AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: ಬಾಗಲಕೋಟೆ ಉದ್ವಿಗ್ನ

ಬಾಗಲಕೋಟೆಯಲ್ಲಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ನಡೆದಿದೆ. ಘಟನೆಯಲ್ಲಿ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಕಲ್ಲು ಎಸೆದವರ ಬಂಧನಕ್ಕೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದು, ಬಾಗಲಕೋಟೆ ಬಂದ್‌ಗೆ ಕರೆ ನೀಡುವ ಎಚ್ಚರಿಕೆ ನೀಡಿದ್ದಾರೆ. ಘಟನೆ ನಗರದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ.

ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: ಬಾಗಲಕೋಟೆ ಉದ್ವಿಗ್ನ
ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟImage Credit source: Tv9 Kannada
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Feb 20, 2026 | 7:20 AM

Share

ಬಾಗಲಕೋಟೆ, ಫೆಬ್ರವರಿ 20: ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿರುವ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೊಲೀಸ್​​ ಸಿಬ್ಬಂದಿ ಸೇರಿ ಓರ್ವ ಸಾರ್ವಜನಿಕರಿಗೆ ಗಾಯವಾಗಿರುವ ಮಾಹಿತಿ ಇದ್ದು, ಕಲ್ಲು ತೂರಾಟ ಹಿನ್ನೆಲೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆ ನಡೆದ ಮರು ಕ್ಷಣವೇ ಜನರನ್ನು ಚದುರಿಸಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದ್ದು, ಮುಂಜಾಗೃತಾ ಕ್ರಮವಾಗಿ ಪಂಕಾ ಮಸೀದಿ ಮತ್ತು ಕೊತ್ತಲೇಶ್ವರ ದೇಗುಲ ಬಳಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಯಾವುದೇ ಅನಾಹುತ ನಡೆಯದಂತೆ ನೋಡಿಕೊಳ್ಳಲು ಪೊಲೀಸ್​​ ಸಿಬ್ಬಂದಿ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ.

ಕಲ್ಲು ತೂರಾಟದ ಹಿನ್ನೆಲೆ ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ ಎಂಬುವರ ತಲೆಗೆ ಗಾಯವಾಗಿದ್ದು, ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಟಿವಿ9ಗೆ ಪ್ರತಿಕ್ರಿಯಿಸಿರುವ ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್,​​ ಶಿವಾಜಿ ಜಯಂತಿ ಮೆರವಣಿಗೆ ಮಸೀದಿ ಬಳಿ ಬಂದಾಗ ಎರಡು ಕಲ್ಲು ಬಂದು ಬಿದ್ದಿವೆ. ಸದ್ಯ ಪರಿಸ್ಥಿತಿ ತಿಳಿಯಾಗಿದ್ದು, ನಾವು ವಿಡಿಯೋಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ಬಾಗಲಕೋಟೆಯಲ್ಲಿ ಹೆಚ್ಚಿನ ಭದ್ರತೆ ‌ಕಲ್ಪಿಸಲಾಗಿದ್ದು,ಆರೋಪಿಗಳನ್ನ ಬಂಧಿಸಲಾಗುತ್ತದೆ. ಸದ್ಯಕ್ಕೆ ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆಕಸ್ಮಿಕವಾಗಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು

ತಳ್ಳು ಗಾಡಿಗಳಿಗೆ ಬೆಂಕಿ

ಕಲ್ಲು ತೂರಾಟದ ವೇಳೆ ತರಕಾರಿ ಮಾರುಕಟ್ಟೆಯ ಮೂರು ತಳ್ಳುಗಾಡಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆಯೂ ನಡೆದಿದೆ. ಎಚ್ಚೆತ್ತ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ, ಕೂಡಲೇ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ವ್ಯಾಪಾರಿ ಜನ್ನತಬಿ ದೊಡ್ಡಮನಿ ಎಂಬ ಮಹಿಳೆ, ನಮ್ಮ ತಳ್ಳುಗಾಡಿ ಸುಟ್ಟಿದ್ದಾರೆ. ಅದರಲ್ಲಿ ಚಿಲ್ಲರೆ ಹಣ ಇದ್ವು,ತಕ್ಕಡಿ ಇದ್ದವು‌ ಎಲ್ಲ ಸುಟ್ಟಿವೆ. ಹೀಗೆ ಮಾಡಿದರೆ ಹೇಗೆ‌ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ ಬಂದ್​​ ಎಚ್ಚರಿಕೆ

ಇನ್ನು ಘಟನೆ ಖಂಡಿಸಿ ಯುವಕರು ರಸ್ತೆಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದು, ಕಲ್ಲೆಸೆದವರ ಬಂಧಿಸಬೇಕು ಮತ್ತು ಐಜಿಪಿ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದ ಪ್ರಸಂಗ ನಡೆದಿದೆ. ಯುವಕರನ್ನು ಮನವೊಲಿಸಿ ಪೊಲೀಸರು ಕಳುಹಿಸಿದ್ದರೂ ಆರೋಪಿಗಳನ್ನು ಅರೆಸ್ಟ್​​ ಮಾಡಿದಿದ್ದಲ್ಲಿ ಬಾಗಲಕೋಟೆ ಬಂದ್​​ಗೆ ಕರೆ ನೀಡುತ್ತೇವೆ ಎಂದು ಹಿಂದೂ ಕಾರ್ಯಕರ್ತರು ಎಚ್ಚರಿಸಿದ್ದಾರೆ.

ನಿಷೇಧಾಜ್ಞೆ ಜಾರಿ

ಕಲ್ಲು, ಚಪ್ಪಲಿ ತೂರಾಟ ಹಿನ್ನೆಲೆ ಫೆ.24ರ ಮಧ್ಯರಾತ್ರಿವರೆಗೆ ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ್ ಈ ಬಗ್ಗೆ ಆದೇಶಿಸಿದ್ದು, ಸಾರ್ವಜನಿಕ ಸ್ಥಳದಲ್ಲಿ 4 ಕ್ಕಿಂತ ಹೆಚ್ಚು ಜನ ಸೇರಿ‌ ತಿರುಗಾಡುವಂತಿಲ್ಲ.ಅಪಾಯಕಾರಿ ಶಸ್ತ್ರಾಸ್ತ್ರ ಹಿಡಿದು ಓಡಾಡುವುದು, ಸುರಕ್ಷತೆಗೆ ಧಕ್ಕೆ ತರುವಂತ ಯಾವುದೇ ಚಟುವಟಿಕೆ ಮತ್ತು ಅನುಮತಿ ಇಲ್ಲದೆ ಯಾವುದೇ ಸಭೆ ಸಮಾರಂಭ ನಡೆಸುವುದು, ಧರಣಿ ನಡೆಸುವುದನ್ನು ನಿಷೇಧಿಸಲಾಗಿರೋದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:43 am, Fri, 20 February 26

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?