AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್​ಗಳಿಗೆ ಬೆಂಕಿ, ಕಲ್ಲು ತೂರಾಟ ಕೇಸ್: ಮೂರು ಪ್ರತ್ಯೇಕ FIR, ರೈತರ ಮುಂದಿನ ನಡೆ ಕುತೂಹಲ

ಬಾಗಲಕೋಟೆಯ ಮುಧೋಳದಲ್ಲಿ ಕಬ್ಬಿಗೆ ಯೋಗ್ಯ ಬೆಲೆಗಾಗಿ ಕಬ್ಬು ಬೆಳಗಾರರು ಮಾಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಗೋದಾವರಿ ಸಕ್ಕರೆ ಕಾರ್ಖಾನೆ ಮುತ್ತಿಗೆ ಯತ್ನ ವೇಳೆ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಲಾಗಿತ್ತು ಮತ್ತು ಕಲ್ಲು ತೂರಾಟ ನಡೆದಿತ್ತು. ಸದ್ಯ ಘಟನೆಗಳಿಗೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಾಗಿವೆ.

ಟ್ರ್ಯಾಕ್ಟರ್​ಗಳಿಗೆ ಬೆಂಕಿ, ಕಲ್ಲು ತೂರಾಟ ಕೇಸ್: ಮೂರು ಪ್ರತ್ಯೇಕ FIR, ರೈತರ ಮುಂದಿನ ನಡೆ ಕುತೂಹಲ
ಟ್ರ್ಯಾಕ್ಟರ್​ಗಳಿಗೆ ಬೆಂಕಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Nov 16, 2025 | 6:40 PM

Share

ಬಾಗಲಕೋಟೆ, ನವೆಂಬರ್​ 16: ರೈತರು ಕಬ್ಬಿಗೆ ಯೋಗ್ಯ ಬೆಲೆಗಾಗಿ ನಿರಂತರ ಹದಿನೈದು ದಿನ ಪ್ರತಿಭಟನೆ (Farmers’ Protest) ಮಾಡಿದ್ದರು. ಆದರೆ ನವೆಂಬರ್ 13 ರಂದು ಪ್ರತಿಭಟನಾನಿರತರು ಗೋದಾವರಿ ಸಕ್ಕರೆ ‌ಕಾರ್ಖಾನೆಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಇಡಲಾಗಿತ್ತು. ಅಷ್ಟೇ ಅಲ್ಲದೆ ಕಲ್ಲು ತೂರಾಟ ಕೂಡ ನಡೆದಿತ್ತು. ಸದ್ಯ ಈ ಎಲ್ಲಾ ಪ್ರಕರಣಕ್ಕೆ ಸಂಬಧಿಸಿದಂತೆ ಒಟ್ಟು ಮೂರು ಪ್ರತ್ಯೇಕ‌ ಎಫ್​ಐಆರ್ (FIR)​​ ದಾಖಲಾಗಿವೆ.

ಮುಧೋಳ ಈ ವರ್ಷ ‌ಕಬ್ಬಿಗೆ ಯೋಗ್ಯ ಬೆಲೆ ಹೋರಾಟದಿಂದ ರಾಜ್ಯದ ಗಮನ ಸೆಳೆದ ನಗರ. ನಿರಂತರ‌ ಹದಿನೈದು ದಿನಗಳ‌ ಕಾಲ ನಡೆದ ಹೋರಾಟ ನವೆಂಬರ್ 13 ರಂದು ವಿಕೋಪಕ್ಕೆ ತಿರುಗಿತ್ತು. ಮುಧೋಳ‌ ನಗರದಲ್ಲಿ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ಮಾಡಿದ ರೈತರು ಸಂಜೆ ಗೋದಾವರಿ ಸಕ್ಕರೆ ಕಾರ್ಖಾನೆಗೆ ‌ಮುತ್ತಿಗೆ ಹಾಕಲು ಹೊರಟಿದ್ದರು. ಈ ವೇಳೆ ನಡೆಯಬಾರದ ಘಟನೆ ನಡೆದು ಹೋಗಿತ್ತು. ಉದ್ರಿಕ್ತರು ಸಂಗಾನಟ್ಟಿ ಬಳಿ ಎರಡು ಟ್ರೇಲರ್​ನ ಟ್ರ್ಯಾಕ್ಟರ್ ತಳ್ಳಿ ಬೆಂಕಿ ಹಚ್ಚಿದ್ದರು. ನಂತರ‌ ಗೋದಾವರಿ ಕಾರ್ಖಾನೆ ಆವರಣದಲ್ಲಿನ 20ಕ್ಕೂ ಅಧಿಕ ಟ್ರ್ಯಾಕ್ಟರ್​​ಗಳಿಗೆ ಬೆಂಕಿ ಹಚ್ಚಲಾಗಿತ್ತು. ಐದು ಬೈಕ್​​ ಬೆಂಕಿಗಾಹುತಿಯಾಗಿದ್ದವು.

