AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಕಬ್ಬು ಬೆಳೆಗಾರರ ಪ್ರತಿಭಟನೆಯಲ್ಲಿ ಕಲ್ಲೂ ತೂರಾಟ; ಎಎಸ್​ಪಿಗೆ ಗಾಯ, ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಕಬ್ಬು ಬೆಲೆಗೆ ಆಗ್ರಹಿಸಿ ನಡೆದಿರುವ ರೈತರ ಪ್ರತಿಭಟನೆ ಉಗ್ರ ಸ್ವರೂಪಕ್ಕೆ ತಿರುಗಿದೆ. 100ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳು ಬೆಂಕಿಗಾಹುತಿಯಾಗಿವೆ. ಇನ್ನು ಈ ವೇಳೆ ಕಲ್ಲೂ ತೂರಾಟ ಉಂಟಾಗಿ ಎಎಸ್ಪಿ ಕಾಲಿಗೆ ಗಂಭೀರ ಗಾಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಮೂರು ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬಾಗಲಕೋಟೆ: ಕಬ್ಬು ಬೆಳೆಗಾರರ ಪ್ರತಿಭಟನೆಯಲ್ಲಿ ಕಲ್ಲೂ ತೂರಾಟ; ಎಎಸ್​ಪಿಗೆ ಗಾಯ, ನಿಷೇಧಾಜ್ಞೆ ಜಾರಿ
ಕಬ್ಬು ಬೆಳೆಗಾರರ ಪ್ರತಿಭಟನೆ, ಗಾಯಗೊಂಡ ಎಎಸ್​ಪಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Nov 13, 2025 | 11:00 PM

Share

ಬಾಗಲಕೋಟೆ, ನವೆಂಬರ್​ 13: ಟನ್​ ಕಬ್ಬಿಗೆ 3500 ರೂ ಬೆಲೆ ನೀಡುವಂತೆ ಆಗ್ರಹಿಸಿ ನಡೆಸಿರುವ ಬಾಗಲಕೋಟೆ ಕಬ್ಬು ಬೆಳಗಾರರ ಹೋರಾಟ (Sugarcane Farmers Protest)  ಇಂದು ಉಗ್ರ ಸ್ವರೂಪಕ್ಕೆ ತಿರುಗಿದೆ. ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ಸಾಲಾಗಿ ನಿಲ್ಲಿಸಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಲಾಗಿದೆ. ಇದೇ ವೇಳೆ ಕಲ್ಲೂ ತೂರಾಟ (stone pelting) ಉಂಟಾಗಿ ಬಾಗಲಕೋಟೆ ಎಎಸ್​ಪಿ ಮಹಾಂತೇಶ್ವರ್​ ಜಿದ್ದಿ ಅವರ ಕಾಲಿಗೆ ಗಂಭೀರ ಗಾಯವಾಗಿದೆ.

ಕಲ್ಲೂ ತೂರಾಟ: ಎಎಸ್​ಪಿ ಮಹಾಂತೇಶ್ವರ್​ ಜಿದ್ದಿ ಕಾಲಿಗೆ ಗಂಭೀರ ಗಾಯ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸಮೀರ್​ವಾಡಿಯ ಗೋದಾವರಿ ಕಾರ್ಖಾನೆ ಬಳಿ ಬೆಂಕಿ ಅವಘಡ ಬೆನ್ನಲ್ಲೇ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ಮುಂದಾಗುತ್ತಿದ್ದಂತೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಬಾಗಲಕೋಟೆ ಎಎಸ್​ಪಿ ಮಹಾಂತೇಶ್ವರ್​ ಜಿದ್ದಿ ಅವರ ಕಾಲಿಗೆ ಬಲವಾಗಿ ಕಲ್ಲು ಬಿದ್ದಿದೆ. ಗಂಭೀರ ಗಾಯ ಹಿನ್ನೆಲೆ ತಕ್ಷಣ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಹಾಗೂ ಡಿಸಿ ಸಂಗಪ್ಪ ಜಿಲ್ಲಾ ಪಂಚಾಯತ್ ಸಿಇಓ ಶಶಿಧರ್ ಕುರೇರ ಸೇರಿದಂತೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಎಎಸ್​​ಪಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಮೂರು ದಿನಗಳ‌ ಕಾಲ ನಿಷೇಧಾಜ್ಞೆ ಜಾರಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸಮೀರ್​ವಾಡಿಯ ಗೋದಾವರಿ ಕಾರ್ಖಾನೆ ಆವರಣ ಅಕ್ಷರಶಃ ರಣರಂಗವಾಗಿತ್ತು. 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಜಮಖಂಡಿ, ರಬಕವಿ-ಬನಹಟ್ಟಿ ಮತ್ತು ಮುಧೋಳ ತಾಲೂಕುಗಳಾದ್ಯಂತ ಮೂರು ದಿನಗಳ‌ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಡಳಿತ  ಆದೇಶ ಹೊರಡಿಸಿದೆ.

ದಯವಿಟ್ಟು ಯಾರು ಕೂಡ ತಾಳ್ಮೆ ಕಳೆದುಕೊಳ್ಳಬಾರದು: ಸಚಿವ ತಿಮ್ಮಾಪುರ

ಘಟನೆ ಬಗ್ಗೆ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪುರ ಪ್ರತಿಕ್ರಿಯಿಸಿದ್ದು, ಈಗಾಗಲೇ ಡಿಸಿ ಅವರು ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತರ ಜತೆ ಮೂರರಿಂದ ನಾಲ್ಕು ಬಾರಿ ಸಭೆ ಮಾಡಿದ್ದಾರೆ. ನಾನು ಚರ್ಚೆ ಮಾಡಿ ಬಗೆಹರಿಸುವ ಪ್ರಯತ್ನ ಮಾಡಿದ್ದೇನೆ. ಕೆಲವು ಕಿಡಿಗೇಡಿಗಳು ಟ್ರ್ಯಾಕ್ಟರ್​​ಗಳಿಗೆ ಬೆಂಕಿ ಹಚ್ಚಿದ್ದಾರೆ. ದಯವಿಟ್ಟು ಯಾರು ಕೂಡ ತಾಳ್ಮೆ ಕಳೆದುಕೊಳ್ಳಬಾರದು. ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿದ್ದೇವೆ. ನಾನೂ ರೈತನ ಮಗ, ನನಗೂ ರೈತರ ಕಷ್ಟಗಳು ಗೊತ್ತಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:56 pm, Thu, 13 November 25

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?