ಬಾಗಲಕೋಟೆ: ಶಾಲಾ ಕಾಲೇಜಿಗೆ ತೆರಳಲು ಸಮರ್ಪಕ ಬಸ್ ವ್ಯವಸ್ಥೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಸುಳಿಬಾವಿ ಗ್ರಾಮದ ಬಳಿ ರಸ್ತೆ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಅಮೀನಗಡ- ಗೊರಜನಾಳ ಮಾರ್ಗದಲ್ಲಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಪ್ರತಿ ನಿತ್ಯ ಶಾಲಾ ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗುತ್ತಿತ್ತು.
ಶನಿವಾರವಾಗಿದ್ದರಿಂದ ಮಧ್ಯಾಹ್ನ 12ಕ್ಕೆ ಶಾಲೆ ಬಿಟ್ಟಿದ್ದ ಮಕ್ಕಳು, ಮಧ್ಯಾಹ್ನ 12ರಿಂದ ಬಸ್ಗಾಗಿ ಕಾಯುತ್ತಿದ್ದರು. ಈ ವೇಳೆ, ಸಿಟ್ಟಿಗೆದ್ದ ನೂರಾರು ವಿದ್ಯಾರ್ಥಿಗಳಿಂದ ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ. ನಾಳೆಯಿಂದ ಬಸ್ ವ್ಯವಸ್ಥೆ ಕಲ್ಪಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಕೆಎಸ್ಆರ್ಟಿಸಿ ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದಾರೆ.
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಠ್ಯೇತರ ಚಟುವಟಿಕೆ ಕಡ್ಡಾಯ: ಅಶ್ವತ್ಥ್ ನಾರಾಯಣ ಮಾಹಿತಿ
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಠ್ಯೇತರ ಚಟುವಟಿಕೆ ಕಡ್ಡಾಯ ಆಗಿದೆ. ಎನ್ಇಪಿಯಲ್ಲಿ ಸಾಂಸ್ಕೃತಿಕ ಶಿಕ್ಷಣ, ದೈಹಿಕ ಶಿಕ್ಷಣ, ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡಲಾಗುವುದು ಎಂದು ಬೆಂಗಳೂರಿನಲ್ಲಿ ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ ಇಂದು (ನವೆಂಬರ್ 13) ಹೇಳಿಕೆ ನೀಡಿದ್ದಾರೆ. ಸರ್ಕಾರಿ ಕಾಲೇಜಿನಲ್ಲಿರುವ ವ್ಯವಸ್ಥೆ ಖಾಸಗಿ ವಿವಿಗಳಲ್ಲೂ ಇಲ್ಲ. ಇಡೀ ಭಾರತ ದೇಶವೇ ಬೆಂಗಳೂರಿನಲ್ಲಿ ತಿರುಗಿ ನೋಡುತ್ತಿದೆ. ತಂತ್ರಜ್ಞಾನ, ಆವಿಷ್ಕಾರ ಕ್ಷೇತ್ರದಲ್ಲಿ ಬೆಂಗಳೂರು 23ನೇ ಸ್ಥಾನದಲ್ಲಿ ಇದೆ ಎಂದು ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.
ಕನ್ನಡಿಗರು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಬಾರದು. ವಿಶ್ವದ ಮೂಲೆಮೂಲೆಗಳಲ್ಲೂ ಕನ್ನಡಿಗ ಸಾಧಕರಿದ್ದಾರೆ. ವಿದ್ಯಾರ್ಥಿಗಳು ಇಂಥವರನ್ನು ನೋಡಿ ಪ್ರೇರೇಪಿತರಾಗಬೇಕು. ನಾಡು ನುಡಿ ಚೆನ್ನಾಗಿರಬೇಕೆಂದರೆ ಸದೃಢವಾಗಿ ಬೆಳೆಯಬೇಕು ಎಂದು ಬೆಂಗಳೂರಿನಲ್ಲಿ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಬಾಗಲಕೋಟೆ: ಸಿದ್ದರಾಮಯ್ಯ ಅಭಿಮಾನಿಗೆ ಹೆಚ್ವೈ ಮೇಟಿ ಕಪಾಳಮೋಕ್ಷ!
ಇದನ್ನೂ ಓದಿ: ಬಾಗಲಕೋಟೆ: 415 ಚೀಲ ತೊಗರಿ ಬೇಳೆ ಮಾರಿ ತಲೆಮರೆಸಿಕೊಂಡಿದ್ದ ಇಬ್ಬರು ಅರೆಸ್ಟ್