ಇದನ್ನೂ ಓದಿ: ಕಬ್ಬು ತುಂಬಿದ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣ; 10 ಜನ ‌ಪೊಲೀಸರ ವಶಕ್ಕೆ

ಇನ್ನು ಘಟನೆ ವೇಳೆ ಕಲ್ಲು ತೂರಾಟ ನಡೆದಿತ್ತು. ಇದೇ ವೇಳೆ ಎಎಸ್​ಪಿ ಮಹಾಂತೇಶ್ವರ ಜಿದ್ದಿ ಅವರ ಕಾಲು‌ ಮುರಿದಿತ್ತು. ಈ ಹಿನ್ನೆಲೆ ಘಟನೆಗೆ ಸಂಬಂಧಿಸಿದಂತೆ‌ ಮಹಾಲಿಂಗಪುರ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್​ಐಆರ್​ ದಾಖಲಾಗಿವೆ. ಅದರಲ್ಲೂ ಕಾರ್ಖಾನೆ‌ ಪರ ಬಂದ ಐವರ ವಿರುದ್ಧ ಪೊಲೀಸ್ ಅಧಿಕಾರಿಗಳ ಕೊಲೆ ಯತ್ನ ಎಂದು ಎಫ್​ಐಆರ್ ದಾಖಲಾಗಿದೆ.

ಐವರು ಜನರು ಪೊಲೀಸ್​​ ವಶಕ್ಕೆ

ಹಾಗಾದರೆ ದಾಖಲಾಗಿರುವ ಎಫ್​​ಐಆರ್​ 1ರಲ್ಲಿ‌ ಏನಿದೆ ಅಂತ ನೋಡುವುದಾದರೆ, ಸಮೀರವಾಡಿ ಕಾರ್ಖಾನೆ ಪರವಾಗಿ ಬಂದಿದ್ದ 5 ಜನರು ಪೊಲೀಸ್ ಅಧಿಕಾರಿಗಳ ಕೊಲೆಗೆ ಯತ್ನಿಸಿರುವುದಾಗಿ ಮಹಾಲಿಂಗಪುರ ಪಿಎಸ್ಐ ಕಿರಣ ಸತ್ತಿಗೇರಿ ದೂರಿನ ಮೇರೆಗೆ ಎಫ್​ಐಆರ್​​ ದಾಖಲಾಗಿದೆ. ಕರ್ತವ್ಯನಿರತ ಎಎಸ್​ಪಿ ಮಹಾಂತೇಶ್ವರ ಜಿದ್ದಿ, ಬನಹಟ್ಟಿ ಸಿಪಿಐ ಹೆಚ್ ಆರ್ ಪಾಟಿಲ್, ತೇರದಾಳ ಪಿಎಸ್ ಶಿವಾನಂದ ಸಿಂಗನ್ನವರ ಕರ್ತವ್ಯ ನಿರ್ವಹಣೆ ವೇಳೆ ತಳ್ಳಾಟ, ನೂಕಾಟ‌ ಮಾಡಿ ಕಲ್ಲು ತೂರಾಟ ನಡೆಸಿ, ಕೊಲೆ‌ ಮಾಡಲು ಯತ್ನಿಸಿದ್ದಾಗಿ ಪ್ರಭು ತಂಬೂರಿ, ಯಂಕಪ್ಪ ಕೇದಾರಿ, ವಿಠಲ ಹೊಸಮನಿ, ದಸ್ತಗಿರಿ ಸಾಬ್ ನದಾಫ್, ಶಿವಲಿಂಗ ಶಿಂಧೆ ಸೇರಿದಂತೆ 150 ಜನರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಕಾರ್ಖಾನೆ ಬೆಂಬಲಕ್ಕೆ ಬಂದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಕಲ್ಲು ತೂರಾಟ, ಪೊಲೀಸರಿಗೆ ಗಾಯ, ಪೊಲೀಸ್ ವಾಹನ ಜಖಂಗೊಳಿಸಿದ ಆರೋಪ ಹಿನ್ನೆಲೆ ಕಾರ್ಖಾನೆ ಪರವಾಗಿದ್ದ ಗುಂಪಿನ 5 ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.

