ಕಬ್ಬು ಕಟಾವು ಕಾರ್ಮಿಕರು ತೆರಳ್ತಿದ್ದ ಟ್ರ್ಯಾಕ್ಟರ್ ಪಲ್ಟಿ: ತಾಯಿ, ಇಬ್ಬರು ಮಕ್ಕಳು ಸಾವು
ಬಾಗಲಕೋಟೆ ಜಿಲ್ಲೆಯ ಕಮತಗಿ ಬಳಿ ಕಬ್ಬು ಕಾರ್ಮಿಕರನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಒಂದು ಪಲ್ಟಿಯಾಗಿ ಭೀಕರ ದುರಂತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ತಾಯಿ ಕೂಡ ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಅಮೀನ್ಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬಾಗಲಕೋಟೆ, ಜನವರಿ 10: ಟ್ರ್ಯಾಕ್ಟರ್ ಪಲ್ಟಿ (Tractor Accident) ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ತಾಯಿ ಕೂಡ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿ ನಡೆದಿದೆ. ತಾಯಿ ರುಕ್ಮಿಣಿ ಬಾಯಿ ನಾಯಕ್(36), ಶಿವಾನಿ ನಾಯಕ್(6) ಮತ್ತು 4 ವರ್ಷದ ರೋಷನ್ ನಾಯಕ್ ಮೃತ ದುರ್ದೈವಿಗಳು. ಸದ್ಯ ಸ್ಥಳಕ್ಕೆ ಅಮೀನ್ಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನಡೆದದ್ದೇನು?
ಕಬ್ಬು ಕಟಾವು ಮಾಡುವ ಐವರು ಕಾರ್ಮಿಕರು ಟ್ರ್ಯಾಕ್ಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಮತಗಿ ಬಳಿ ಹುಕ್ ಕಟ್ ಆಗಿ ಟ್ರ್ಯಾಕ್ಟರ್ ಪಲ್ಟಿ ಹೊಡೆದು ದುರಂತ ಸಂಭವಿಸಿದೆ. ಮೃತಪಟ್ಟ ದುರ್ದೈವಿಗಳು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಾಂಡಾ ನಿವಾಸಿಗಳು.
ಲಾರಿ ಡಿಕ್ಕಿ: ಕಾರು ಚಾಲಕ ಸ್ಥಳದಲ್ಲೇ ದುರ್ಮರಣ; ನಾಲ್ವರಿಗೆ ಗಂಭೀರ ಗಾಯ
ಲಾರಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ನಡೆದಿದೆ. ಕಾರು ಚಾಲಕ ಸೈಮನ್ ಸಾವನ್ನಪ್ಪಿದ್ದು, ಶಕೀಲಾ, ಹ್ಯಾಲಿಸನ್, ಲಿಯೋ, ಇಲಿಯಾಸ್ ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ: ಎಣ್ಣೆ ಮತ್ತಲ್ಲಿ ಡಿವೈಡರ್ ಹಾರಿಸಿದ ಕಾರು ಚಾಲಕ: ಸಾವಿನ ದವಡೆಯಿಂದ 8 ಜನ ಜಸ್ಟ್ ಮಿಸ್!
ಬೆಂಗಳೂರಿನಿಂದ ದಾಬಸ್ಪೇಟೆಗೆ ಕಾರಿನಲ್ಲಿ ತೆರಳುತ್ತಿದ್ದರು. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಬೈಕ್ ಅಪಘಾತ: ಸವಾರ ಸಾವು
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಕಟ್ಟೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ಚೇತನ್ ಮೊಗವೀರ(24) ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ತಮ್ಮ ನಿವಾಸಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ರಸ್ತೆ ಕಾಮಗಾರಿ ವೇಳೆ ಸೂಚನಾಫಲಕ ಅಳವಡಿಕೆ ಮಾಡದಿದ್ದಕ್ಕೆ ಅಪಘಾತ ಸಂಭವಿಸಿರುವ ಆರೋಪ ಕೇಳಿಬಂದಿದೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
