆ (Bagalkote) ನಗರ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಮೊನ್ನೆ ರಾತ್ರಿಯಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ಮಟನ್ ಮಾರುಕಟ್ಟೆಯ ವ್ಯಾಪ್ತಿ ಕಲ್ಲು ಎಸೆದ ಹಿನ್ನೆಲೆ ಇಬ್ಬರು ಹಿಂದೂ ಕಾರ್ಯಕರ್ತರ ಮೇಲೆ ಎಫ್​ಐಆರ್​​ ದಾಖಲಾಗಿದ್ದು, ಬಾಗಲಕೋಟೆ ನಗರ ಠಾಣೆ ಪೊಲೀಸರಿಂದ ಬಂಧಿಸಲಾಗಿದೆ. ಅಶೋಕ್ ಬಾರಕೇರ (22) ಮತ್ತು ಸಂದೀಪ ಘೆರಡೆ (38) ಬಂಧಿತರು.

ಇಬ್ಬರು ಹಿಂದೂ ಕಾರ್ಯಕರ್ತ ಬಂಧನ

ಗಲಭೆ ಎಬ್ಬಿಸುವ ಉದ್ದೇಶ, ಪೊಲೀಸರ‌ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಖಾಸಗಿ ಆಸ್ತಿಗಳ ಮೇಲೆ ಕಲ್ಲು ತೂರಾಟ ಹಿನ್ನೆಲೆ ಇಬ್ಬರು ಹಿಂದು ಕಾರ್ಯಕರ್ತರನ್ನ ಬಂಧಿಸಲಾಗಿದೆ. ಅಶೋಕ್​ ವಶಕ್ಕೆ ಪಡೆಯಲು ಬೈಕ್​ ಹಿಂಬಾಲಿಸಿದಾಗ ಬಿದ್ದು ಗಾಯ ಮಾಡಿಕೊಂಡಿದ್ದ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದಾರೆ. ಕಲ್ಲು ಎಸೆಯುವ ವಿಡಿಯೋ, ಫೋಟೋ ಸಾಕ್ಷಿ ಆಧರಿಸಿ ಬಂಧಿಸಿರುವ ಪೊಲೀಸರು ಸದ್ಯಕ್ಕೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮುತಾಲಿಕ್, ಪುನೀತ್ ಕೆರೆಹಳ್ಳಿಗೆ ನಿರ್ಬಂಧ

ಕಲ್ಲೆಸೆತ ಕೇಸ್​​ ವಿಚಾರವಾಗಿ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​​  ಮುತಾಲಿಕ್ ಮತ್ತು ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ನಿರ್ಬಂಧ ಹೇರಲಾಗಿದೆ. ಕಾನೂನು ಸುವ್ಯವಸ್ಥೆ ಹಾಗೂ ಸಮಾಜದಲ್ಲಿ ಅಶಾಂತಿ ಹರಡಬಾರದೆಂಬ ಮುನ್ನೆಚ್ಚೆರಿಕೆಯಿಂದ ಕ್ರಮ ಎಂದು ಸಬೂಬು ನೀಡಿ ಡಿಸಿ ಸಂಗಪ್ಪ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಇಂದಿನಿಂದ ಮಾ.21ರವರೆಗೆ ಇಬ್ಬರಿಗೂ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಮುಸ್ಲಿಮರ ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಪ್ರಲ್ಹಾದ್ ಜೋಶಿ ವಾಗ್ದಾಳಿ

ಇನ್ನು ನಿಷೇಧಾಜ್ಞೆ ನಡುವೆ ನವನಗರದಲ್ಲಿ ವಿರಾಟ ಹಿಂದೂ ಸಮಾವೇಶ ಅದ್ಧೂರಿಯಾಗಿ ನಡೆಯಿತು. ಶೋಭಾಯಾತ್ರೆಯಲ್ಲಿ ಪುಟಾಣಿ ಮಕ್ಕಳ ಭಜನೆ ಗಮನ ಸೆಳೆಯಿತು. ಸಂಸದರು, ಮಾಜಿ ಶಾಸಕರು ಯಾತ್ರೆಯಲ್ಲಿ ಭಾಗಿಯಾಗಿದ್ದರು. ಇನ್ನು ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಪರೇಡ್ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:56 pm, Sat, 21 February 26

ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us