ಎಫ್​ಐಆರ್​ 2ರಲ್ಲಿ ಹೋರಾಟದ ಮುಂದಾಳತ್ವ ವಹಿಸಿದ್ದ ರೈತರ ಮೇಲೆ ಎಫ್​​ಐಆರ್ ದಾಖಲಿಸಲಾಗಿದೆ. ರಾಜ್ಯ ರೈತಸಂಘದ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ, ಸುಭಾಷ್ ಶಿರಬೂರ, ಈರಪ್ಪ ಹಂಚಿನಾಳ, ಮುತ್ತಪ್ಪ ಕೋಮಾರ, ಹನುಮಂತ ಗೌಡ ಪಾಟಿಲ್, ದುಂಡಪ್ಪ ಯರಗಟ್ಟಿ, ಬಸಪ್ಪ ಸಂಗಣ್ಣವರ, ಸುರೇಶ್ ಚಿಂಚಲಿ, ಸದಾಶಿವ ಸಕರೆಡ್ಡಿ, ರಾಚಪ್ಪ ಕಲ್ಲೊಳ್ಳಿ, ಗಂಗಾಧರ‌ ಮೇಟಿ, ಮಹೇಶ್ ಗೌಡ ಪಾಟಿಲ್, ಹನುಮಂತ ನಬಾಬ್‌ ಸೇರಿದಂತೆ ಸೇರಿದಂತೆ 17 ಜನರ ವಿರುದ್ಧ ತೇರದಾಳ ಪಿಎಸ್​ಐ ಶಿವಾನಂದ ಸಿಂಗನ್ನವರ ದೂರಿನ ಮೇರೆಗೆ ಸಾರ್ವಜನಿಕ ಆಸ್ತಿ ಹಾನಿಯಡಿ ಎಫ್​​​ಐಆರ್​​ ದಾಖಲಿಸಲಾಗಿದೆ.

ಎಫ್​ಐಆರ್​ 3 ಪ್ರಕಾರ ಕಾರ್ಖಾನೆ ಸಿಬ್ಬಂದಿಯಿಂದ ಒಂದು ಎಫ್​ಐಆರ್ ಆಗಿದೆ. 100 ರಿಂದ150 ಅಪರಿಚಿತರ ವಿರುದ್ಧ ಕಾರ್ಖಾನೆ ಸಿಬ್ಬಂದಿ ಮಲ್ಲಿಕಾರ್ಜುನ ಗುಗ್ಗರಿ ಎಂಬುವರಿಂದ ಎಫ್​ಐಆರ್​ ದಾಖಲಿಸಲಾಗಿದೆ. ಬಿಎನ್ ಎಸ್ 189(2),191(2),191(3),324(4),324(5),190 ಕಾರ್ಖಾನೆ ಆವರಣದೊಳಗೆ‌ ನುಗ್ಗಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಹಾಗೂ ಬೈಕ್​​ಗಳಿಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ಮಾಡಿದ್ದಾರೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಮುಧೋಳದಲ್ಲಿ ರೈತರ ಹೋರಾಟ ಸುಖಾಂತ್ಯ: ರಿಕವರಿ ಪರಿಗಣಿಸದೆ ಟನ್ ಕಬ್ಬಿಗೆ 3300 ರೂ. ದರಕ್ಕೆ ಒಪ್ಪಿಗೆ

