ಪಾದಚಾರಿಗಳ ಮೇಲೆ ಬಿದ್ದ ಟಿಪ್ಪರ್ ವಾಹನ; ಒಂದೇ ಕುಟುಂಬದ ಐವರು ಸಾವು

ಬಾಗಲಕೋಟೆ(Bagalkote) ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿ : ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬೀಳಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಾದಚಾರಿಗಳ ಮೇಲೆ ಬಿದ್ದ ಟಿಪ್ಪರ್ ವಾಹನ; ಒಂದೇ ಕುಟುಂಬದ ಐವರು ಸಾವು
ಪಾದಚಾರಿಗಳ ಮೇಲೆ ಬಿದ್ದ ಟಿಪ್ಪರ್ ವಾಹನ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 14, 2024 | 9:28 PM

ಬಾಗಲಕೋಟೆ, ಏ.14: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಧಾರುಣ ಘಟನೆ ಬಾಗಲಕೋಟೆ(Bagalkote) ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿ ನಡೆದಿದೆ. ಬಾದದಿನ್ನಿ ಗ್ರಾಮದ ಯಂಕಪ್ಪ ತೋಳಮಟ್ಟಿ,  ಆತನ ಪತ್ನಿ ಯಲ್ಲವ್ವ, ಮಗ ಪುಂಡಲೀಕ, ಮಗಳು ನಾಗವ್ವ ಹಾಗೂ ಗಂಡ ಅಶೋಕ ಬಮ್ಮಣ್ಣವರ ಮೃತರು. ಇವರು ಹೊಲದ‌ ಕೆಲಸ ಮುಗಿಸಿ ರಸ್ತೆಪಕ್ಕ ನಿಂತಿದ್ದರು. ಈ ವೇಳೆ ಟೈರ್ ಬ್ಲಾಸ್ಟ್ ಆಗಿ ಟಿಪ್ಪರ್ ವಾಹನ ಒಂದೇ ಕುಟುಂಬದ ಐವರ ಮೇಲೆ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಬೀಳಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಸುವಿನ ಮೇಲೆ ಚಿರತೆ ದಾಳಿ; ಹಸು ಸಾವು

ಯಾದಗಿರಿ: ತಾಲೂಕಿನ ರಾಮಸಮುದ್ರ ಗ್ರಾಮದ ಮಲ್ಲರೆಡ್ಡಿ ಪೂಜಾರಿ ಅವರ ಜಮೀನಿನಲ್ಲಿ ಹಸುವಿನ ಮೇಲೆ ಚಿರತೆ ದಾಳಿ ಮಾಡಿದ್ದು, ಹಸು ಸಾವನ್ನಪ್ಪಿದೆ. ಮಲ್ಲರೆಡ್ಡಿ ಅವರಿಗೆ ಸೇರಿದ್ದ ಹಸು ಇದಾಗಿದ್ದು, ಹಸುವಿನ ಜೊತೆಗೆ ಎರಡು ಎತ್ತುಗಳ ಮೇಲೂ ದಾಳಿ ನಡೆಸಿದೆ. ಚಿರತೆ ದಾಳಿ ಘಟನೆಯಿಂದ ರೈತರಲ್ಲಿ ಭಯದಲ್ಲಿ ಇದ್ದಾರೆ. ಇನ್ನು ಇಷ್ಟೇಲ್ಲಾ ಘಟನೆ ನಡೆದರೂ ಸ್ಥಳಕ್ಕೆ ಭೇಟಿ ನೀಡದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಶಿರಸಿಯಲ್ಲಿ ಭೀಕರ ಅಪಘಾತ; ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಹರಿದ ಕಾರು

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು‌

ಕಲಬುರಗಿ: ಕಮಲಾಪುರ ಬಳಿ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತದಿಂದ ವಿಜಯಕುಮಾರ್ ಶಿವಶರಣಪ್ಪ ನಾಗನಳ್ಳಿ(45) ಎಂಬುವವರು ಸಾವನ್ನಪ್ಪಿದ ಘಟನೆ ನಡೆದಿದೆ. ಕಲಬುರಗಿ ನಗರದ ಬಿದ್ದಾಪುರ ಕಾಲೋನಿಯ ನಿವಾಸಿ ವಿಜಯಕುಮಾರ್, ಕಲಬುರಗಿಯಿಂದ ಭಾಲ್ಕಿಯಲ್ಲಿನ ತಮ್ಮ ಸಹೋದರಿಯ ಬಳಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ಕೊಂಡ್ಯೊಯುವಾಗಲೇ ಮೃತರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 pm, Sun, 14 April 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