ಕಿಡಿಗೇಡಿಗಳ‌ ಕೃತ್ಯ ಎಂದು ಸಕ್ಕರೆ ಸಚಿವರು, ಬಾಗಲಕೋಟೆ ಉಸ್ತುವಾರಿ ಸಚಿವರು ಹೇಳಿದ್ದಾರೆ. ಹಾಗಾದರೆ ರೈತ ಮುಖಂಡರ‌ ಮೇಲೆ ಏಕೆ ಎಫ್​ಐಆರ್ ಮಾಡಿದರು. ರೈತರು ಕಿಡಿಗೇಡಿಗಳಾ ಎಂದು ರೈತರು ಗರಂ ಆಗಿದ್ದಾರೆ. ಕೇಸ್​ ಹಿನ್ನೆಲೆ ಮುಧೋಳ ಜಿಎಪ್ ಬಿಸಿಐಬಿಯಲ್ಲಿ ಸಭೆ ಮಾಡಿದ ರೈತರು, ಆರೋಪ ತಳ್ಳಿ ಹಾಕಿದ್ದಾರೆ.

ಕಲ್ಲು ಹೊಡೆಯುವರು, ಬೆಂಕಿ ಹಚ್ಚುವವರು ನಾವಲ್ಲ: ಬಸವಂತಪ್ಪ ಕಾಂಬಳೆ

ಈ ವೇಳೆ ಮಾತಾಡಿದ ರೈತ ಮುಖಂಡ ಬಸವಂತಪ್ಪ ಕಾಂಬಳೆ, ಈಗಾಗಲೇ 11 ಜನರನ್ನ ಅರೆಸ್ಟ್ ಮಾಡಿದ್ದಾರೆ. ತಕ್ಷಣ ಅವರನ್ನು ಬಿಡುಗಡೆ ಮಾಡಬೇಕು. ಮುಧೋಳ ಕಬ್ಬು ಹೋರಾಟ ಇಡೀ ರಾಜ್ಯಕ್ಕೆ ಮಾದರಿ ಹೋರಾಟದ ಉದಾಹರಣೆ ಇದೆ. ಮುಧೋಳ ಹೋರಾಟ ಪ್ರಾರಂಭವಾದರೆ ರಾಜಕಾರಣಿಗಳಿಗೆ ಜ್ವರ ಬರುತ್ತೆ. ಆ ದೃಷ್ಟಿಯಿಂದ ರಾಜಕಾರಣಿಗಳ ತಂತ್ರಗಾರಿಕೆ ಇರಬಹುದು. ಕಾರ್ಖಾನೆ ಮಾಲೀಕರು ಬಹಳಷ್ಟು ಹಿಂಸೆ ಮಾಡಿದ್ದಾರೆ. ಜನ ಒಪ್ಪುವುದಿಲ್ಲ. ಕಲ್ಲು ಹೊಡೆಯುವರು ನಾವಲ್ಲ, ಬೆಂಕಿ ಹಚ್ಚುವವರು ನಾವಲ್ಲ. ರೈತರಿಗೆ ನ್ಯಾಯ ಕೊಡಿಸುವ ಹೋರಾಟ ಇದು. ಸಚಿವರು ಜಿಲ್ಲಾಡಳಿತದೊಂದಿಗೆ ಸಂಧಾನ ಮಾಡಿ ಬಗೆಹರಿಸಿದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದಿದ್ದಾರೆ.

ಒಟ್ಟಿನಲ್ಲಿ ರೈತರ ಹೋರಾಟ ವಿಕೋಪಕ್ಕೆ ತಿರುಗಿ ಎಫ್​​​ಐಆರ್​​ ದಾಖಲಾಗುವ ಹಂತಕ್ಕೆ ಬಂದಿದೆ. ಇದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಮುಂದೆ ರೈತರು ಯಾವ ಹೆಜ್ಜೆ ‌ಇಡಲಿದ್ದಾರೆ ಎಂಬುದು ಸದ್ಯ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